ಆರೋಗ್ಯ ಯೋಜನೆಗಳ ಸದುಪಯೋಗವಾಗಲಿ
ಬೈಲಹೊಂಗಲ ತಾಲೂಕು ಮಟ್ಟದ ಆರೋಗ್ಯ ಶಿಬಿರ
Team Udayavani, Apr 19, 2022, 4:43 PM IST
ಬೈಲಹೊಂಗಲ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಆಯುಷ್ಯಮಾನ್ ಭಾರತ, ಆರೋಗ್ಯ ಕರ್ನಾಟಕ ಯೋಜನೆ ಜಾರಿಗೊಳಿಸಿವೆ. ಅದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಸಂಸದೆ ಮಂಗಲಾ ಅಂಗಡಿ ಹೇಳಿದರು.
ಸೋಮವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ ಇಲಾಖೆ, ಆಯ್ .ಸಿ.ಡಿ.ಎಸ್ ಇಲಾಖೆ, ಆರೋಗ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕಾ ಮಟ್ಟದ ಆರೋಗ್ಯ ಮೇಳ ಉದ್ಘಾಟಿಸಿ ಮಾತನಾಡಿ, ಎಲ್ಲರಿಗೂ ಉಚಿತ ಆರೋಗ್ಯ ಸೇವೆಗಳು ದೊರಕುವಂತಾಗಲು ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ 1650ಕ್ಕೂ ಹೆಚ್ಚು ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ಸೌಲಭ್ಯವಿದೆ ಎಂದರು.
ಮೂರುಸಾವಿರ ಮಠದ ಪ್ರಭುನೀಲಕಂಠ ಸ್ವಾಮೀಜಿ ಮಾತನಾಡಿ, ಆರೋಗ್ಯ ಇಲಾಖೆಯಿಂದ ಸಿಗುವ ಸೇವೆ ಮತ್ತು ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಆರೋಗ್ಯವನ್ನು ಹೊಂದಬೇಕೆಂದರು. ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿ ಇಂಥ ಶಿಬಿರಗಳಲ್ಲಿ ದೀರ್ಘಕಾಲದ ಕಾಯಿಲೆಗಳನ್ನು ಕಂಡುಹಿಡಿದು ಅವುಗಳಿಗೆ ಸೂಕ್ತ ಚಿಕಿತ್ಸೆಯನ್ನು ಪಡೆದು ಆರೋಗ್ಯವಂತರಾಗಿರುವದರ ಜೊತೆಗೆ ಇಲಾಖೆಯ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು.
ಶಾಸಕ ಮಹಾಂತೇಶ ದೊಡಗೌಡರ ಮಾತನಾಡಿ, ಇಂಥ ಶಿಬಿರಗಳಲ್ಲಿ ತಜ್ಞ ವೈದ್ಯರ ಲಭ್ಯತೆ ಇರುವದರಿಂದ ಎಲ್ಲ ಗ್ರಾಮಗಳಿಂದ ಸಾರ್ವಜನಿಕರು ಆಗಮಿಸಿ ಶಿಬಿರದ ಸದುಪಯೋಗವನ್ನು ಪಡೆಸಿಕೊಳ್ಳಬೇಕೆಂದರು.
ಕಾಡಾ ಅಧ್ಯಕ್ಷ ವಿಶ್ವನಾಥ ಪಾಟೀಲ ಮಾತನಾಡಿ, ಇದೊಂದು ಉತ್ತಮ ಶಿಬಿರವಾಗಿದ್ದು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಂಡು ಆರೋಗ್ಯವಂತರಾರಬೇಕೆಂದರು.
ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿ ಡಾ| ಶಶಿಕಾಂತ ಮುನ್ಯಾಳ, ಡಾ| ಮಹಾಂತೇಶ ರಾಮಣ್ಣವರ ರಕ್ತದಾನ, ನೇತ್ರದಾನ, ಅಂಗಾಂಗ ದಾನ ಹಾಗೂ ದೇಹದಾನದ ಕುರಿತು ಮಾತನಾಡಿದರು.
ಇದೆ ವೇಳೆ ಬಸವ್ವಾ ಬಾಗೇಹಳ್ಳಿ ತಮ್ಮ ದೇಹದಾನದ ಮುಚ್ಚಳಿಕೆಯನ್ನು ಸಲ್ಲಿಸಿದರು. ಶಶಿಧರ ಬಗಲಿ, ತಹಶೀಲ್ದಾರ್ ಬಸವರಾಜ ನಾಗರಾಳ, ತಾ.ಪಂ ಇಒ ಸುಭಾಷ ಸಂಪಗಾವಿ, ಅಪರ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಶರಣಪ್ಪಾ ಗಡೆದ, ಪುರಸಭೆ ಅಧ್ಯಕ್ಷ ಬಸವರಾಜ ಜನ್ಮಟ್ಟಿ ಉಪಾಧ್ಯಕ್ಷೆ ಲಕ್ಷ್ಮಿ ಬಡ್ಲಿ , ಪುರಸಭೆ ಮುಖ್ಯಾಧಿಕಾರಿ ಕವಿರಾಜ ನಾಗನೂರ, ಸಿಡಿಪಿಓ ರೇವತಿ ಹೊಸಮಠ, ತಾಲೂಕಾ ಆರೋಗ್ಯಾಧಿಕಾರಿ ಎಸ್ .ಎಸ್.ಸಿದ್ದನ್ನವರ, ಬಿಇಓ ಎ.ಎನ್ ಪ್ಯಾಟಿ, ಜಿಲ್ಲಾ ಆಯುಷ್ಯಾಧಿಕಾರಿ ಡಾ|| ಸುಣಧೋಳಿ, ಡಾ| ನಿರ್ಮಲಾ ಎಸ್ ಎಸ್ ಮುತ್ನಾಳ ಇದ್ದರು.
ಶಿಬಿರದಲ್ಲಿ 1400 ಜನರ ಆರೋಗ್ಯ ತಪಾಸಣೆ ಮಾಡಿ ಚಿಕಿತ್ಸೆ ನೀಡಲಾಯಿತು. ಶಿಬಿರದಲ್ಲಿ ಒಟ್ಟು 30 ತಜ್ಞ ವೆ ವೈದ್ಯರು ಹಾಗೂ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
ಡಾ|| ಎಸ್. ಎಸ್.ಸಿದ್ದನ್ನವರ ಸ್ವಾಗತಿಸಿದರು. ಪ್ರಕಾಶ ಮಾನೆ ನಿರೂಪಿಸಿದರು. ತಾಲೂಕ ನೋಡಲ್ ಅಧಿಕಾರಿ ಡಾ| ಮಹೇಶ ಕಿವಡಸನ್ನವರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.