Loksabha; ನಾನು, ಮಗ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ: ಪ್ರಕಾಶ್ ಹುಕ್ಕೇರಿ ಸ್ಪಷ್ಟನೆ
Team Udayavani, Mar 11, 2024, 1:20 PM IST
ಬೆಳಗಾವಿ: ನಾನು ಮತ್ತು ನನ್ನ ಮಗ ಯಾವುದೇ ಕಾರಣಕ್ಕೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ನಾನು ಸ್ಪರ್ಧೆ ಮಾಡುವಂತೆ ಒತ್ತಡಗಳು ಬರುತ್ತಿವೆ. ನಾನು ಸ್ಪರ್ಧೆ ಮಾಡಿದರೆ ಚಿಕ್ಕೋಡಿ ಲೋಕಸಭೆಯಲ್ಲಿ ಗೆಲ್ಲುತ್ತೇವೆ ಎಂಬ ಲೆಕ್ಕಾಚಾರವಿದೆ. ಆದರೆ ನಾನು ಯಾವುದೇ ಕಾರಣಕ್ಕೂ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ನನಗೆ ಈಗ 75 ವಯಸ್ಸು, ಮೇಲಾಗಿ ನನ್ನ ಪರಿಷತ್ ಅಧಿಕಾರಾವಧಿ ಇನ್ನೂ 4 ವರ್ಷವಿದೆ. ನನ್ನನ್ನು ನಂಬಿ ಬೆಳಗಾವಿ, ವಿಜಯಪುರ, ಬಾಗಲಕೋಟೆ ಶಿಕ್ಷಕರು ಮತ ಹಾಕಿ ಗೆಲ್ಲಿಸಿದ್ದಾರೆ. ನನಗೆ ಮತಕೊಟ್ಟ ಶಿಕ್ಷಕರಿಗೆ ಮೋಸ ಮಾಡುವುದಿಲ್ಲ ಎಂದರು.
2014 ರಲ್ಲಿ ಆಗ ಸಿಎಂ ಆಗಿದ್ದ ಸಿದ್ದರಾಮಯ್ಯರ ಸೂಚನೆಯಂತೆ ಮಂತ್ರಿ ಇದ್ದರೂ ಸ್ಪರ್ಧಿಸಿ ಗೆದ್ದಿದ್ದೆ. ಆಗ ಪುತ್ರ ಗಣೇಶ ಹುಕ್ಕೇರಿ ಶಾಸಕ ಮಾಡಿ ಮಂತ್ರಿ ಮಾಡುತ್ತೇವೆ ಎಂದು ವರಿಷ್ಠರು ಭರವಸೆ ಕೊಟ್ಟಿದ್ದರು. ಆದರೆ ಮಂತ್ರಿ ಮಾಡಲಿಲ್ಲ. 2023 ರಲ್ಲಿ ಶಾಸಕ ಗಣೇಶ 78 ಸಾವಿರ ಅಂತರದಿಂದ ಗೆದ್ದರೂ ಮಂತ್ರಿ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈಗಾಗಲೇ ಬೆಳಗಾವಿಗೆ ಲಿಂಗಾಯತ, ಚಿಕ್ಕೋಡಿಗೆ ಕುರುಬ ಸಮುದಾಯಕ್ಕೆ ಟಿಕೆಟ್ ಎಂದು ಚರ್ಚೆಯಾಗಿದೆ. ಚಿಕ್ಕೋಡಿಗೆ ಕುರುಬ ಸಮಾಜಕ್ಕೆ ಟಿಕೆಟ್ ಕೊಟ್ಟರೆ ಗೆಲ್ಲಿಸಿಕೊಂಡು ಬರುತ್ತೇವೆ. ಚಿಕ್ಕೋಡಿ ಕ್ಷೇತ್ರದಲ್ಲಿ ಮೂರು ಲಕ್ಷ ಕುರುಬ ಸಮುದಾಯದರಿದ್ದಾರೆ. ಈ ಸಮುದಾಯದ ಮುಖಂಡ ಲಕ್ಷ್ಮಣರಾವ್ ಚಿಂಗಳೆಗೆ ಟಿಕೆಟ್ ಕೊಡುವಂತೆ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.