ಜೀವನ ಪಥ ಬದಲಿಸುವ ಶಕ್ತಿ ವಚನಗಳಿಗಿದೆ: ಪ್ರಭಾಕರ ಕೋರೆ


Team Udayavani, Aug 20, 2024, 6:04 PM IST

ಜೀವನ ಪಥ ಬದಲಿಸುವ ಶಕ್ತಿ ವಚನಗಳಿಗಿದೆ: ಪ್ರಭಾಕರ ಕೋರೆ

ಉದಯವಾಣಿ ಸಮಾಚಾರ
ಬೆಳಗಾವಿ: ಮಹಾಮಾನವತಾವಾದಿ ಬಸವಣ್ಣನವರ ವಿಚಾರಗಳು ಎಲ್ಲ ಕಾಲಕ್ಕೂ ಮೌಲಿಕವೆನಿಸಿವೆ. ಅವುಗಳು ನಮ್ಮ ಅನುಕರಣೆಯ ಭಾಗವಾಗಬೇಕಾಗಿದೆ. ಜೀವನ ಪಥವನ್ನು ಬದಲಾಯಿಸುವ ಶಕ್ತಿ ಬಸವಣ್ಣನವರ ವಚನಗಳಲ್ಲಿ ಅಡಗಿದೆ ಎಂದು
ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ| ಪ್ರಭಾಕರ ಕೋರೆ ಹೇಳಿದರು.

ಇಲ್ಲಿಯ ಶಹಾಪುರದಲ್ಲಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಶ್ರೀ ಬಸವೇಶ್ವರ ಪೀಠ ಹಾಗೂ ಶ್ರೀ ಜಗಜ್ಯೋತಿ ಬಸವೇಶ್ವರ ಕಲ್ಯಾಣ ಮಂಟಪ, ಶ್ರೀ ದಾನಮ್ಮದೇವಿ ಮಂದಿರ ಟ್ರಸ್ಟ್‌ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬಸವ ವಾಹಿನಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶತಶತಮಾನಗಳವರೆಗೆ ನಾವು ಬಸವಣ್ಣನವರನ್ನು ರಾಜ್ಯದ ಆಚೆಗೆ ಬಿಟ್ಟುಕೊಡಲಿಲ್ಲ.ಇಂದು ಅವರ ಸಂದೇಶಗಳು ವಿಶ್ವಮಾನ್ಯವೆನಿಸಿವೆ.

ಇಂದಿನ ಯುವಜನಾಂಗಕ್ಕೆ ಅದನ್ನು ಮುಟ್ಟಿಸುವ ಕೆಲಸ ಮಾಡಬೇಕಾಗಿದೆ ಎಂದರು. ಫ.ಗು.ಹಳಕಟ್ಟಿಯಂತಹ ಮಹನೀಯರಿಂದ ವಚನ ಸಾಹಿತ್ಯ ಬೆಳಕು ಕಂಡಿತು. ಅವರನ್ನು ಸ್ಮರಿಸಿಕೊಳ್ಳಲೇಬೇಕು. ಧಾರವಾಡದ ಬಸವಪೀಠಕ್ಕೆ ಎಸ್‌.ವಿ.ಬೆಂಬಳಗಿಯವರ ಕೊಡುಗೆ ಅಪಾರವಾಗಿದೆ.

ಮುರಗೋಡದ ಮಹಾಂತಜ್ಜನವರ ಭಕ್ತರಾಗಿ ಅವರ ಕಾರ್ಯವನ್ನು ಬಸವಪೀಠದ ಮೂಲಕ ಯಶಸ್ವಿಯಾಗಿ ನೆರವೇರಿಸಿದರು ಎಂದು ಡಾ| ಕೋರೆ ಸ್ಮರಿಸಿದರು. ಬಸವಣ್ಣ ಸಾಂಸ್ಕೃತಿಕ ನಾಯಕ ವಿಷಯದ ಕುರಿತು ಮಾತನಾಡಿದ ವಿದ್ವಾಂಸರಾದ ಡಾ| ವಿ.ಎಸ್‌.ಮಾಳಿ ಅವರು, ಮತ, ಮೌಡ್ಯ, ಅಜ್ಞಾನ ತ್ರಿವಿಧ ಮಲಗಳನ್ನು ತೊಳೆದು ನಮ್ಮ ಆತ್ಮಹೃದಯದಲ್ಲಿ ಭಕ್ತಿಜ್ಞಾನ
ಸುಜಲವನ್ನು ತುಂಬಿದವರು ಬಸವಣ್ಣನವರು. ಕನ್ನಡ ಕುಲಕೋಟಿಯ ಸಂಸ್ಕೃತಿಯ ಕುಲಪತಿ ಬಸವಣ್ಣ. ನಡೆ ನುಡಿಯ ಮೂಲಕ ಬದುಕಲು ಕಲಿಸಿದವ ಬಸವ.

