Belagavi: ಅಕ್ರಮ ಆಸ್ತಿ ಸಂಪಾದನೆ ಆರೋಪ… ಬೆಳಗಾವಿ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ದಾಳಿ
Team Udayavani, Nov 12, 2024, 11:54 AM IST
ಬೆಳಗಾವಿ: ಧಾರವಾಡದ ಕೆಐಎಡಿಬಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಗೋವಿಂದಪ್ಪ ಭಜಂತ್ರಿ ಅವರ ಸಂಬಂಧಿಕರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಸವದತ್ತಿ ತಾಲ್ಲೂಕಿನ ಉಗರಗೋಳದಲ್ಲಿರುವ ಗೋವಿಂದಪ್ಪ ಸಂಬಂಧಿಕರ ಫಾರ್ಮ್ ಹೌಸ್ ಮೇಲೆ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿಯಾಗಿದೆ.
ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಅಧಿಕಾರಿಯಾಗಿರುವ ವೆಂಕಟೇಶ ಎಂಬುವರ ಬೆಳಗಾವಿ ಮನೆಯ ಮೇಲೆ ಸಹ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ವೆಂಕಟೇಶ ಅವರು ಈ ಹಿಂದೆ ಬೆಳಗಾವಿಯಲ್ಲಿ ಕಾರ್ಯನಿರ್ವಹಿಸಿದ್ದರು.
ಅದೇರೀತಿ ನಿಪ್ಪಾಣಿ ತಾಲೂಕಿನ ಬೋರಗಾವ್ ದಲ್ಲಿ ಗ್ರಾಮ ಲೆಕ್ಕಾಧಿಕಾರಿ ವಿಠಲ್ ಡವಳೇಶ್ವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗ್ರಾಮ ಲೆಕ್ಕಾಧಿಕಾರಿಯಾಗಿರುವ ವಿಠಲ ಅವರ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: Viral Video: ಮದ್ಯ ಸೇವಿಸಿ ನಡುರಸ್ತೆಯಲ್ಲೇ ಮೂತ್ರ ವಿಸರ್ಜಿಸಿದ ಪೊಲೀಸ್ ಪೇದೆ.!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.