ಮಾರುಕಟ್ಟೆ ಸ್ಥಳಾಂತರ ಅವೈಜ್ಞಾನಿಕ
ಸಿಪಿಎಡ್-ಆರ್‌ಟಿಒ ಮೈದಾನ ಎಪಿಎಂಸಿಗಿಂತ ಚಿಕ್ಕವು: ಕಡಾಡಿ
Team Udayavani, Jun 12, 2021, 4:48 PM IST
ಬೆಳಗಾವಿ: ಕೋವಿಡ್ ಹಿನ್ನಲೆಯಲ್ಲಿ ಸಾಮಾಜಿಕ ಅಂತರವನ್ನು ಕಾಪಾಡುವ ಉದ್ದೇಶದಿಂದ ನಗರದ ಎ.ಪಿ.ಎಂ.ಸಿ ಮಾರ್ಕೆಟ್ ಆವರಣದಲ್ಲಿದ್ದ ತರಕಾರಿ ಮಾರುಕಟ್ಟೆಯನ್ನು ಸಿ.ಪಿ.ಎಡ್ ಮೈದಾನ ಮತ್ತು ಆರ್.ಟಿ.ಒ ಮೈದಾನಗಳಿಗೆ ಸ್ಥಳಾಂತರಿಸಿರುವುದು ಅವೈಜ್ಞಾನಿಕ ಕ್ರಮವಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅಸಮಾಧಾನ ವ್ಯಕ್ತಪಡಿಸಿದರು.
ನಗರದ ತರಕಾರಿ ಮಾರುಕಟ್ಟೆಗಳಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಎ.ಪಿ.ಎಂ.ಸಿ ಆವರಣದ ಸುಮಾರು 13 ಎಕರೆಗಳ ವಿಶಾಲ ಪ್ರದೇಶದಲ್ಲಿ ಸುಸಜ್ಜಿತ ತರಕಾರಿ ಮಾರುಕಟ್ಟೆಗಳ ಪ್ರಾಂಗಣ ರಚನೆಯಾಗಿದ್ದು, ಅದನ್ನು ಕೋವಿಡ್ ನಿಯಮಾವಳಿಗಳ ಪ್ರಕಾರ ಸಾಮಾಜಿಕ ಅಂತರವನ್ನು ಕಾಪಾಡಿ ಉಪಯೋಗಿಸಿಕೊಳ್ಳಬೇಕಾಗಿತ್ತು. ಆದರೆ ಇದಕ್ಕಿಂತ ಕಡಿಮೆ ಪ್ರದೇಶದ ಸ್ಥಳಗಳಿಗೆ ವರ್ಗಾವಣೆ ಮಾಡಿದ್ದು ಸರಿಯಾದ ಕ್ರಮವಲ್ಲ ಎಂದು ಅಭಿಪ್ರಾಯಪಟ್ಟರು.
ಸರಕಾರದ ನಿಯಮಾನುಸಾರ ಬೆಳಿಗ್ಗೆ 6 ರಿಂದ 10 ರವರೆಗೆ ಸಮಯ ನಿಗದಿ ಮಾಡಿದ ಕಾರಣ ಕಡಿಮೆ ಸಮಯದಲ್ಲಿ ಹೆಚ್ಚು ಖರೀದಿದಾರರಿಲ್ಲದೇ ರೈತರು ಕಡಿಮೆ ಬೆಲೆಗೆ ತರಕಾರಿ ಮಾರಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಇದರಿಂದ ತರಕಾರಿ ಬೆಳೆದ ರೈತನಿಗೆ ಹಾನಿಯಾಗಿದೆ ಹಾಗೂ ಸದ್ಯ ಮಳೆಗಾಲ ಪ್ರಾರಂಭವಾದ ಕಾರಣ ಮೈದಾನಗಳಲ್ಲಿ ವ್ಯಾಪಾರ ವಹಿವಾಟು ಮಾಡುವಲ್ಲಿ ಸಾಕಷ್ಟು ತೊಂದರೆಯಾಗುತ್ತದೆ. ಎ.ಪಿ.ಎಂ.ಸಿಯಲ್ಲಿ ಇರುವ ವ್ಯವಸ್ಥೆಯನ್ನು ಬಿಟ್ಟು ಹೊರಾಂಗಣದಲ್ಲಿ ತಾತ್ಕಾಲಿಕವಾಗಿ ಶೆಡ್‌ಗಳ ನಿರ್ಮಾಣ ಸಹ ಅನಗತ್ಯ ಖರ್ಚಿನ ಹೊರೆಯಾಗಿದೆ ಎಂದು ಕಡಾಡಿ ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಎ.ಪಿ.ಎಂ.ಸಿ ಅಧ್ಯಕ್ಷ ಯುವರಾಜ ಕದಮ್, ನಿರ್ದೇಶಕರಾದ ಮನೋಜ್ ಮಸ್ತಿಕೊಪ್ಪ, ಎ.ಪಿ.ಎಂ.ಸಿ ಅದೀಕ್ಷಕ ನವೀನ ಪಾಟೀಲ, ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷರಾದ ದುಂಡಪ್ಪ ಬೆಂಡವಾಡ, ಬೆಳಗಾವಿ ಮಹಾನಗರ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಕಲ್ಲಪ್ಪ ಶಹಪೂರಕರ, ಬೆಳಗಾವಿ ಗ್ರಾಮೀಣ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಶ್ರೀಕರ ಕುಲಕರ್ಣಿ, ಪ್ರಧಾನ ಕಾರ್ಯದರ್ಶಿ ಬಾಹುಬಲಿ ದೊಡ್ಡನ್ನವರ, ಮಹಾವೀರ ನಾಶಿಪುಡಿ, ಉಪಾಧ್ಯಕ್ಷ ಶೇಖರಗೌಡ ಮೊದಗಿ, ರೈತ ಮುಖಂಡ ಪ್ರಕಾಶ ನಾಯಕ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.