ಆಸ್ತಿ ಬಗ್ಗೆ ಐಟಿ, ಇ.ಡಿ. ತನಿಖೆ ನಡೆಸಲಿ: ಬಿ.ಕೆ. ಹರಿಪ್ರಸಾದ್
Team Udayavani, Dec 26, 2022, 8:56 PM IST
ಬೆಳಗಾವಿ: ನನ್ನ ಹಾಗೂ ಸಿ.ಟಿ.ರವಿ ಅವರ ಸಂಪಾದನೆ ಮತ್ತು ಆಸ್ತಿ ಬಗ್ಗೆ ತನಿಖೆ ಆಗಲಿ. ಎರಡೂ ಕಡೆ ಐಟಿ, ಇ.ಡಿ. ದಾಳಿ ನಡೆಯಲಿ ಎಂದು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಸವಾಲು ಹಾಕಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿ.ಟಿ.ರವಿ ಚಿಕ್ಕಮಗಳೂರಿಂದ ಬೆಂಗಳೂರಿಗೆ ಬರಬೇಕಾದರೆ ಯಾರಾದರೂ ಲಿಫ್ಟ್ ಕೊಡಬೇಕಿತ್ತು. ಅಂಥವರು ಈಗ ಐಷಾರಾಮಿ ಕಾರಿನಲ್ಲಿ ಓಡಾಡುತ್ತಿದ್ದಾರೆ. ಅವರೀಗ ಮೂರು ಸಾವಿರ ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ ಅಂತ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ಆರೋಪ ಮಾಡಿದ್ದಾರೆ.
ನನ್ನ ಹಿನ್ನೆಲೆ ಇಡೀ ದೇಶಕ್ಕೆ ಗೊತ್ತಿದೆ. ಇವರು (ರವಿ) ಸಣ್ಣ ಹುಡುಗರಿದ್ದಾಗಲೇ ನಾನು ಚಿಕ್ಕಮಗಳೂರಿನಲ್ಲಿ ಇಂದಿರಾ ಗಾಂಧಿಯವರ ಚುನಾವಣೆಯನ್ನು ನೋಡಿದ್ದೇನೆ. ದೇಶದಲ್ಲಿ ಈಗ ಅವರದ್ದೇ ಸರಕಾರ ಇದೆ. ಸಾಧ್ಯವಾದರೆ ನನ್ನ ವಿರುದ್ಧ ಒಂದು ಎಫ್ಐಆರ್ ಆದರೂ ದಾಖಲಿಸಿ ತೋರಿಸಲಿ. ಹಾಗೆ ಮಾಡಿದರೆ ನಾನು ರಾಜಕೀಯದಿಂದ ದೂರವಿರುತ್ತೇನೆ ಎಂದು ಸವಾಲು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.