ಪೊಲೀಸರ ಕಣ್ಣುತಪ್ಪಿಸಿ ಬೆಳಗಾವಿಗೆ ಬಂದ ಮಹಾರಾಷ್ಟ್ರ ಶಾಸಕ ವಶಕ್ಕೆ
Team Udayavani, Jan 17, 2020, 3:19 PM IST
ಬೆಳಗಾವಿ: ಪೊಲೀಸರ ಕಣ್ಣುತಪ್ಪಿಸಿ ಬೆಳಗಾವಿಯಲ್ಲಿಆಯೋಜಿಸಲಾಗಿದ್ದ ‘ಹುತಾತ್ಮರ ದಿನ’ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಮಹಾರಾಷ್ಟ್ರದ ಸಚಿವ ರಾಜೇಂದ್ರ ಪಾಟೀಲ (ಯಡ್ರಾವಕರ) ಅವರನ್ನು ಖಡೇ ಬಜಾರ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ್ದ ರಾಜೇಂದ್ರ ಪಾಟೀಲ ಅವರನ್ನು ಹುತಾತ್ಮಾ ವೃತ್ತದಲ್ಲಿಯೇ ವಶಕ್ಕೆ ಪಡೆದ ಪೊಲೀಸರು, ಮಹಾರಾಷ್ಟ್ರದ ಗಡಿಯಲ್ಲಿ ಬಿಟ್ಟು ಬಂದಿದ್ದಾರೆ.
ಮಹಾರಾಷ್ಟ್ರದ ಸಚಿವ ಕಾರ್ಯಕ್ರಮದಲ್ಲಿ ಭಾಗವಹಿಸಿಲಿದ್ದಾರೆ ಎನ್ನುವ ಮುನ್ಸೂಚನೆ ಹಿನ್ನೆಲೆಯಲ್ಲಿ, ಬೆಳಗಾವಿ ಪೊಲೀಸರು ಬೆಳಿಗ್ಗೆಯಿಂದ ರಾಷ್ಟ್ರೀಯ ಹೆದ್ದಾರಿ ಮಾರ್ಗದಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು.
ನಗರದ ಹೊರವಲಯದ ಸುತಗಟ್ಟಿ ಬಳಿ ಎಸಿಪಿ ನಾರಾಯಣ ಭರಮಣಿ ಮತ್ತು ಇನ್ಸ್ ಪೆಕ್ಟರ್ ಗಡ್ಡೇಕರ ವಾಹನಗಳ ತಪಾಸಣೆ ನಡೆಸುತ್ತಿದ್ದರೆ, ಹೆಚ್ಚುವರಿ ಎಸ್ಪಿ ಅಮರನಾಥ ರೆಡ್ಡಿ ಅವರು ಕೊಗನೊಳ್ಳಿ ಚೆಕ್ ಪೋಸ್ಸ್ ನಲ್ಲಿ ತಪಾಸಣೆ ನಡೆಸುತ್ತಿದ್ದರು.
ಈ ಮಧ್ಯೆ ಸರ್ಕಾರಿ ಕಾರನ್ನು ಬಿಟ್ಟು ಖಾಸಗಿ ಕಾರಿನಲ್ಲಿ ಪ್ರಯಾಣಿಸುವ ಮೂಲಕ ಸಚಿವ ರಾಜೇಂದ್ರ ಪಾಟೀಲ, ಪೊಲೀಸರ ಕಣ್ಣು ತಪ್ಪಿಸಿ ಬೆಳಗಾವಿ ನಗರದಲ್ಲಿ ಪ್ರವೇಶಿಸಿದ್ದರು.
ಎಂಇ ಎಸ್ ಆಯೋಜಿಸಿದ್ದ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಬರುತ್ತಿದ್ದ ಮಹಾರಾಷ್ಟ್ರ ಸಚಿವರನ್ನು ಪೊಲೀಸರು ತಡೆದು ತಮ್ಮ ವಶಕ್ಕೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಎಂಇಎಸ್ ಮುಖಂಡರ ಮಧ್ಯೆ ಮಾತಿನ ಚಕಮಕಿ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.