ಅತಿವೃಷ್ಟಿಯ ಹಾನಿಗೆ 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ: ಸಚಿವ ಗೋವಿಂದ ಕಾರಜೋಳ
Team Udayavani, Aug 10, 2022, 3:18 PM IST
ಬೆಳಗಾವಿ: ಅತಿವೃಷ್ಟಿಯಿಂದ ಮನೆಹಾನಿ ಅಥವಾ ಮನೆಗಳಿಗೆ ನೀರು ನುಗ್ಗಿದ ಸಂದರ್ಭದಲ್ಲಿ ಸಂತ್ರಸ್ತ ಕುಟುಂಬಗಳಿಗೆ 24 ಗಂಟೆಗಳಲ್ಲಿ ಪರಿಹಾರ ನೀಡಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಸೂಚನೆ ನೀಡಿದರು.
ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಕೈಗೊಳ್ಳಲಾದ ಕ್ರಮಗಳ ಪರಿಶೀಲನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯಾವುದೇ ಕುಟುಂಬಗಳು 2019 ರ ನಂತರ ಮನೆ ಬಿಟ್ಟು ಬೇರೆ ಕಡೆ ಇದ್ದಾಗಲೂ ಅಂತಹ ಖಾಲಿ ಮನೆಗಳು ಬಿದ್ದರೂ ಕೂಡ ಅಂತಹ ಕುಟುಂಬಗಳಿಗೂ ಮನೆಹಾನಿ ಪರಿಹಾರವನ್ನು ಬಿಡುಗಡೆಗೊಳಿಸಬೇಕು ಎಂದರು.
ವಿದ್ಯುತ್ ಸಂಪರ್ಕ ಕಡಿತಗೊಂಡರೆ ಕೂಡಲೇ ಸಂಪರ್ಕ ಕಲ್ಪಿಸಬೇಕು. ಜಲಜೀವನ ಮಿಷನ್ ಕಾಮಗಾರಿ ಪೂರ್ಣಗೊಳ್ಳುವವರೆಗೆ ಕುಟುಂಬಗಳು ಹೊಂದಿರುವ ಹಳೆಯ ನಳಗಳ ಸಂಪರ್ಕವನ್ನು ಮುಂದುವರಿಸಬೇಕು. ಜಲಜೀವನ ಮಿಷನ್ ಯೋಜನೆ ಸಂಪೂರ್ಣ ಅನುಷ್ಠಾನಗೊಂಡ ಬಳಿಕವೇ ಹಳೆಯ ಸಂಪರ್ಕ ತೆರವುಗೊಳಿಸಬೇಕು ಎಂದು ಹೇಳಿದರು.
ಇದನ್ನೂ ಓದಿ: ಪ್ರವೀಣ್ ಹತ್ಯೆ: ಪ್ರಮುಖ ಮೂವರು ಆರೋಪಿಗಳಿಗಾಗಿ ಕಾರ್ಯಾಚರಣೆ; ಎಡಿಜಿಪಿ ಅಲೋಕ್ ಕುಮಾರ್
ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಬಳ್ಳಾರಿ ನಾಲಾ ನಿರ್ವಹಣೆಯನ್ನು ಪಾಲಿಕೆ ಹಾಗೂ ಉಳಿದ ಕಡೆಗಳಲ್ಲಿ ನೀರಾವರಿ ಇಲಾಖೆಯ ವತಿಯಿಂದ ನಿರ್ವಹಿಸಬೇಕು ಎಂದರು.
ಪಾಲಿಕೆ ವ್ಯಾಪ್ತಿಯಲ್ಲಿ 35 ಕಿ.ಮೀ. ಹರಿವು ಇರುತ್ತದೆ. ಅದನ್ನು ನಿರ್ವಹಿಸಲು ಪಾಲಿಕೆ ಕ್ರಮ ಕೈಗೊಳ್ಳಬೇಕು. ನಾಲಾ ಅಕ್ಕಪಕ್ಕದ ಮನೆಗಳಿಗೆ ಹಾಗೂ ಬೆಳೆಗಳಿಗೆ ಹಾನಿಯಾಗದಂತೆ ನೋಡಿಕೊಳ್ಳಬೇಕು ಎಂದರು.
