LS; ಗೆಲ್ಲುವ ಅವಕಾಶ ತೋರಿಸಿದರೆ ಹೆಬ್ಬಾಳಕರ್ ಪುತ್ರನಿಗೆ ಟಿಕೆಟ್: ಸತೀಶ್ ಜಾರಕಿಹೊಳಿ
ಚಿಕ್ಕೋಡಿ ಕ್ಷೇತ್ರಕ್ಕೆ ಮೂವರ ಹೆಸರು
Team Udayavani, Feb 24, 2024, 4:43 PM IST
ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಇಬ್ಬರು ಹಾಗೂ ಚಿಕ್ಕೋಡಿ ಕ್ಷೇತ್ರಕ್ಕೆ ಮೂವರ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡಿಗೆ ಕಳುಹಿಸಲಾಗಿದೆ’ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಖಾನಾಪುರ ತಾಲೂಕಿನ ಕಣಕುಂಬಿ ಯಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿ ‘ಅಭ್ಯರ್ಥಿಗಳ ಆಯ್ಕೆ ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಕುಟುಂಬದ ಯಾವ ಸದಸ್ಯರೂ ಚುನಾವಣೆಗೆ ಸ್ಪರ್ಧೆ ಮಾಡುವದಿಲ್ಲ ಎಂದು ಪುನರುಚ್ಚರಿಸಿದರು.
ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಬೆಳಗಾವಿ ಕ್ಷೇತ್ರದಲ್ಲಿ ಗೆಲ್ಲುವ ಅವಕಾಶ ತೋರಿಸಿದರೆ ಅವರ ಪುತ್ರನಿಗೆ ಟಿಕೆಟ್ ನೀಡಲಾಗುವುದು ಎಂದು ಹೇಳಿದರು.
ರಸ್ತೆ ದುರಸ್ತಿ ಕಾರ್ಯಕ್ಕೆ ಚಾಲನೆ
ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಖಾನಾಪುರ ತಾಲೂಕಿನ ಕಣಕುಂಬಿ ಬಳಿ ಬೆಳಗಾವಿ- ಚೋರ್ಲಾ -ಗೋವಾ ರಸ್ತೆ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಿದರು.
ಗೋವಾದಿಂದ ರಣಕುಂಡಿ ಕ್ರಾಸ್ ವರೆಗಿನ ಈ ರಸ್ತೆ 43.ಕಿ.ಮೀಟರ್ ಉದ್ದವಾಗಿದ್ದು, 58.90 ಕೋಟಿ ರೂಪಾಯಿ ವೆಚ್ಚದಲ್ಲಿ ಸುಧಾರಣೆ ಕಾರ್ಯ ಕೈಗೊಳ್ಳುತ್ತಿದ್ದು, 11 ತಿಂಗಳ ಅವಧಿಯಲ್ಲೇ ರಸ್ತೆ ದುರಸ್ತಿ ಕಾರ್ಯ ಮುಗಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.