ಬೆಳೆ ಖರೀದಿ ಸಂಸ್ಥೆಗಳ ಮೇಲೆ ಸರ್ಕಾರ ಹಿಡಿತ ಸಾಧಿಸಲಿ
Team Udayavani, Oct 9, 2020, 5:06 PM IST
ಮೂಡಲಗಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳ ಎ.ಪಿ.ಎಂ.ಸಿ ಮತ್ತುಭೂ ಸುಧಾರಣಾ ಕಾಯ್ದೆ ತಿದ್ದುಪಡಿ ರೈತ ವರ್ಗಕ್ಕೆ ಪೂರಕವೋ ಅಥವಾ ಮಾರಕವೋ ಎಂಬ ಕುರಿತು ವಿಚಾರ ಸಂಕೀರಣ ಕರ್ನಾಟಕ ನವ ನಿರ್ಮಾನ ಸೇನೆಯ ಮೂಡಲಗಿ ತಾಲೂಕಾ ಘಟಕ ಆಶ್ರಯದಲ್ಲಿ ನಾಗನೂರ ಅರ್ಬನ್ ಸೊಸೈಟಿ ಸಭಾ ಭವನದಲ್ಲಿ ಜರುಗಿತು.
ರೈತ ಮುಖಂಡ ಚುನ್ನಪ್ಪ ಪೂಜೇರಿ ಮಾತನಾಡಿ, ರಾಜ್ಯದಲ್ಲಿ ಜಾರಿ ಆಗಲಿರುವ ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿಯು ಮಧ್ಯವರ್ತಿಗಳಿಂದ ಮುಕ್ತಗೊಳಿಸುವ ನೆಪದಲ್ಲಿ ರೈತರನ್ನು ಸಂಕಷ್ಟಕ್ಕೆ ದೂಡುತ್ತಿದೆ. ಈಗಾಗಲೇ ಕಬ್ಬನ್ನು ಖಾಸಗಿ ಕಂಪನಿಗಳಿಗೆ ನೀಡಿ ರೈತರು ಅನುಭವಿಸುತ್ತಿರುವ ಗೋಳು ಕೇಳುವವರಿಲ್ಲ. ತಿದ್ದುಪಡಿ ಅನಿವಾರ್ಯವೇ ಆಗಿದ್ದರೆ ಬೆಳೆಯನ್ನು ಖರೀದಿಸುವ ಕಾರ್ಪೊರೇಟ್ ಕಂಪನಿಗಳ ಮೇಲೆ ಸರ್ಕಾರ ಪೂರ್ಣ ಹಿಡಿತ ಹೊಂದಿರಬೇಕು. ಇನ್ನು ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯು ಕೃಷಿ ಕ್ಷೇತ್ರಕ್ಕೆ ಬಹುದೊಡ್ಡ ಹೊಡೆತವೇ ಸರಿ. ಕೃಷಿ ಹೆಸರಿನಲ್ಲಿ ಭೂಮಿಖರೀದಿಸುವ ಕಾರ್ಪೊರೇಟ್ ಕಂಪನಿಗಳು ಕಾಲಕ್ರಮೆಣ ಉದ್ಯಮಕ್ಕೆ ಬಳಸಿಕೊಳ್ಳುವ ಮೂಲಕ ಕೃಷಿ ಕ್ಷೇತ್ರಕ್ಕೆ ಕೊಡಲಿ ಪೆಟ್ಟು ನೀಡಲಿವೆ ಎಂದರು. ಮಲ್ಲಪ್ಪ ಮದಗುಣಕಿ ಮಾತನಾಡಿ, ಮಧ್ಯವರ್ತಿಗಳ ಹಾವಳಿಯಿಂದ ಮುಕ್ತರಾಗಿ ರೈತರು ನೇರವಾಗಿ ಮಾರುಕಟ್ಟೆಯಲ್ಲಿ ಬೆಳೆಯನ್ನು ಮಾರಾಟ ಮಾಡಲು ಸರಕಾರವು ಎ.ಪಿ.ಎಂ.ಸಿ ಕಾಯ್ದೆ ತಿದ್ದುಪಡಿ ಮಾಡಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ತುಕ್ಕಾನಟ್ಟಿ ಬರ್ಡ್ಸ ಸಂಸ್ಥೆಯ ಅಧ್ಯಕ್ಷ ಎ.ಆರ್ ಪಾಟೀಲ್ ಮಾತನಾಡಿ, ಕರ್ನಾಟಕ ನವನಿರ್ಮಾಣ ಸೇನೆಯ ಪ್ರಯತ್ನ ಶ್ಲಾಘಿಸಿ ಈ ಚರ್ಚೆಯನ್ನು ಸರ್ಕಾರಕ್ಕೆ ಮುಟ್ಟಿಸುವುದಾಗಿ ತಿಳಿಸಿದರು.
ಉಮೇಶ ಬೆಳಕೂಡ, ಬಿಜೆಪಿ ರೈತಮೋರ್ಚಾ ಅರಭಾಂವಿ ಮಂಡಲ ಪ್ರದಾನ ಕಾರ್ಯದರ್ಶಿ ಶ್ರೀಕಾಂತ ಕೌಜಲಗಿ ಮಾತನಾಡಿದರು.ಈಸಂದರ್ಭದಲ್ಲಿ ಕರ್ನಾಟಕ ನವನಿರ್ಮಾಣ ಸೇನೆಯ ತಾಲೂಕು ಉಪಾಧ್ಯಕ್ಷ ಮಹಾಂತೇಶ ಮುಗಳಖೋಡ, ಪ್ರಧಾನ ಕಾರ್ಯದರ್ಶಿ ಶಾನೂರ ಕುರಬೇಟ, ಬಸವರಾಜ ನಾಯ್ಕ, ಶಿವಾನಂದ ಮೇಣಸಿ, ಸಾಗರ ಢವಳೇಶ್ವರ, ರಾಘವೇಂದ್ರ ಮುನ್ಯಾಳ, ಸುರೇಶ ಪಾಟೀಲ, ರೈತ ಮುಖಂಡ ಶ್ರೀಶೈಲ ಅಂಗಡಿ, ಮಂಜುನಾಥ ಗದಾಡಿ, ಈರಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.