ಮಠಗಳ ಮಧ್ಯೆ ಸಾಮರಸ್ಯ ಮೂಡಲಿ; ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

ಭಗವದ್ಗೀತೆ ಅಭಿಯಾನಕ್ಕೆ ವೀರಶೈವ ಮಠಗಳಿಂದ ಉತ್ತಮ ಸಹಕಾರ ಸಿಗುತ್ತಿದೆ.

Team Udayavani, Dec 20, 2023, 6:14 PM IST

Belagavi

ಬೆಳಗಾವಿ: ಎಲ್ಲ ಮಠಗಳ ಮಧ್ಯೆ ಆತ್ಮೀಯತೆ ಬಂದರೆ, ಎಲ್ಲ ಧಾರ್ಮಿಕ ಸಂಪ್ರದಾಯಗಳೂ ಒಂದಾದರೆ ದೇಶ ಅಖಂಡವಾಗುತ್ತದೆ. ದೇಶದ ಎಲ್ಲ ಸಮಸ್ಯೆಗಳೂ ಪರಿಹಾರವಾಗುತ್ತವೆ ಎಂದು ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ
ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ಹಾಗೂ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ಪಟ್ಟರು.

ಹುಕ್ಕೇರಿ ಹಿರೇಮಠದ ಬೆಳಗಾವಿ ಶಾಖೆಯಲ್ಲಿ ಮಂಗಳವಾರ ಹಿರೇಮಠದ ವತಿಯಿಂದ ಸ್ವರ್ಣವಲ್ಲೀ ಶ್ರೀಗಳನ್ನು ಸತ್ಕರಿಸಿ,
ಗೀತಾಭಿಯಾನಾರ್ಣವ ಬಿರುದು ಪ್ರದಾನ ಮಾಡಲಾಯಿತು.

ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಜಗದ್ಗುರು ಶ್ರೀ ರೇಣುಕಾಚಾರ್ಯರು ಮತ್ತು ಜಗದ್ಗುರು ಶಂಕರಾಚಾರ್ಯರು ಹಿಂದೆ ಒಟ್ಟಾಗಿ ಕೆಲಸ ಮಾಡಿದ್ದರೇನೋ ಎನ್ನುವ ಭಾವನೆ ನಮಗೆ ಬರುತ್ತಿದೆ. ಜಾತಿ ಮೀರಿ ಎರಡೂ ಮಠಗಳು ಕೆಲಸ ಮಾಡುತ್ತಿವೆ. ಮಠಗಳ ಮಧ್ಯೆ ಸಾಮರಸ್ಯ ಮೂಡಬೇಕು ಎನ್ನುವುದು ನಮ್ಮ ಭಾವನೆ. ಸ್ವರ್ಣವಲ್ಲೀ ಮಠ ಪೂರ್ಣ ಸುಖ ನೀಡುವ ಮಠವಾಗಿದೆ ಎಂದರು.

ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಮಠದ ಮಠಾ ಧೀಶ ಶ್ರೀಮದ್‌ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್‌
ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಅವರು ಭಗವದ್ಗೀತೆಯ ಅಭಿಯಾನವನ್ನು ಕರ್ನಾಟಕದೆಲ್ಲೆಡೆ ಮಾಡುವ ಮೂಲಕ ಮನೆ ಮಾತಾಗಿದ್ದಾರೆ. ಶ್ರೀಗಳು ನಮ್ಮ  ಸನಾತನ ಧರ್ಮದ ಬಗ್ಗೆ ಸಮಾಜಕ್ಕೆ ಅರಿವು ಮೂಡಿಸುವ ಕಾರ್ಯವನ್ನು ಮಾಡುತ್ತಿದ್ದಾರೆ
ಎಂದು ಹೇಳಿದರು.

2007ರಿಂದಲೂ ರಾಜ್ಯದಲ್ಲಿ ಸಂಚಲನ ಮೂಡಿಸುತ್ತಿದ್ದಾರೆ. ಹಿಂದೂ ಧರ್ಮದಲ್ಲಿರುವ ಎಲ್ಲ ಸಂಪ್ರದಾಯದ ಮಠ, ಮಾನ್ಯಗಳು ಒಂದಾಗಿ ಸನಾತನ ಸಂಸ್ಕೃತಿ ಎತ್ತಿ ಹಿಡಿದಾಗ ಮಾತ್ರ ಭಾರತಕ್ಕೆ ಭವಿಷ್ಯ ಇದೆ. ಈ ನಿಟ್ಟಿನಲ್ಲಿ ನಮ್ಮದು ವೀರಶೈವ ಮಠ, ರೇಣುಕಾಚಾರ್ಯರ ಪರಂಪರೆಯ ಮಠ, ಸ್ವರ್ಣವಲ್ಲಿ ಜಗದ್ಗುರುಗಳದ್ದು ಶಂಕರಾಚಾರ್ಯರ ಪಂರಪರೆಯ ಮಠವಾಗಿದೆ. ಇತಿಹಾಸದಲ್ಲಿ ಜಗದ್ಗುರು ರೇಣುಕಾಚಾರ್ಯರು ಮತ್ತು ಶಂಕರಾಚಾರ್ಯರು ಒಂದಾಗಿದ್ದರು ಎನ್ನುವ ಮಾತು ಇದೆ ಎಂದರು.

ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮಾತನಾಡಿ, ಎಲ್ಲ ಸಂಪ್ರದಾಯದ ಮಠಗಳೂ ಒಂದಾಗಬೇಕು. ಅದೇ ಸಮನ್ವಯ. ಧರ್ಮಗಳು, ಆಧ್ಯಾತ್ಮಿಕ ಚಿಂತನೆಗಳು ಭಾರತದಲ್ಲಿ ಹುಟ್ಟಿದಷ್ಟು ಬೇರೆಲ್ಲೂ ಹುಟ್ಟಿಲ್ಲ. ಭಾರತ ಅಖಂಡವಾಗಬೇಕಾದರೆ, ಇಲ್ಲಿನ ಸಮಸ್ಯೆಗಳು ನಿವಾರಣೆಯಾಗಬೇಕಾದರೆ ಎಲ್ಲ ಧಾರ್ಮಿಕ ಸಂಪ್ರದಾಯಗಳೂ ಒಂದಾಗಬೇಕು ಎಂದರು.

ಭಗವದ್ಗೀತೆ ಅಭಿಯಾನಕ್ಕೆ ವೀರಶೈವ ಮಠಗಳಿಂದ ಉತ್ತಮ ಸಹಕಾರ ಸಿಗುತ್ತಿದೆ. ಅದರಲ್ಲೂ ಹುಕ್ಕೇರಿ ಮಠದಿಂದ ಪರಮೋಚ್ಚ
ಸಹಕಾರ ಇದೆ. ಇಲ್ಲಿ ಒಂದು ಮಠದಿಂದ ಇನ್ನೊಂದು ಮಠದ ಸ್ವಾಮಿಗಳನ್ನು ಸತ್ಕರಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಯಾಗಿದೆ. ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಸಾಮಾಜಿಕ, ಧಾರ್ಮಿಕ ಕಾರ್ಯದಲ್ಲಿ ಇತಿಹಾಸವನ್ನೆ ಸೃಷ್ಟಿಸಿದ್ದಾರೆ. ಬೆಲ್ಲದಂತೆ ತಾನಾಗಿಯೇ ಉಕ್ಕೇರುವ ಸಿಹಿ ಹುಕ್ಕೇರಿ ಶ್ರೀಗಳು. ಅವರು ನೀಡಿರುವ ಗೀತಾಭಿಯಾನಾರ್ಣವ ಪ್ರಶಸ್ತಿ ಶಂಕರಾಚಾರ್ಯರಿಗೆ ಸಲ್ಲಬೇಕು ಎಂದು ಸ್ವರ್ಣವಲ್ಲೀ ಶ್ರೀಗಳು ಹೇಳಿದರು.

ಭಗವದ್ಗೀತೆಯನ್ನು ಜನರ ಬಾಯಿಯಿಂದ ಹೇಳಿಸಬೇಕು. ಅವರಿಗೆ ತಿಳಿಸಬೇಕು ಎನ್ನುವುದೇ ಭಗವದ್ಗೀತೆ ಅಭಿಯಾ ನದ
ಉದ್ದೇಶವಾಗಿದೆ. ಡಿ. 23ರಂದು ಬೆಳಗಾವಿಯಲ್ಲಿ ನಡೆಯಲಿರುವ ಭಗವದ್ಗೀತೆ  ಅಭಿಯಾನದ ಮಹಾಸಮರ್ಪಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸ್ವರ್ಣವಲ್ಲೀ ಶ್ರೀಗಳು ಕರೆ ನೀಡಿದರು.

ಶ್ರೀ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠ ಗುರುಕುಲದ ಸುಮಾರು 150 ವೇದ ವಟುಗಳು ಹಾಗೂ 50 ಜನ ಮಹಿಳೆಯರು ಒಟ್ಟಿಗೆ ಭಗವದ್ಗೀತೆ ಪಠಣ ಮಾಡಿದರು. ಸುಬ್ರಹ್ಮಣ್ಯ ಭಟ್‌ ನಿರೂಪಿಸಿದರು. ಅಭಿಯಾನ ಸಮಿತಿಯ ಕಾರ್ಯಾಧ್ಯಕ್ಷ ಪರಮೇಶ್ವರ ಹೆಗಡೆ, ಕಾರ್ಯದರ್ಶಿ ಎಂ.ಕೆ. ಹೆಗಡೆ, ಗಣೇಶ ಹೆಗಡೆ, ವೆಂಕಟ್ರಮಣ ಹೆಗಡೆ ಇತರರು ಇದ್ದರು.

ಕಾರ್ಯಕ್ರಮಕ್ಕೆ ಸಂದೇಶ ನೀಡಿರುವ ತುಮಕೂರಿನ ಡಾ| ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಶ್ರೀ ಶ್ರೀಮದ್‌ ಗಂಗಾಧರೇಂದ್ರ
ಸರಸ್ವತಿ ಸ್ವಾಮಿಗಳು ಭಗವದ್ಗೀತೆಯನ್ನು ಮನೆ ಮನೆಗೆ ತಲುಪಿಸುವ ಮತ್ತು ಮನ ಮನಕ್ಕೆ ತಲುಪಿಸುವ ಕಾರ್ಯ ಮಾಡುತ್ತಿದ್ದಾರೆ. ಗೀತಾ ಅಭಿಯಾನದ ಸಮುದ್ರದಂತಿರುವ ಶ್ರೀಗಳಿಗೆ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಗೀತಾಭಿಯಾನಾರ್ಣವ ಅಭಿನಂದನಾ ಗೌರವ ಸಲ್ಲಿಸಿದ್ದು ನಿಜಕ್ಕೂ ಸೂಕ್ತ ಮತ್ತು ಸಮಯೋಚಿತ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.