ಪೊಲೀಸ್ ಹುದ್ದೆಗೆ ಕರಾವಳಿಯಿಂದ ಕಡಿಮೆ ಅರ್ಜಿ
Team Udayavani, Dec 14, 2021, 11:15 PM IST
ಬೆಳಗಾವಿ: ಪೊಲೀಸ್ ಪೇದೆ ಹುದ್ದೆಗಳಿಗೆ ಕರಾವಳಿ ಜಿಲ್ಲೆಗಳಿಂದ ತೀರಾ ಕಡಿಮೆ ಅರ್ಜಿ ಬರುತ್ತಿದ್ದು, ಸ್ಥಳೀಯ ಅಭ್ಯರ್ಥಿಗಳ ನೇಮಕಕ್ಕೆ ಇದರಿಂದ ಸಮಸ್ಯೆಯಾಗುತ್ತಿದೆ. ಕರಾವಳಿಯ ಯುವ ಜನತೆ ಪೊಲೀಸ್ ಪೇದೆ ಹುದ್ದೆಗೆ ಅರ್ಜಿ ಸಲ್ಲಿಸುವಂತೆ ಶಾಸಕರು ವಿಶೇಷ ಗಮನ ಹರಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಪೊಲೀಸ್ ಪೇದೆಗಳ ಆಯ್ಕೆ ಹಾಗೂ ಎಸ್‌ಪಿ ಕಚೇರಿ ಸ್ಥಳಾಂತರ ಕುರಿತು ಬಿಜೆಪಿ ಸದಸ್ಯ ಸಂಜೀವ ಮಠಂದೂರ್ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪೊಲೀಸ್ ಪೇದೆಗಳ ನೇಮಕಾತಿಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ 3.60 ಲಕ್ಷ ಅರ್ಜಿ ಸಲ್ಲಿಕೆಯಾಗಿದೆ. ಇದರಲ್ಲಿ ಕರಾವಳಿ ಜಿಲ್ಲೆಗಳ ಪಾಲು ಅತ್ಯಂತ ಕಡಿಮೆಯಾಗಿದೆ.
ಹೀಗಾಗಿ ಅಲ್ಲಿನ ಪೊಲೀಸ್ ಠಾಣೆಗೆ ಸ್ಥಳೀಯ ಅಭ್ಯರ್ಥಿಗಳ ನೇಮಕ ಸಾಧ್ಯವಾಗುತ್ತಿಲ್ಲ. ಕರಾವಳಿ ಜಿಲ್ಲೆಗಳಲ್ಲಿ ಸುಮಾರು 4 ಸಾವಿರ ಹುದ್ದೆಗಳು ಖಾಲಿ ಉಳಿಯುತ್ತಿವೆ. ಈ ನಿಟ್ಟಿನಲ್ಲಿ ಸ್ಥಳೀಯ ಶಾಸಕರು ತಮ್ಮ ವ್ಯಾಪ್ತಿಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಹುದ್ದೆಗೆ ಅರ್ಜಿ ಸಲ್ಲಿಸುವಂತೆ ಮಾಡಲು ವಿಶೇಷ ಗಮನ ಹರಿಸಬೇಕು ಎಂದು ಹೇಳಿದರು.
ಕೃಪಾಂಕ ನೀಡಿ
ಸ್ಥಳೀಯ ಯುವಜನತೆಗೆ ನೇಮಕಾತಿಯಲ್ಲಿ ಆದ್ಯತೆ ನೀಡಲು ಕೃಪಾಂಕ ಕೊಡುವ ಬಗ್ಗೆಯೂ ಚಿಂತನೆ ನಡೆಸಬೇಕು. ಜತೆಗೆ ಪೊಲೀಸ್ ಅಧೀಕ್ಷಕರ ಕಚೇರಿಯು ಗ್ರಾಮೀಣ ಭಾಗದಿಂದ ನೂರು ಕಿ.ಮೀಗೂ ದೂರವಿದೆ. ಇದರಿಂದ ಗ್ರಾಮೀಣ ಜನರಿಗೆ ತೊಂದರೆಯಾಗುತ್ತದೆ. ಇದನ್ನು ತಪ್ಪಿಸಲು ಎಸ್‌ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸಬೇಕು ಎಂದು ಸಂಜೀವ ಮಠಂದೂರು ಮನವಿ ಮಾಡಿದರು.
ಇದನ್ನೂ ಓದಿ:ಬಿಜೆಪಿ ಸರ್ಕಾರ ಒಂದೇ ಒಂದು ಮನೆ ಕೊಟ್ಟಿಲ್ಲ
ಪರಿಶೀಲಿಸಿ ಕ್ರಮ
ದ.ಕ. ಜಿಲ್ಲಾ ಕೇಂದ್ರದಲ್ಲಿರುವ ಪೊಲೀಸ್ ಅಧೀಕ್ಷಕರ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವ ಸಂಬಂಧ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಿದ್ದೇವೆ. ಎಸ್‌ಪಿ ಕಚೇರಿ ಜತೆಗೆ ಡಿಆರ್ ಕೂಡ ಸ್ಥಳಾಂತರ ಮಾಡಬೇಕಾಗುತ್ತದೆ. ಹೀಗಾಗಿ ತತ್‌ಕ್ಷಣ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.