ಸರ್ಕಾರದ ಹಣ ಸಮರ್ಪಕ ಬಳಕೆಯಾಗಲಿ
Team Udayavani, Jun 26, 2021, 10:03 AM IST
ಬೆಳಗಾವಿ: ಸರ್ಕಾರದ ಹಣವನ್ನು ಸಮರ್ಪಕವಾಗಿ ಅಭಿವೃದ್ಧಿ ಕೆಲಸಗಳಿಗೆ ಬಳಸಿಕೊಳ್ಳಬೇಕು. ಕಾಮಗಾರಿ ವಿಳಂಬವಾಗದಂತೆ ನೋಡಿಕೊಳ್ಳಬೇಕು. ಮುಖ್ಯವಾಗಿ ಸಾರ್ವಜನಿಕರಿಂದ ಕಾಮಗಾರಿ ಗುಣಮಟ್ಟದ ಕುರಿತು ದೂರುಗಳು ಬಾರದಂತೆ ನಿಗಾವಹಿಸಬೇಕು ಎಂದು ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಪಂ ಕಾರ್ಯಾಲಯದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಶುಕ್ರವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಕ್ಷೇತ್ರದ ಪ್ರತಿಯೊಂದು ಗ್ರಾಮಗಳಿಗೆ ಸಂಬಂಧಪಟ್ಟ ಅಭಿವೃದ್ಧಿ ಕೆಲಸಗಳು ಮತ್ತು ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತು ಮಾಹಿತಿ ಪಡೆದರು.
ಜಲ ಜೀವನ ಮಿಷನ್, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, 14 ನೇ ಮತ್ತು 15 ನೇ ಹಣಕಾಸು ಯೋಜನೆ, ವಿವಿಧ ವಸತಿ ಯೋಜನೆಗಳು, ಸ್ವಚ್ಛ ಭಾರತ್ ಮಿಷನ್- ಗ್ರಾಮೀಣ, ಗ್ರಾಮ ಪಂಚಾಯತ್ ಮನೆ ಕರ ಮತ್ತು ನೀರಿನ ಕರ ವಸೂಲಿ, ಗ್ರಾಮ ಪಂಚಾಯತಿಯಲ್ಲಿ ಅನುಷ್ಠಾನಗೊಳ್ಳುವ ವಿವಿಧ ಯೋಜನೆಗಳುಹಾಗೂ ಕೋವಿಡ್-19 ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದರು. ತಾಪಂ ಅಧ್ಯಕ್ಷ ಶಂಕರಗೌಡ ಪಾಟೀಲ, ತಹಶಿಲ್ದಾರ್ ಆರ್.ಕೆ. ಕುಲಕರ್ಣಿ, ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ ಉಪಸ್ಥಿತರಿದ್ದರು.
ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಲಕ್ಷ್ಮೀ :
ಬೆಳಗಾವಿ: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವಕ್ಕೆ ಸಂಬಂಧಪಟ್ಟಂತೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ. ಯಾರೇ ಮುಖ್ಯಮಂತ್ರಿಯಾದರೂ ಅದನ್ನು ಹೃದಯಪೂರ್ವಕ ಸ್ವೀಕಾರ ಮಾಡುತ್ತೇವೆ ಎಂದು ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಮಾರ್ಮಿಕವಾಗಿ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಮೊದಲಿಂದಲೂ ಶಿಸ್ತಿನ ಪಕ್ಷ. ನಮಗೆ ಒಂದು ಹೈಕಮಾಂಡ್ ಇದೆ. ಅದು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ. ಮುಖ್ಯವಾಗಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಎಂಬುದು ನಮ್ಮ ಮುಖ್ಯ ಗುರಿ ಎಂದರು. ಮಧ್ಯಂತರ ಚುನಾವಣೆ ಹಾಗೂ ರಾಜ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ನಾನು ಭವಿಷ್ಯ ಹೇಳುವುದಿಲ್ಲ. ಇನ್ನು ಪಕ್ಷದಿಂದ ಹೊರಗೆ ಹೋದವರು ಮರಳಿ ಬರುವ ವಿಷಯಕ್ಕೆ ಸಂಬಂಧಪಟ್ಟಂತೆ ನಮ್ಮ ಪಕ್ಷದ ಹಿರಿಯರು ನಿರ್ಧಾರ ಮಾಡುತ್ತಾರೆ. ನಾನು ಕಾಂಗ್ರೆಸ್ ಅಧ್ಯಕ್ಷೆಯೂ ಅಲ್ಲ, ಪಕ್ಷದಲ್ಲಿ ಹಿರಿಯಳೂ ಅಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.