ಮಹದಾಯಿ ನೀರು ಬಳಕೆ: ಗೋವಾದಿಂದ ಜಲಾಶಯ ನಿರ್ಮಾಣ

Team Udayavani, Mar 7, 2019, 10:02 AM IST

7-mach-15.jpg

ಬೆಳಗಾವಿ: ಮುಂಬೈ ಕರ್ನಾಟಕದ ನಾಲ್ಕು ಜಿಲ್ಲೆಗಳ 13 ತಾಲೂಕುಗಳ ಜನರ ಕುಡಿಯುವ ನೀರಿಗಾಗಿ ರೂಪಿಸಲಾದ ಕಳಸಾ ಬಂಡೂರಿ ಯೋಜನೆಯನ್ನು ವಿರೋಧಿಸುತ್ತ ಬಂದಿರುವ ಗೋವಾ ಈಗ ಸ್ವತಃ ತಾನೇ ಉಸ್ಗಾಂವ್‌ ಗಂಜೆಮ್‌ ಬಳಿ 100 ಕೋಟಿ ರೂ.ವೆಚ್ಚದಲ್ಲಿ ಆಣೆಕಟ್ಟು ನಿರ್ಮಾಣ ಮಾಡಿ ಓಪಾ ನೀರು ಸಂಸ್ಕರಣ ಘಟಕಕ್ಕೆ ನೀರನ್ನು ತಿರುಗಿಸಲು ಮುಂದಾಗಿದೆ.

ಈ ಹೊಸ ಯೋಜನೆಗೆ ಮಂಗಳವಾರ ಗೋವಾದ ಜಲಸಂಪನ್ಮೂಲ ಖಾತೆಯ ಸಚಿವ ವಿನೋದ ಪಾಲೇಕರ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಮಹದಾಯಿ ನದಿಯಿಂದ ನಿತ್ಯ 110 ಎಮ್‌ಎಲ್‌ಡಿ ಕಚ್ಚಾ ನೀರನ್ನು ಎತ್ತಿ ನೀರು ಶುದ್ಧೀಕರಣ ಕೇಂದ್ರಕ್ಕೆ ತಿರುಗಿಸುವ ಯೋಜನೆ ಇದಾಗಿದೆ.

2006ರಲ್ಲಿ ಈ ಯೋಜನೆ ರೂಪಿಸಿದಾಗ 35 ಎಂಎಲ್‌ಡಿ ನೀರನ್ನು ಮಹದಾಯಿಯಿಂದ ಎತ್ತುವ ಉದ್ದೇಶವಿತ್ತು. ಆದರೆ ನವಂಬರ್‌ದಲ್ಲಿ ಗೋವಾದ ವಿವಿಧ ಪ್ರದೇಶಗಳಿಗೆ ಕುಡಿಯುವ ನೀರಿನ ಅಭಾವ ತಲೆದೋರುತ್ತಿರುವ ಹಿನ್ನೆಲೆಯಲ್ಲಿ ವ್ಯರ್ಥವಾಗಿ ಸಮುದ್ರ ಸೇರುವ ನೀರನ್ನು ಬಳಸಲು ಹೊಸ ತಿರುವು ಯೋಜನೆಯನ್ನು ರೂಪಿಸಲಾಗಿದೆ.

ಕಳೆದ ಆ. 14ರಂದು ಮಹದಾಯಿ ನ್ಯಾಯ ಮಂಡಳಿಯು ಗೋವಾಕ್ಕೆ 24 ಟಿಎಮ್‌ಸಿ ನೀರನ್ನು ಹಂಚಿಕೆ ಮಾಡಿದೆ. ಇದಕ್ಕೂ ಮೊದಲೇ ಅದು 9 ಟಿಎಂಸಿ ನೀರನ್ನು ಬಳಸಿಕೊಳ್ಳುತ್ತಿತ್ತು. ಈಗ ಗೋವಾದ ಹೊಸ ಯೋಜನೆಯು ಅದಕ್ಕೆ ಹಂಚಿಕೆಯಾದ ನೀರಿನ ಪರಿಮಿತಿಯೊಳಗೇ ಇದೆಯೊ ಅಥವಾ ಅದನ್ನು ಮೀರಿದೆಯೊ ಎಂಬುದನ್ನು ಕರ್ನಾಟಕ ಸರಕಾರ ಪರಿಶೀಲಿಸಬೇಕು ಎಂದು ಕಳಸಾ ಬಂಡೂರಿ ಹೋರಾಟ ಸಮಿತಿ ಮುಖಂಡ ಅಶೋಕ ಚಂದರಗಿ ಆಗ್ರಹಿಸಿದ್ದಾರೆ.

ನ್ಯಾಯಾಧಿಕರಣದಿಂದ ಕರ್ನಾಟಕಕ್ಕೆ ಹಂಚಿಕೆಯಾದ ಕಳಸಾ ಯೋಜನೆಯ 2.72 ಟಿಎಂಸಿ ನೀರನ್ನು ಬಳಸಿಕೊಳ್ಳಲು ರಾಜ್ಯ ಸರ್ಕಾರ ಇನ್ನೂ ಮುಂದಾಗಿಲ್ಲ. ಅದಕ್ಕೆ ಅವಶ್ಯಕವಾದ ಹಣವನ್ನೂ ಸಹ ಬಜೆಟ್‌ ನಲ್ಲಿ ಮೀಸಲಿಟ್ಟಿಲ್ಲ. ಈ ಬಗ್ಗೆ ನಮ್ಮ ಭಾಗದ ಜನಪ್ರತಿನಿಧಿಗಳೂ ತುಟಿ ಬಿಚ್ಚಿಲ್ಲ. ಆದರೆ ಗೋವಾ ಸರಕಾರ ಮಾತ್ರ ಮಹಾದಾಯಿ ನೀರನ್ನು ಬಳಸಲು ಮುಂದಾಗಿದೆ ಎಂದು ಅವರು ರಾಜ್ಯ ಸರ್ಕಾರದ ಧೋರಣೆಯನ್ನು ಟೀಕಿಸಿದ್ದಾರೆ.

ಗೋವಾದ ಈ ಹೊಸ ಆಣೆಕಟ್ಟಿನ ಬಗ್ಗೆ ರಾಜ್ಯ ಸರಕಾರ ಮತ್ತು ನ್ಯಾಯವಾದಿಗಳು ಪರಿಶೀಲಿಸಬೇಕು. ಮಹಾದಾಯಿ ನ್ಯಾಯಮಂಡಳಿಯ ತೀರ್ಪಿನ ವಿರುದ್ಧ ಕರ್ನಾಟಕವು ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದು ಆದಷ್ಟು ಬೇಗ ಇಲ್ಲಿನ ಯೋಜನೆಗೆ ಚಾಲನೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.