ನಾಲಾ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಲು ಅನುಕೂಲವಾಗುವಂತೆ ಸಮಗ್ರ ಯೋಜನಾ ವರದಿ(ಡಿಪಿಆರ್) ರೂಪಿಸುವಂತೆ ಸೂಚನೆ ನೀಡಿದ ಅವರು, ನಾಲಾ ವ್ಯಾಪ್ತಿಯ ರೈತರನ್ನು ಭೇಟಿ ಮಾಡಿ ಅವರ ಮನವೊಲಿಸುವ ಮೂಲಕ ಬದುಗಳಲ್ಲಿ ನಿಲ್ಲುವ ನೀರು ನಾಲಾಕ್ಕೆ ಸರಾಗವಾಗಿ ಹರಿಯುವಂತೆ ಮಾಡಬೇಕು ಎಂದರು.
ಜಿಲ್ಲೆಯಲ್ಲಿ 255 ಕೋಟಿ ಹಾನಿ: ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಒಟ್ಟಾರೆ 255 ಕೋಟಿ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಎನ್.ಡಿ.ಆರ್.ಎಫ್. ಮಾರ್ಗಸೂಚಿ ಪ್ರಕಾರ ಹಾನಿಯ ಕುರಿತು ಪ್ರಸ್ತಾವನೆಯನ್ನು ಸರಕಾರಕ್ಕೆ ಕಳಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಆಗಸ್ಟ್ 12 ರಿಂದ 15 ರವರೆಗೆ ದೇಶದಾದ್ಯಂತ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗಾ ಅಭಿಯಾನವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಬೇಕು ಎಂದು ಹೇಳಿದ ಗೋವಿಂದ ಕಾರಜೋಳ
ಜಿಲ್ಲೆಯಲ್ಲಿ ಹತ್ತು ಲಕ್ಷಕ್ಕೂ ಅಧಿಕ ಮನೆಗಳಿದ್ದು, ಬಹುತೇಕ ಮನೆಗಳ ಮೇಲೆ ನಾಗರಿಕರು ಸ್ವಯಂಪ್ರೇರಣೆಯಿಂದ ಧ್ವಜಾರೋಹಣ ಮಾಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಎಲ್ಲ ಸಹಕಾರ ನೀಡಬೇಕು ಎಂದರು.
ಜಿಲ್ಲೆಯಲ್ಲಿ ಹತ್ತು ಲಕ್ಷಕ್ಕೂ ಅಧಿಕ ಮನೆಗಳಿದ್ದು, ಶೇ.75 ರಷ್ಟು ಮನೆಗಳಿಗೆ ಧ್ವಜಗಳನ್ನು ಪೂರೈಸುವ ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಜಿಲ್ಲೆಯಲ್ಲಿ ಹತ್ತು ಲಕ್ಷ ಮನೆಗಳಿದ್ದು, ಅದರ ಶೇ.75 ರಷ್ಟು ಮನೆಗಳಿಗೆ ಧ್ವಜ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಜಿಲ್ಲೆಗೆ 4.83 ಲಕ್ಷ ಧ್ವಜಗಳು ಈಗಾಗಲೇ ಬಂದಿರುತ್ತವೆ. ಅವುಗಳ ಪೈಕಿ 3.50 ಲಕ್ಷಕ್ಕೂ ಅಧಿಕ ಧ್ವಜಗಳನ್ನು ಈಗಾಗಲೇ ವಿತರಿಸಲಾಗಿದೆ ಎಂದು ಹೇಳಿದರು.
ಬೆಳಗಾವಿ ಪೊಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ
ಪಾಲಿಕೆ ಆಯುಕ್ತರಾದ ಡಾ.ರುದ್ರೇಶ್ ಘಾಳಿ, ಉಪ ವಿಭಾಗಾಧಿಕಾರಿಗಳಾದ ರವೀಂದ್ರ ಕರಲಿಂಗಣ್ಣವರ, ಸಂತೋಷ ಕಾಮಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕೋಣಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.