ವಿದ್ಯಾರ್ಥಿಗಳು ಸಂಶೋಧನೆಯತ್ತ ಒಲವು ತೋರಲಿ

ಈ ಪ್ರಗತಿಗೆ ಉಪನ್ಯಾಸಕ ಬಳಗ, ಕಾಲೇಜು ಅಭಿವೃದ್ಧಿ ಸಮಿತಿ ಪಾತ್ರ ಹಿರಿದಾಗಿದೆ ಎಂದರು.

Team Udayavani, Feb 12, 2022, 3:20 PM IST

ವಿದ್ಯಾರ್ಥಿಗಳು ಸಂಶೋಧನೆಯತ್ತ ಒಲವು ತೋರಲಿ

ಬೈಲಹೊಂಗಲ: ದೇಶದ ಭವಿಷ್ಯ ರೂಪಿಸುವ ವಿದ್ಯಾರ್ಥಿಗಳು ಇಂದಿನ ವೈಜ್ಞಾನಿಕ ಯುಗದಲ್ಲಿ ಕಷ್ಟಪಟ್ಟು ಅಧ್ಯಯನ ಮಾಡುತ್ತ ವಿಜ್ಞಾನದತ್ತ
ಒಲವು ತೋರಿ ಸಂಶೋಧನೆಯಲ್ಲಿ ತೊಡಗಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.

ಪಟ್ಟಣದ ಡಾ| ಬಿ.ಆರ್‌. ಅಂಬೇಡ್ಕರ್‌ ಉದ್ಯಾನವನ ಹತ್ತಿರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೂತನ ಪ್ರಯೋಗಾಲಯ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರ ಮಕ್ಕಳ ಉಜ್ವಲ ಭವಿಷ್ಯ ನಿರ್ಮಾಣಕ್ಕಾಗಿ ಶೈಕ್ಷಣಿಕವಾಗಿ ಪ್ರತಿ ವರ್ಷ ಸಾವಿರಾರು ಕೋಟಿ ರೂ. ವೆಚ್ಚ ಮಾಡುತ್ತಿದ್ದು, ಸಮರ್ಪಕವಾಗಿ
ಸದ್ಬಳಕೆ ಮಾಡಿಕೊಂಡು ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕು. ಆಧುನಿಕ ತಂತ್ರಜ್ಞಾನದಲ್ಲಿ ಪಠ್ಯಪುಸ್ತಕಗಳಲ್ಲಿ ಹೊಸ ಹೊಸ ಆವಿಷ್ಕಾರಗಳು
ಬರುತ್ತಿದ್ದು ವಿದ್ಯಾರ್ಥಿಗಳು ಇವುಗಳನ್ನು ಮನದಟ್ಟು ಮಾಡಿಕೊಂಡು ಅಧ್ಯಯನ ಮಾಡಬೇಕು ಎಂದರು.

ವಿದ್ಯಾರ್ಥಿ ಜೀವನ ಅಮೂಲ್ಯವಾಗಿದ್ದು ಶಿಕ್ಷಣದೊಂದಿಗೆ ಸಾಮಾಜಿಕ, ಧಾರ್ಮಿಕ, ಆಧ್ಯಾತ್ಮಿಕ ಕಳಕಳಿ ಹೊಂದಿ ಸಮಾಜಮುಖೀಯಾಗಿ ಕೆಲಸ ನಿರ್ವಹಿಸಬೇಕು. ಯುವ ಜನಾಂಗ ರಾಷ್ಟ್ರದ ಸಂಪತ್ತು. ದುಶ್ಚಟಗಳಿಗೆ ದಾಸರಾಗದೇ ಸದೃಢ ಆರೋಗ್ಯ ಕಾಪಾಡಿಕೊಂಡು ರಾಷ್ಟ್ರಪ್ರೇಮ ಮೈಗೊಡಿಸಿಕೊಳ್ಳಬೇಕು. ಸರ್ಕಾರಿ ಕಾಲೇಜಿನಲ್ಲಿ ಸುಸಜ್ಜಿತ ಪ್ರಯೋಗಾಲಯ ಸ್ಥಾಪಿಸಿದ್ದು ವಿದ್ಯಾರ್ಥಿಗಳು ಇದರ ಸದ್ಬಳಕೆ ಮಾಡಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಂಡು ನಾಡಿಗೆ ಕೀರ್ತಿ ತರಬೇಕು. ಕಾಲೇಜು ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಶಾಸಕ ಮಹಾಂತೇಶ ಕೌಜಲಗಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕಾರಣ ಮಕ್ಕಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಈ ಪ್ರಗತಿಗೆ ಉಪನ್ಯಾಸಕ ಬಳಗ, ಕಾಲೇಜು ಅಭಿವೃದ್ಧಿ ಸಮಿತಿ ಪಾತ್ರ ಹಿರಿದಾಗಿದೆ ಎಂದರು.

ಈ ವೇಳೆ ಉಪ ವಿಭಾಗಾಧಿಕಾರಿ ಡಾ| ಶಶಿಧರ ಬಗಲಿ, ತಹಶೀಲ್ದಾರ್‌ ಬಸವರಾಜ ನಾಗರಾಳ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ
ಅಶೋಕ ವಾಲಿ, ಸದಸ್ಯರಾದ ಶ್ರೀಶೈಲ ಮೊರಬದ, ವೀರಣ್ಣ ಜವಳಿ, ಈರಣ್ಣ ಬೆಟಗೇರಿ, ಅಂಬಿಕಾ ಕೊಟಬಾಗಿ, ಆರ್‌.ಕೆ. ಪಾಟೀಲ ಇದ್ದರು.
ಉಪನ್ಯಾಸಕ ಬಸವರಾಜ ಪುರಾಣಿಕಮಠ ಮಾತನಾಡಿದರು. ಪ್ರಾಚಾರ್ಯ ಪುಂಡಲೀಕ ಕಾಂಬಳೆ ಸ್ವಾಗತಿಸಿದರು. ಬಸವರಾಜ ಅಡಿಕೆ ನಿರೂಪಿಸಿದರು. ಮುಕ್ತಾ ಹುಡೇದ ಪ್ರಾರ್ಥಿಸಿದರು. ಉಪನ್ಯಾಸಕ ಬಿ.ಎಂ. ಕೊಳವಿ ವಂದಿಸಿದರು.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.