ವಿದ್ಯಾರ್ಥಿಗಳಿಗೆ ಸಂಸ್ಕಾರ ಮುಖ್ಯ: ಬಾಲದಂಡಿ
Team Udayavani, Aug 30, 2020, 3:21 PM IST
ಮೂಡಲಗಿ: ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಿಗೆ ಸಂಸ್ಕಾರವು ಅತೀ ಮುಖ್ಯ. ಮಕ್ಕಳಲ್ಲಿ ಉತ್ತಮ ಆಚಾರ-ವಿಚಾರ, ಗುರು-ಹಿರಿಯರಲ್ಲಿ ಭಕ್ತಿ ಕಲಿಸುವ ಮೂಲಕ ಶಿಕ್ಷಕರೊಂದಿಗೆ ಪಾಲಕರು ಕೈ ಜೋಡಿಸಬೇಕೆಂದು ಪಿಎಸ್‌ಐ ಎಚ್.ವೈ. ಬಾಲದಂಡಿ ಹೇಳಿದರು.
ತಾಲೂಕಿನ ತುಕ್ಕಾನಟ್ಟಿ ಕನ್ನಡ ಹಿರಿಯ ಪ್ರಾಥಮಿಕ ಶಿಕ್ಷಕರು ಜನವಸತಿ ಪ್ರದೇಶಗಳಲ್ಲಿ ನಡೆಸುತ್ತಿರುವ ವಠಾರ ಓದು ವಿದ್ಯಾಗಮ ಕಾರ್ಯಕ್ರಮ ವೀಕ್ಷಿಸಿ ಮಾತನಾಡಿದ ಅವರು, ಕೋವಿಡ್ ಹರಡುತ್ತಿರುವ ಪರಿಸ್ಥಿತಿಯಲ್ಲಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂದು ಸರಕಾರದ ಉದ್ದೇಶವನ್ನು ಅನುಸರಿಸುತ್ತಿರುವ ಇಲ್ಲಿನ ಶಿಕ್ಷಕರು ಸುಮಾರು 700 ವಿದ್ಯಾರ್ಥಿಗಳನ್ನು ಈ ಯೋಜನೆಯಲ್ಲಿ ತೊಡಗಿಸಿಕೊಂಡು ಕಾರ್ಯಕ್ರಮ ಯಶಸ್ವಿ ಗೊಳಿಸುತ್ತಿರುವುದು ಶ್ಲಾಘನೀಯ. ಅರಬಾಂವಿ ಕ್ಷೇತ್ರದ ಶಾಸಕರ ಶೈಕ್ಷಣಿಕ ಕಾಳಜಿಯಿಂದ ಇಲ್ಲಿನ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ಕಂಡುಕೊಳ್ಳುತ್ತಿದ್ದಾರೆ ಎಂದರು.
ಸ್ಥಳೀಯ ತಾಪಂ ಸದಸ್ಯರಾದ ಪರಶುರಾಮ ಗದಾಡಿ, ಗ್ರಾಪಂ ಮಾಜಿ ಅಧ್ಯಕ್ಷ ಸಿದ್ದಪ್ಪಾ ಹಮ್ಮನವರ, ಮಾಜಿ ಉಪಾಧ್ಯಕ್ಷ ಶಿವಪ್ಪಾ ಮರ್ದಿ, ಪ್ರಗತಿ ಪರ ರೈತ ರಾಮಪ್ಪ ಉಪ್ಪಾರ, ಪ್ರಧಾನ ಗುರುಗಳಾದ ಎ.ವ್ಹಿಗಿರೆನ್ನವರ, ಶಿಕ್ಷಕರಾದ ಪುಷ್ಪಾ ಭರಮದೆ, ಕುಸುಮಾ ಚಿಗರಿ, ವಿಮಲಾಕ್ಷಿ ತೋರಗಲ್, ಶಂಕರ ಲಮಾಣಿ. ಶೀಲಾ ಕುಲಕರ್ಣಿ, ಕಿರಣ ಭಜಂತ್ರಿ, ಸಂಗೀತಾ ತಳವಾರ, ಮಂಜುನಾಥ ಕಮ್ಮಾರ, ಮಹಾದೇವ ಗೋಮಾಡಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Belagavi: ಎಸ್‌ಡಿಎ ರುದ್ರಣ್ಣ ಮೊಬೈಲ್ ಪತ್ತೆ: ಪೊಲೀಸರಿಂದ ತನಿಖೆ ಚುರುಕು
Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
MUST WATCH
ಹೊಸ ಸೇರ್ಪಡೆ
Bengaluru: ಶಾಸಕ ಮುನಿರತ್ನ ಕೇಸ್: ವಿಕಾಸಸೌಧದಲ್ಲಿ ಸ್ಥಳ ಮಹಜರು
Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.