ಪ್ರಳಯದ ಕಸವನ್ನು ಕಿತ್ತು ಅಮೃತದ ಬೆಳೆಯನ್ನು ಬೆಳೆದವರು ಬಸವಣ್ಣ. ಅವರು ಕರ್ನಾಟಕಕ್ಕೆ ಅಷ್ಟೇ ಅಲ್ಲ, ಇಡೀ ವಿಶ್ವದ ಸಾಂಸ್ಕೃತಿಕ ನಾಯಕ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕವಿವಿ ಕುಲಪತಿ ಡಾ| ಕೆ.ಬಿ.ಗುಡಸಿ ಮಾತನಾಡಿ, ಬಸವಣ್ಣನವರನ್ನು ಒಂದು ಧರ್ಮಕ್ಕೆ, ಒಂದು ಜಾತಿಗೆ ಸೀಮಿತಗೊಳಿಸುವ ಕಾರ್ಯ ನಡೆಯುತ್ತಿದೆ. ಅದು ಸಲ್ಲದು.ಅವರು ಸಮಾನತೆಯ ಹರಿಕಾರರು. ಬಸವಪೀಠ ಈ ನಿಟ್ಟಿನಲ್ಲಿ ಕಳೆದ ಐವತ್ತು ವರ್ಷಗಳಿಂದ ಮಹತ್ತರ ಕಾರ್ಯಗಳನ್ನು ಮಾಡುತ್ತಾ ಬಂದಿದೆ ಎಂದರು.

ಸಾನ್ನಿಧ್ಯ ವಹಿಸಿದ್ದ ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿಯವರು ಆಶೀರ್ವಚನ ನೀಡಿ, ಬಸವಣ್ಣನವರದು ಮಾತೃಹೃದಯಿ
ನಡೆನುಡಿಯಾಗಿತ್ತು. ಒಂದು ಕಾಲಘಟ್ಟದಲ್ಲಿ ನಿಂತು ಸಮಾಜ ಧರ್ಮಗಳನ್ನು ತಿದ್ದಿ ತೀಡುವ ಕಾರ್ಯವನ್ನು ಸೂಕ್ಷ್ಮವಾಗಿ ನಿರ್ವಹಿಸಿದರು ಎಂದು ಹೇಳಿದರು.

ಧಾರವಾಡ ಮುರಘಾಮಠದ ಡಾ| ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಬಸವಣ್ಣನವರ ಕಾಯಕದಾಸೋಹ ಸಿದ್ಧಾಂತಗಳು ವ್ಯಕ್ತಿಕಲ್ಯಾಣ ಹಾಗೂ ಸಮಾಜಕಲ್ಯಾಣದಲ್ಲಿ, ರಾಷ್ಟ್ರನಿರ್ಮಾಣದಲ್ಲಿ ಮಹತ್ವವನ್ನು ಪಡೆದಿವೆ. ಅಂತೆಯೆ ಯುಗ ಯುಗಗಳು ಕಳೆದರೂ ಸತ್ಯದರ್ಶನ ಅಡಗಿದೆ ಎಂದರು.

ಮುರಗೋಡ ದುರದುಂಡೀಶ್ವರಮಠದ ನೀಲಕಂಠ ಸ್ವಾಮಿಗಳು, ಮುರಗೋಡದ ಮಹಾಂತಜ್ಜನವರು, ಎ.ಎಸ್‌.ಪಾಟೀಲ, ಎಂ.ಜಿ.ಬೊಳಮಲ್ಲ, ಡಾ.ಎಂ. ಎಸ್‌.ಉಮದಿ, ಎಸ್‌.ವಿ. ಬಾಗಿ, ಸಚಿನ ಖಡಬಡಿ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಕೆಎಲ್‌ಇ
ಸಂಸ್ಥೆಯಲ್ಲಿ 40 ವರ್ಷಗಳ ಸಾರ್ಥಕ ಸೇವೆ ಸಲ್ಲಿಸಿದ ಡಾ| ಪ್ರಭಾಕರ ಕೋರೆ ಅವರನ್ನು ಟ್ರಸ್ಟ್‌ ವತಿಯಿಂದ ಸತ್ಕರಿಸಲಾಯಿತು.

ಮಹೇಶ್ವರಿ ಅಂಧ ಮಕ್ಕಳ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಬಸವಪೀಠದ ಸಂಯೋಜಕರಾದ ಡಾ| ಸಿ.ಎಂ. ಕುಂದಗೋಳ ಪ್ರಾಸ್ತಾವಿಕ ಭಾಷಣ ಮಾಡಿದರು. ದಾನಮ್ಮದೇವಿ ಟ್ರಸ್ಟ್‌ನ ಅಧ್ಯಕ್ಷ ಚಂದ್ರಶೇಖರ ಬೆಂಬಳಗಿ ಸ್ವಾಗತಿಸಿದರು. ಕಾರ್ಯದರ್ಶಿ ಸಿ.ಎಂ. ಕಿತ್ತೂರ ವಂದಿಸಿದರು. ಡಾ.ಮಹೇಶ ಗುರನಗೌಡರ ನಿರೂಪಿಸಿದರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Belagavi: Let there be a full discussion of issues in the plenary session: Dr. Prabhakar Kore

Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್‌ ಕೋರೆ

Belagavi: ಗೆಳೆಯ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.