ಲಾರಿ ಚಲಾಯಿಸುತ್ತಿದ್ದಾಗಲೇ ಹೃದಯಾಘಾತ: ಚಾಲಕ ಸಾವು
Team Udayavani, Oct 5, 2019, 12:31 AM IST
ಬೆಳಗಾವಿ: ಲಾರಿ ಚಲಾಯಿಸುತ್ತಿದ್ದ ಚಾಲಕನಿಗೆ ಇದ್ದಕ್ಕಿದ್ದಂತೆಯೇ ಹೃದಯಾಘಾತವಾಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಗರದ ಕಾಲೇಜು ರಸ್ತೆಯ ಸನ್ಮಾನ ಹೊಟೇಲ್ ಎದುರು ಸಂಭವಿಸಿದೆ.
ನ್ಯೂ ಗಾಂಧಿ ನಗರದ ದಸ್ತಗೀರ ಸಾಬ ಖತಾಲ ಸಾಬ ಬೇಪಾರಿ (56) ಎಂಬವರು ಶುಕ್ರವಾರ ಮಧ್ಯಾಹ್ನ ಲಾರಿಯನ್ನು ರಾಣಿ ಚನ್ನಮ್ಮ ವೃತ್ತದ ಕಡೆಯಿಂದ ಚಲಾಯಿಸುತ್ತಾ ಬರುತ್ತಿದ್ದ ಸಂದರ್ಭದಲ್ಲಿ ಅವರಿಗೆ ಚಾಲಕನ ಸೀಟಿನಲ್ಲೇ ಹೃದಯಾಘಾತವಾಗಿದೆ.
ಈ ಸಂದರ್ಭದಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಎದುರಿನ ವೃತ್ತದಲ್ಲಿ ಯೂ ಟರ್ನ್ ತೆಗೆದುಕೊಳ್ಳುತ್ತಿದ್ದ ಬೈಕಿಗೆ ಢಿಕ್ಕಿಯಾಗಿದೆ. ನಿಯಂತ್ರಣ ತಪ್ಪಿದ ಲಾರಿ ಬೈಕ್ ಗೆ ಗುದ್ದಿದ ರಭಸಕ್ಕೆ ಬುಲೆಟ್ ಬೈಕ್ ಲಾರಿಯ ಅಡಿಗೆ ಸಿಲುಕಿಕೊಂಡಿತು. ಆದರೆ ಬೈಕ್ ಸವಾರನ ಸಮಯ ಪ್ರಜ್ಞೆಯಿಂದಾಗಿ ಆತನಿಗೆ ಯಾವುದೇ ಅಪಾಯ ಉಂಟಾಗಿಲ್ಲ. ಬೈಕ್ ಸವಾರನನ್ನು ಉಮೇಶ ಡುಕ್ರೆ ಎಂದು ಗುರುತಿಸಲಾಗಿದೆ.
ವಿಷಯ ಗೊತ್ತಾಗುತ್ತಿದ್ದಂತೆ ಘಟನಾ ಸ್ಥಳದಲ್ಲಿದ್ದವರು ಲಾರಿ ಚಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರು. ಆದರೆ ಆತ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಬೆಳಗಾವಿ ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.