ಮತದಾರ ಪಟ್ಟಿಗೆ ಆಧಾರ್ ಜೋಡಣೆಗೆ ಚಾಲನೆ
ಸಾರ್ವಜನಿಕರು ನಿಯಮಾನುಸಾರ ಅಧಿಕೃತ ಮತಚೀಟಿ ಹೊಂದಬೇಕು
Team Udayavani, Aug 2, 2022, 6:24 PM IST
ಬೆಳಗಾವಿ: ಭಾರತ ಚುನಾವಣಾ ಆಯೋಗದ ಸೂಚನೆಯಂತೆ 2023ರ ಮಾರ್ಚ್ ಅಂತ್ಯಕ್ಕೆ ಮತದಾರರ ಪಟ್ಟಿಗೆ ಆಧಾರ್ ಸಂಖ್ಯೆಯನ್ನು ಜೋಡಿಸುವ ಕಾರ್ಯ ಪ್ರತಿಶತ 100 ರಷ್ಟು ಪೂರ್ಣಗೊಳಿಸಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ, ಭಾರತ ಚುನಾವಣಾ ಆಯೋಗ ಹಾಗೂ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಸಹಯೋಗದಲ್ಲಿ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಸೋಮವಾರ ನಡೆದ ಮತದಾರರ ಆಧಾರ ಸಂಖ್ಯೆಗಳನ್ನು ಮತದಾರರ ಪಟ್ಟಿಗೆ ಜೋಡಣೆ ಕಾರ್ಯ ಪ್ರಾರಂಭೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ಬಿಎಲ್ ಒಗಳು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಫಾರ್ಮ್ 6,7 ಹಾಗೂ 8 ಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ನಂತರ ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಫಾರ್ಮ್ 6(ಬಿ) ಯಲ್ಲಿ ಮತದಾರರ ಆಧಾರ್ ಸಂಖ್ಯೆಯನ್ನು ಜೋಡಿಸುವ ಕಾರ್ಯಕ್ಕೆ ಸಿದ್ಧರಾಗಬೇಕು ಎಂದರು.
ಆಧಾರ ಸಂಖ್ಯೆಯನ್ನು ಜೋಡಿಸುವ ಕಾರ್ಯದಲ್ಲಿ ಯಾವುದೇ ರೀತಿಯ ಮಾಹಿತಿ, ದಾಖಲಾತಿ ಬಹಿರಂಗವಾದರೆ ಅಧಿಕಾರಿ, ಸಿಬ್ಬಂದಿಗಳು ಕಾನೂನು ರೀತಿಯಲ್ಲಿ ಶಿಕ್ಷೆಗೂ ಒಳಗಾಗಬೇಕಾಗುತ್ತದೆ. ಹೀಗಾಗಿ ನಿಗದಿತ ಅವಧಿಯಲ್ಲಿ ಮುತುವರ್ಜಿಯಿಂದ ಆಧಾರ್ ಸಂಖ್ಯೆಯನ್ನು ಜೋಡಿಸುವ ಕಾರ್ಯವನ್ನು ಯಶಸ್ವಿಗೊಳಿಸಬೇಕಾಗಿದೆ ಎಂದು ಅವರು ಎಚ್ಚರಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾನೂನು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾದಿ ಅವರು, ಪಾರದರ್ಶಕ ಚುನಾವಣಾ ಪ್ರಕ್ರಿಯೆ ನಡೆಸಲು ಮತದಾರರ ಪಟ್ಟಿಗೆ ಆಧಾರ್ ಸಂಖ್ಯೆಯನ್ನು ಜೋಡಿಸುವುದು ಉತ್ತಮ ಕಾರ್ಯವಾಗಿದೆ. ಚುನಾವಣೆ ಸಮಯದಲ್ಲಿ ವೋಟರ್ ಐಡಿ ರದ್ದಾಗಿದೆ ಎಂದು ದೂರುವುದಕ್ಕಿಂತ ಚುನಾವಣಾ ಆಯೋಗದ ಸೂಚನೆಯಂತೆ ಸಾರ್ವಜನಿಕರು ನಿಯಮಾನುಸಾರ ಅಧಿಕೃತ ಮತಚೀಟಿ ಹೊಂದಬೇಕು ಎಂದು ಹೇಳಿದರು.
ಬೆಳಗಾವಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹಾನಂದ ನಂದಗಾವಿ ಅವರು ಮಾತನಾಡಿ ವೋಟರ್ ಐಡಿಗೆ ಆಧಾರ್ ಸಂಖ್ಯೆಯನ್ನು ಜೋಡಿಸುವ ಕಾರ್ಯ ಉತ್ತಮವಾಗಿದೆ. ಅಧಿಕೃತ ಮತದಾರರ ಗುರುತಿನ ಕಾರ್ಡ್‌ದೊಂದಿಗೆ ಮತದಾರರು ತಮ್ಮ ಮತ ಚಲಾಯಿಸಲು ಈ ಪ್ರಕ್ರಿಯೆ ಸಹಾಯಕವಾಗಲಿದೆ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ ಘಾಳಿ ಅವರು ಮತದಾರರ ಪಟ್ಟಿಗೆ ಆಧಾರ್ ಸಂಖ್ಯೆಯನ್ನು ಸೇರಿಸುವ ಮೂಲಕ ನಕಲಿ ವೋಟರ್ ಐಡಿಗಳನ್ನು ತಡೆಗಟ್ಟಬಹುದು. ಮತ ಪ್ರಕ್ರಿಯೆಯನ್ನೂ ಪಾರದರ್ಶಕತೆಯೊಂದಿಗೆ ನಡೆಸಬಹುದು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ, ಮಹಾನಗರ ಪಾಲಿಕೆ ಅಧೀಕ್ಷಕ ಅಭಿಯಂತರ ಮಹಾವೀರ ಗಣಿ ಉಪಸ್ಥಿತರಿದ್ದರು. ಮಹಾನಗರ ಪಾಲಿಕೆ ಆಡಳಿತ ವಿಭಾಗದ ಉಪ ಆಯುಕ್ತರಾದ ಭಾಗ್ಯಶ್ರೀ ಹುಗ್ಗಿ ಸ್ವಾಗತಿಸಿದರು, ಸುನೀತಾ ದೇಸಾಯಿ ನಿರೂಪಿಸಿದರು, ಪಾಲಿಕೆಯ ಕಂದಾಯ ವಿಭಾಗದ ಉಪ ಆಯುಕ್ತರಾದ ಪ್ರಶಾಂತ ಹನಗಂಡಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.