ನಾಡು-ನುಡಿ ಮೇಲೆ ಪ್ರೀತಿ-ಅಭಿಮಾನ ಇರಲಿ
ಎಲ್ಲ ಚಟುವಟಿಕೆಗಳಿಗೆ ನನ್ನಿಂದ ನಿರಂತರ ಸಹಾಯ, ಸಹಕಾರ ಇದ್ದೇ ಇರುತ್ತದೆ
Team Udayavani, Nov 10, 2021, 5:53 PM IST
ಮೂಡಲಗಿ: ಕನ್ನಡ ರಾಜ್ಯೋತ್ಸವ ಆಚರಣೆಯೊಂದಿಗೆ ಕನ್ನಡ ನಾಡು, ನುಡಿಯ ಬಗ್ಗೆ ಪ್ರೀತಿ, ಅಭಿಮಾನ ಇರಬೇಕು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಪಟ್ಟಣದಲ್ಲಿ ಕನ್ನಡಪರ ಸಂಘಟನೆಗಳು ಹಾಗೂ ಕನ್ನಡಾಭಿಮಾನಿಗಳ ಆಶ್ರಯದಲ್ಲಿ ಜರುಗಿದ ಕನ್ನಡ ರಾಜ್ಯೋತ್ಸವದ ಮೆರವಣಿಗೆಯಲ್ಲಿ ತಾಯಿ ಭುವನೇಶ್ವರಿದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಯುವ ಪೀಳಿಗೆಯು ತಾವು ಬೆಳೆಯುವುದರೊಂದಿಗೆ ಕನ್ನಡ ನಾಡು, ನುಡಿಯ ಬೆಳವಣಿಗೆಗೆ ಅರ್ಪಿಸಿಕೊಳ್ಳಬೇಕು. ಕನ್ನಡದಲ್ಲಿ ಮಾತನಾಡುವುದು ಮತ್ತು ವ್ಯವಹರಿಸುವ ಮೂಲಕ ಕನ್ನಡ ಭಾಷೆಯನ್ನು ಬೆಳೆಸಬೇಕು ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಿತ್ತೂರ ಕರ್ನಾಟಕ ಎಂದು ಘೋಷಣೆ ಮಾಡಿರುವುದು ಉತ್ತರ ಕರ್ನಾಟಕದ ಜನರಿಗೆ ಹೆಮ್ಮೆ ತಂದಿದೆ. ಕನ್ನಡ ನಾಡು, ನುಡಿಯ ಬೆಳವಣಿಗೆಯ ಎಲ್ಲ ಚಟುವಟಿಕೆಗಳಿಗೆ ನನ್ನಿಂದ ನಿರಂತರ ಸಹಾಯ, ಸಹಕಾರ ಇದ್ದೇ ಇರುತ್ತದೆ ಎಂದು ತಿಳಿಸಿದರು.
ಇತ್ತೀಚೆಗೆ ಅಗಲಿದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಅವರು, ಪುನೀತ್ ಅಗಲಿಕೆಯಿಂದ ಇಡೀ ಭಾರತೀಯ ಚಲನಚಿತ್ರೋದ್ಯಮಕ್ಕೆ ಅಪಾರ ಹಾನಿಯಾಗಿದೆ. ರೈತರ ಹೆಮ್ಮೆಯ ಸಹಕಾರ ಸಂಸ್ಥೆಯಾದ ಕೆಎಂಎಫ್‌ನ ನಂದಿನಿ ಉತ್ಪನ್ನಗಳ ರಾಯಭಾರಿಯಾಗಿ ಸಂಸ್ಥೆಯ ಪ್ರಗತಿಗೆ ಕಾರಣೀಕರ್ತರಾಗಿದ್ದರು. ಅಲ್ಲದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪುನೀತ್ ರಾಜಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವುದು ಸ್ವಾಗತಾರ್ಹ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಮೂಡಲಗಿ ಕನ್ನಡ ಸಾಹಿತ್ಯ ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷ ಪ್ರೊ. ಸಂಗಮೇಶ ಗುಜಗೊಂಡ, ಕಸಾಪ ಮಾಜಿ ಅಧ್ಯಕ್ಷ ಬಾಲಶೇಖರ ಬಂದಿ, ಮೂಡಲಗಿ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲ್ಕರ, ಪುರಸಭೆ ಮಾಜಿ ಅಧ್ಯಕ್ಷ ರಾಮಣ್ಣಾ ಹಂದಿಗುಂದ, ಪುರಸಭೆ ಮಾಜಿ ಉಪಾಧ್ಯಕ್ಷರಾದ ಆರ್.ಪಿ. ಸೋನವಾಲ್ಕರ, ಅಜೀಜ ಡಾಂಗೆ, ಹುಸೇನಸಾಬ ಶೇಖ, ಮುಖಂಡರಾದ ಬಿ.ಬಿ. ಹಂದಿಗುಂದ, ಮರೆಪ್ಪ ಮರೆಪ್ಪಗೋಳ, ರಮೇಶ ಸಣ್ಣಕ್ಕಿ, ಅರಭಾವಿ ಬಿಜೆಪಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಪುರಸಭೆ ಸದಸ್ಯರು, ಬಿಜಿಪಿ ಎಸಿ ಮೋರ್ಚಾ ಜಿಲ್ಲಾ ಪ್ರಧಾನಕಾರ್ಯದರ್ಶ ಈರಪ್ಪ ಢವಳೇಶ್ವರ, ಮುಖ್ಯಾ ಧಿಕಾರಿ ದೀಪಕ ಹರ್ದಿ, ತಾಲೂಕು ಮಟ್ಟದ ಅಧಿಕಾರಿಗಳು, ಕನ್ನಡ ಪರ ಸಂಘಟನೆಗಳ ಸದಸ್ಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಮೂಡಲಗಿ ಶಿಕ್ಷಣ ಸಂಸ್ಥೆಯ ಎಸ್‌ಎಸ್‌ಆರ್ ಕಾಲೇಜ್‌ನಿಂದ ಆರಂಭಗೊಂಡ ಕನ್ನಡ ನಾಡು-ನುಡಿಯನ್ನು ಬಿಂಬಿಸುವ ರೂಪಕಗಳನ್ನೊಳಗೊಂಡ ಮೆರವಣಿಗೆಯು ಪ್ರಮುಖ ಬೀದಿಗಳ ಮೂಲಕ ಸಂಚರಿಸಿತು. ನಂತರ ಕಲ್ಮೇಶ್ವರ ವೃತ್ತದಲ್ಲಿ ಕಲ್ಮೇಶ್ವರ ಪುತ್ಥಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೂ ಹಾರ ಸಮರ್ಪಿಸುವ ಮೂಲಕ ಕನ್ನಡ ರಾಜ್ಯೋತ್ಸವ ಮೆರವಣಿಗೆಗೆ ತೆರೆ ಎಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.