ಆರೋಗ್ಯ ಜಾಗೃತಿಗೆ ಮಾಸ್ಕ್ ದಿನ
Team Udayavani, Jun 19, 2020, 12:13 PM IST
ಬೆಳಗಾವಿ: ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಪಾರಾಗಲು ಮುಖಕ್ಕೆ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸೋಪಿನಿಂದ ಕೈತೊಳೆದುಕೊಳ್ಳುವದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅವಶ್ಯಕವಾಗಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
ಮಾಸ್ಕ್ ಬಳಕೆಯ ಬಗ್ಗೆ ಜಾಗೃತಿ ಮೂಡಿಸಲು ರಾಜ್ಯ ಸರ್ಕಾರದ ನಿರ್ದೇಶನದಂತೆ ಗುರುವಾರ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಂಡಿದ್ದ ಮಾಸ್ಕ್ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇನ್ನು ಬರುವ ದಿನಗಳಲ್ಲಿ ನಮ್ಮ ಆರೋಗ್ಯವನ್ನು ನಾವೇ ಕಾಪಾಡಿಕೊಳ್ಳಬೇಕು. ಆದ್ದರಿಂದ ಕೋವಿಡ್-19 ರೋಗದಿಂದ ನಮ್ಮನ್ನು ನಾವು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು ಎಂದು ಜನರಿಗೆ ಜಾಗೃತಿ ಮೂಡಿಸಲು ಮಾಸ್ಕ್ ದಿನಾಚರಣೆ ಮಾಡಲಾಗುತ್ತಿದೆ. ಯಾರಾದರು ಮಾಸ್ಕ್ ಧರಿಸದೆ ಓಡಾಡಿದರೆ ಅಂತಹವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಅದಕ್ಕಾಗಿ ಪ್ರತಿಯೊಬ್ಬ ವ್ಯಕ್ತಿಯೂ ಜಿಲ್ಲಾಡಳಿತ ಹಾಗೂ ಸರ್ಕಾರದ ಮಾರ್ಗದರ್ಶನವನ್ನು ಪಾಲನೆ ಮಾಡಬೇಕು ಎಂದು ಹೇಳಿದರು.
ನಗರದ ಅಶೋಕ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಜಾಗೃತಿ ಜಾಥಾ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಮಾಸ್ಕ್ ಧರಿಸುವುದರ ಅವಶ್ಯಕತೆಯ ಬಗ್ಗೆ ಮನವರಿಕೆ ಮಾಡಲಾಯಿತು. ಇದೇ ವೇಳೆ ಬೈಕ್ ಸವಾರರಿಗೆ ಹೂವು ನೀಡುವ ಮೂಲಕ ಮಾಸ್ಕ್ ಧರಿಸುವುದರ ಬಗ್ಗೆ ಜಾಗೃತಿ ಮೂಡಿಸಲಾಯಿತು. ಜಾಗೃತಿ ಜಾಥದಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳು ಮಾಸ್ಕ್ ಧರಿಸುವಿಕೆ, ಸ್ಯಾನಿಟೈಸರ್ ಬಳಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಬಗ್ಗೆ ಜಾಗೃತಿ ಫಲಕಗಳನ್ನು ಪ್ರದರ್ಶಿಸಿದರು.
ಮಾಸ್ಕ್ ದಿನಾಚರಣೆಯ ಜಾಗೃತಿ ಜಾಥಾದಲ್ಲಿ ಜಿಲ್ಲಾಧಿಕಾರಿ ಡಾ| ಎಸ್.ಬಿ ಬೊಮ್ಮನಹಳ್ಳಿ, ನಗರ ಪೊಲೀಸ್ ಆಯುಕ್ತ ಬಿ.ಎನ್. ಲೋಕೇಶ್ ಕುಮಾರ್, ಕೋವಿಡ್-19 ವಿಶೇಷ ಅಧಿಕಾರಿ ರಾಜೇಂದ್ರ ಚೋಳನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯತ ಸಿಇಒ ಡಾ| ರಾಜೇಂದ್ರ ಕೆ.ವಿ. ಮೊದಲಾದವರು ಭಾಗವಹಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.