ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ಪಕ್ಕಾ : ಕುಮಟಳ್ಳಿ
Team Udayavani, Jun 24, 2021, 4:48 PM IST
ಅಥಣಿ: ರಮೇಶ್ ಜಾರಕಿಹೊಳಿ ಅವರು ಮಂತ್ರಿಯಾಗುವ ಎಲ್ಲ ಅರ್ಹತೆಯನ್ನು ಹೊಂದಿದ್ದು ಆರೋಪ ಮುಕ್ತರಾದ ಮೆಲೆ ಸಚಿವ ಸ್ಥಾನ ಪಕ್ಕಾ ಎಂದು ಅಥಣಿ ಶಾಸಕ ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ ಕುಮಟಳ್ಳಿ ಹೇಳಿದರು.
ಅವರು ತಾಲೂಕಿನ ಭರಮಖೋಡಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾಧ್ಯಮಗಳೊಂದಿಗೆ ಮಾತನಾಡಿ, ರಮೇಶ ಜಾರಕಿಹೊಳಿ ಒಬ್ಬ ನಾಯಕರು. ಭಾರತೀಯ ಜನತಾಪಕ್ಷದಲ್ಲಿ ಅವರಿಗೆ ಅಪಾರ ಗೌರವವಿದೆ. ಕೆಟ್ಟಗಳಿಗೆಯಲ್ಲಿ ಪ್ರಕರಣದ ತನಿಖೆ ನಡೆದಿದೆ. ಈ ಪ್ರಕರಣದಿಂದಾಗಿ ರಮೇಶ ಜಾರಕಿಹೊಳಿಯವರ ಮನಸ್ಸಿಗೆ ನೋವಾಗಿದೆ. ಜಾರಕಿಹೊಳಿ ಅವರು ಆರೋಪ ಮುಕ್ತರಾಗಿ ಹೊರಬರುತ್ತಾರೆ. ನಾವೆಲ್ಲರೂ ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಬಂದಿದ್ದೆವೆ. ಮತ್ತೆ ರಮೇಶ್ ಅವರಿಗೆ ಮಂತ್ರಿ ಸ್ಥಾನ ದೊರೆತು ಅವರು ಪಕ್ಷದ ಸೇವೆ ಮಾಡಲಿದ್ದಾರೆ.
ರಮೇಶ್ ಜಾರಕಿಹೊಳಿ ಒಬ್ಬ ಉತ್ತಮ ಸಂಘಟನಾಕಾರರು. ಪಕ್ಷಕ್ಕೆ ಅವರ ಸೇವೆ ಬೇಕು. ಪಕ್ಷವನ್ನು 2023ರಲ್ಲಿ ಮತ್ತೆ ಅಧಿಕಾರಕ್ಕೆ ತರಬೇಕೆಂಬ ಉದ್ದೇಶದಿಂದ ಸಂಘಟನೆಗೆ ಶ್ರಮಿಸುತ್ತಿದ್ದಾರೆ. ಪಕ್ಷದ ಹೈಕಮಾಂಡ್ ನಿರ್ಣಯಕ್ಕೆ ನಾವೆಲ್ಲ ಬದ್ಧ ಎಂದು ಶಾಸಕ ಮಹೇಶ್ ಕುಮಟಳ್ಳಿ ಹೇಳಿದರು. ಈ ವೇಳೆ ಮಲ್ಲಿಕಾರ್ಜುನ ಅಂದಾನಿ, ರಾಜು ಕುಮಟಳ್ಳಿ, ಸಂಕೋನಟ್ಟಿ ಗ್ರಾಪಂ ಸದಸ್ಯ ಪರಶುರಾಮ ಸೋನಕರ, ಎಂ.ಎನ್ ಜಮಖಂಡಿ , ಹಣಮಂತ ಅರ್ಧಾವೂರ, ಪಿಎಸ್‌ಐ ಕುಮಾರ ಹಾಡಕರ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
Udupi: ಪೊಲೀಸ್ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ
Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.