ಮೋದಿ ಮತೊಮ್ಮೆ ಪ್ರಧಾನಿಯಾಗಲಿ; ಚಕ್ರವರ್ತಿ ಸೂಲಿಬೆಲೆ
Team Udayavani, Feb 15, 2024, 5:06 PM IST
ಉದಯವಾಣಿ ಸಮಾಚಾರ
ಚನ್ನಮ್ಮನ ಕಿತ್ತೂರು: ಐತಿಹಾಸಿಕ ಕಿತ್ತೂರು ಹೋರಾಟದ ನೆಲ. 1857ರಲ್ಲಿ ನಡೆದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕಿಂತ 25 ವರ್ಷಗಳ ಮೊದಲು ಈ ನೆಲದಲ್ಲಿ ರಾಣಿ ಚನ್ನಮ್ಮ ಸ್ವಾತಂತ್ರ್ಯ ಹೋರಾಟದ ಕಿಚ್ಚು ಹಚ್ಚಿ ಕ್ರಾಂತಿಯ ಕಹಳೆ ಊದಿದ್ದಳು ಎಂದು ವಾಗ್ಮಿ, ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.
ಪಟ್ಟಣದ ಶ್ರೀ ಗುರುಸಿದ್ದೇಶ್ವರ ಪ್ರೌಢಶಾಲೆ ಆವರಣದಲ್ಲಿ ನಡೆದ ಜೈ ಶ್ರೀರಾಮ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ
ಮಾಡಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೂರನೇ ಬಾರಿ ಮತ್ತೆ ಪ್ರಧಾನಿಯಾಗಬೇಕು. ಅವರ ನೇತೃತ್ವದಲ್ಲಿ ಭಾರತ ವಿಶ್ವಗುರುವಾಗಬೇಕು. ಅದಕ್ಕಾಗಿ ನಮ್ಮ ನಮೋ ಬ್ರಿಗೇಡ್ ಹಗಲಿರಳು ಶ್ರಮ ವಹಿಸುತ್ತಿದೆ. ಕಳೆದ 60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ದೇಶದ ಅಭಿವೃದ್ಧಿ ಮಾಡಲಿಲ್ಲ, ಬದಲಾಗಿ ತಮ್ಮ ತಮ್ಮ ಕುಟುಂಬಗಳ ಅಭಿವೃದ್ಧಿ ಮಾಡಿಕೊಂಡಿತು.
ಮೊದಲು ಭಾರತಕ್ಕೆ ಆಗಮಿಸಿದ ವಿದೇಶಿಗರು ತಾಜ್ ಮಹಲ್ ನೋಡಲು ಹೋಗುತ್ತಿದ್ದರು. ಆದರೆ ಇಂದು ಅವರು ಅಯೋಧ್ಯೆಗೆ ಹೋಗುವಂತೆ ಪ್ರಧಾನಿ ಮೋದಿ ಮಾಡಿದ್ದಾರೆ ಎಂದರು.
ನಿಚ್ಚಣಕಿ ಮಡಿವಾಳೇಶ್ವರ ಮಠದ ಶ್ರೀ ಪಂಚಾಕ್ಷರಿ ಸ್ವಾಮಿಗಳು, ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮಡಿವಾಳ ರಾಜಯೋಗೇಂದ್ರ ಸ್ವಾಮಿಗಳು ಮಾತನಾಡಿ, ಜಗತ್ತಿನಲ್ಲಿ ಪ್ರಧಾನಿ ಮೋದಿ ಹಾಗೂ ಅಯೋಧ್ಯೆಯ ಶ್ರೀ ರಾಮನ ಹೆಸರುಗಳು ಮೇಲಿಂದ ಮೇಲೆ ಕೇಳಿ ಬರುತ್ತಿದ್ದು, ಭಾರತ ದೇಶ ಉಳಿದು, ಬೆಳೆಯಬೇಕಾದರೆ ನರೇಂದ್ರ ಮೋದಿ ಅವರು ಮತ್ತೂಮ್ಮೆ ಪ್ರಧಾನ ಮಂತ್ರಿ ಆಗಬೇಕು ಎಂದರು.
ನಮೋ ಬ್ರಿಗೇಡ್ ಸಂಚಾಲಕ ವರ್ಧಮಾನ ತ್ಯಾಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂತೋಷ ಮಾದರ ಓಂಕಾರ ಮಂತ್ರ ಹೇಳಿದರು. ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ, ಕೆಎಮ್‌ಎಫ್ ನಿರ್ದೇಶಕ ಡಾ ಬಸವರಾಜ ಪರವಣ್ಣವರ, ಬಿಜೆಪಿ ಮುಖಂಡರು, ವಿಶ್ವ ಹಿಂದೂ ಪರಿಷತ್, ಆರ್‌ಎಸ್‌ಎಸ್, ಶ್ರೀ ರಾಮ ಸೇನೆ, ನಮೋ ಬ್ರಿಗೇಡ್ ಹಾಗೂ ಭಜರಂಗ ದಳದ
ಕಾರ್ಯಕರ್ತರು, ಪಟ್ಟಣದ ನಾಗರಿಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Belagavi: ಗಾಂಧಿ ಭಾರತ ಹಿನ್ನೆಲೆ ಡಿ. 26, 27 ರಂದು ಕೆಲ ಶಾಲೆಗಳಿಗೆ ರಜೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.