ಜೂ. 7ರವರೆಗೂ ನಿಷೇಧಾಜ್ಞೆ ವಿಸ್ತರಣೆ
ಬೆಳಗ್ಗೆ 6ರಿಂದ 10 ಗಂಟೆಯವರೆಗೆ ಮಾತ್ರ ಅವಕಾಶ! ಅನವಶ್ಯಕವಾಗಿ ಓಡಾಡಿದರೆ ಕಠಿಣ ಕ್ರಮದ ಎಚ್ಚರಿಕೆ
Team Udayavani, May 24, 2021, 6:52 PM IST
ಬೆಳಗಾವಿ: ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಜೂನ್ 7ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ ಡಿಸಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮೇ 12ರ ರಾತ್ರಿ 9 ಗಂಟೆಯಿಂದ ಮೇ 24ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಹೊರಡಿಸಲಾಗಿತ್ತು. ಆದರೆ ಕೊವಿಡ್ ಪ್ರಕರಣಗಳಲ್ಲಿ ಪ್ರತಿದಿನ ಹೆಚ್ಚಳ ಕಂಡು ಬರುತ್ತಿರುವುದರಿಂದ ಮೇ 24ರ ಬೆಳಗ್ಗೆ 6 ಗಂಟೆಯವರೆಗೆ ಇರುವ ನೀಷೆಧಾಜ್ಞೆಯನ್ನು ಜೂನ್ 7ರ ಬೆಳಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಡಿಸಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.
ಅವಶ್ಯಕ ಚಟುವಟಿಕೆಗಳು ಹಾಗೂ ತಾಲೂಕಾ ಮಟ್ಟದ ವಿಪತ್ತು ನಿರ್ವಹಣಾ ಸಮಿತಿಯಿಂದ ಪೂರ್ವಾನುಮತಿ ಪಡೆದುಕೊಂಡ ಚಟುವಟಿಕೆಗಳಿಗೆ ಮಾತ್ರ ಅವಕಾಶವಿರುತ್ತದೆ. ಆದೇಶವನ್ನು ಉಲ್ಲಂಘಿ ಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳಾದ ಎಂ.ಜಿ. ಹಿರೇಮಠ ಅವರು ಎಚ್ಚರಿಕೆ ನೀಡಿದ್ದಾರೆ.
ಜೂನ್ 7ರ ವರೆಗೆ ವಿ ಧಿಸಿರುವ ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಅಗತ್ಯ ಸೇವೆ ಗಳು ಹೊರತುಪಡಿಸಿ ಎಲ್ಲವೂ ಸ್ತಬ್ಧ ವಾಗಿರಲಿಲ್ಲ. ಸಂಪೂರ್ಣ ಲಾಕ್‌ಡೌನ್ ಕೇವಲ ಶನಿವಾರ ಮತ್ತು ರವಿವಾರಕ್ಕೆ ಮಾತ್ರ ಸೀಮಿತವಾಗಿತ್ತು. ಇನ್ನುಳಿದಂತೆ ಮೇ 24ರಿಂದ ಬೆಳಗ್ಗೆ 6ರಿಂದ 10 ಗಂಟೆಯವರೆಗೆ ಅಗತ್ಯ ಸೇವೆಗಳಿಗೆ ಅವಕಾಶ ಇದೆ. 2 ದಿನಗಳ ಹಿಂದೆ ಕೊರೊನಾ ಕರ್ಫ್ಯೂ ಅವ ಧಿಯಲ್ಲಿ ಇದ್ದ ಎಲ್ಲ ಕಾರ್ಯ ಚಟುವಟಿಕೆಗಳಿಗೆ ಅನುಕೂಲ ಮುಂದುವರಿಯಲಿದೆ.
ಅಗತ್ಯ ಸೇವೆ ಗಳಾದ ದಿನಸಿ ಅಂಗಡಿಗಳು, ಹಾಲಿನ ಮಳಿಗೆ, ಮಾಂಸ, ತರಕಾರಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 10 ಗಂಟೆಯವರೆಗೆ ವಾಹನಗಳ ಓಡಾಟವೂ ಇರಲಿದೆ. 10ರ ನಂತರ ರಸ್ತೆಗಿಳಿದರೆ ವಾಹನಗಳನ್ನು ಸೀಜ್ ಮಾಡುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.