ಅಂಡರ್‌ಪಾಸ್ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ
Team Udayavani, Jan 4, 2020, 3:13 PM IST
ಬೆಳಗಾವಿ: ನಗರ ಕೇಂದ್ರ ಬಸ್ ನಿಲ್ದಾಣದಿಂದ ಸಿಟಿ ಬಸ್ ಟರ್ಮಿನಲ್ ವರೆಗೂ ಅಂಡರ್‌ಪಾಸ್ ನಿರ್ಮಿಸುವ ಕುರಿತು ಶುಕ್ರವಾರ ಸ್ಮಾರ್ಟ್‌ಸಿಟಿ ಅಧಿಕಾರಿಗಳ ಸಭೆ ನಡೆಸಲಾಯಿತು. ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ, ಪ್ರಯಾಣಿಕರ ಅನುಕೂಲಕ್ಕಾಗಿ ಕೇಂದ್ರ ಬಸ್ ನಿಲ್ದಾಣದಿಂದ ಸಿಟಿ ಬಸ್ ಟರ್ಮಿನಲ್ ವರೆಗೂ ನಿರ್ಮಾಣ ಮಾಡಲು ಉದ್ದೇಶಿಸಿರುವ ಅಂಡರ್ ಪಾಸ್ ಮಾಹಿತಿ ನೀಡಿದರು.
ಅಂಡರ್ ಪಾಸ್ ನಿರ್ಮಾಣ ಕಾಮಗಾರಿ ಆರಂಭಗೊಳ್ಳುವ ಮೊದಲು ವಿದ್ಯುತ್ ಕಂಬಗಳ ಸ್ಥಳಾಂತರ ಸೇರಿದಂತೆ ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಹೆ„ಟೆಕ್ ಸಿಬಿಟಿ ನಿಲ್ದಾಣ ನಿರ್ಮಿಸಲಾಗುತ್ತಿದ್ದು ಇದಕ್ಕೆ ಪೂರಕವಾಗಿ ಕೇಂದ್ರ ಬಸ್ ನಿಲ್ದಾಣದಿಂದ ಎದುರಿನ ಸಿಬಿಟಿ ವರೆಗೆ ಪ್ರಯಾಣಿಕರಿಗೆ ಅನಕೂಲವಾಗುವಂತೆ ಅಂಡರ್ ಪಾಸ್ ನಿರ್ಮಿಸಲಾಗುತ್ತಿದೆ. ಈಗಾಗಲೇ ಯೋಜನೆಯ ರೂಪುರೇಷೆ ಸಹ ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದರು.
ನಂತರ ಕೇಂದ್ರ ಬಸ್ ನಿಲ್ದಾಣ ಹಾಗೂ ಸಿಟಿ ಬಸ್ ನಿಲ್ದಾಣ ಸ್ಥಳಕ್ಕೆ ಭೇಟಿ ನೀಡಿದ ಆಧಿಕಾರಿಗಳು ಅಂಡರ್ ಪಾಸ್ ನಿರ್ಮಾಣ ಮಾಡಲಿರುವ ಸ್ಥಳದ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಜಗದೀಶ ಕೆಎಚ್, ದಂಡು ಮಂಡಲಿಯ ಸಿಇಒ ಬರ್ಚಸ್ವ, ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರರು, ಜಲ ಮಂಡಳಿ ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು, ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಅಧಿಕಾರಿಗಳು ಉಪಸ್ಥಿತರಿದ್ಧರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.