ಬೆಳಗಾವಿಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಜಿ.ಹಿರೇಮಠ ಅಧಿಕಾರ ಸ್ವೀಕಾರ

Team Udayavani, Jun 30, 2020, 6:56 PM IST

Hiremut-M-G

ಬೆಳಗಾವಿ: ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಎಂ.ಜಿ.ಹಿರೇಮಠ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.

ಸೇವಾ ನಿವೃತ್ತಿ ಹೊಂದಿದ ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ನೂತನ ಜಿಲ್ಲಾಧಿಕಾರಿಯವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು.

ಬೆಳಗಾವಿ ದೊಡ್ಡ ಮತ್ತು ಸೂಕ್ಷ್ಮ ಜಿಲ್ಲೆಯಾಗಿದೆ. ಆದರೆ ನಾನು ಮೂಲತಃ ಬೆಳಗಾವಿ ಜಿಲ್ಲೆಯವನಾಗಿರುವುದರಿಂದ ಕೆಲಸ ಸುಲಭವಾಗಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.

ಗದಗ ಜಿಲ್ಲೆಯಲ್ಲಿ ಪ್ರವಾಹ ನಿರ್ವಹಿಸಿದ ಅನುಭವವಿದೆ ಜೊತೆಯಲ್ಲಿ ಕೋವಿಡ್ 19 ಸೋಂಕು, ನೆರೆ, ಬರ ಸೇರಿದಂತೆ ಎಲ್ಲಾ ಪರಿಸ್ಥಿತಿಯನ್ನು ನಿಭಾಯಿಸಿದ ಅನುಭವವಿದೆ. ಅದು ಇಲ್ಲಿ ಸಹಕಾರಿಯಾಗಲಿದೆ ಎಂಬ ವಿಶ್ವಾಸವನ್ನು ನೂತನ ಜಿಲ್ಲಾಧಿಕಾರಿಯವರು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಅವರು ತಮ್ಮ ಸೇವಾವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.

ನೂತನ ಜಿಲ್ಲಾಧಿಕಾರಿ ಪರಿಚಯ:
ನೂತನ ಜಿಲ್ಲಾಧಿಕಾರಿ ಮಹಾಂತೇಶ ಜಿ. ಹಿರೇಮಠ ಅವರು ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲ್ಲೂಕಿನ ಗೋಣಿಕೊಪ್ಪ ಗ್ರಾಮದವರು.

ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಎಂ.ಎಸ್ಸಿ (ಭೌತಶಾಸ್ತ್ರ) ಪದವೀಧರರಾಗಿರುವ ಅವರು, ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಕೆಲಕಾಲ ಭೌತಶಾಸ್ತ್ರ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ

1991 ರಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತರಾಗಿ ಸರ್ಕಾರಿ ಸೇವೆ ಆರಂಭಿಸಿದ ಅವರು, ಸೇವೆಯಲ್ಲಿ ಬಡ್ತಿ ಪಡೆದು ಜೂನ್ 2015 ರಲ್ಲಿ ಕರ್ನಾಟಕ ಆಡಳಿತ ಸೇವೆಯಿಂದ ಭಾರತೀಯ ಆಡಳಿತ ಸೇವೆಯ 2010 ರ ತಂಡಕ್ಕೆ ಸೇರ್ಪಡೆಯಾದರು.

ಬಾಗಲಕೋಟೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ, ಹುಬ್ಬಳ್ಳಿ-ಧಾರವಾಡದ ಬಿ‌.ಆರ್.ಟಿ.ಎಸ್. ಕಂಪನಿ ಲಿಮಿಟೆಡ್‌ ನ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಆ ಬಳಿಕ ಆಗಸ್ಟ್ 2018 ರಿಂದ ಇಲ್ಲಿಯವರೆಗೆ ಗದಗ ಜಿಲ್ಲಾಧಿಕಾರಿಯಾಗಿ ತಮ್ಮ ಕರ್ತವ್ಯವನ್ನು ನಿಭಾಯಿಸಿದ್ದರು.

ಟಾಪ್ ನ್ಯೂಸ್

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ

K L RAhul

K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

1-belagavi

Belagavi: ಆಟೋ ಚಾಲಕನ ಮೇಲೆ ಅಪರಿಚಿತ ದುಷ್ಕರ್ಮಿಗಳಿಂದ ಹಲ್ಲೆ

ಅಕ್ರಮ ಆಸ್ತಿ ಸಂಪಾದನೆ ಆರೋಪ: ಬೆಳಗಾವಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಲೋಕಾಯುಕ್ತ ದಾಳಿ

Belagavi: ಅಕ್ರಮ ಆಸ್ತಿ ಸಂಪಾದನೆ ಆರೋಪ… ಬೆಳಗಾವಿ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ದಾಳಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.