ಅಂತರ್ಜಲ ಚೈತನ್ಯ ಹೆಚ್ಚಿಸಲು ಬೆಳಗಾವಿ ಜಿಲ್ಲೆಯನ್ನು ರಾಜ್ಯಕ್ಕೆ ಮಾದರಿಯನ್ನಾಗಿಸಲು ಚಿಂತನೆ
Team Udayavani, May 26, 2020, 4:50 PM IST
ಬೆಳಗಾವಿ: ಅಂತರ್ಜಲ ಚೈತನ್ಯ ಹೆಚ್ಚಿಸಲು ಬೆಳಗಾವಿ ಜಿಲ್ಲೆಯನ್ನು ಇಡೀ ರಾಜ್ಯಕ್ಕೆ ಮಾದರಿ ಮಾಡಬಹುದು. ಆದ್ದರಿಂದ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಆರ್ಟ್ ಆಫ್ ಲಿವಿಂಗ್ ಜತೆ ಸೇರಿಕೊಂಡು ಈ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.
ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಅಂತರ್ಜಲ ಚೈತನ್ಯ ಹಾಗೂ ನರೇಗಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ನೀರಾವರಿ ಹಾಗೂ ಕಬ್ಬು ಬೆಳೆ ಹೆಚ್ಚಾಗಿರುವ ತಾಲ್ಲೂಕುಗಳನ್ನು ಹೊರತುಪಡಿಸಿ ಇತರ ಕಡೆಗಳಲ್ಲಿ ಅಂತರ್ಜಲ ಚೈತನ್ಯ ಹೆಚ್ಚಳಕ್ಕೆ ಆದ್ಯತೆ ನೀಡಬೇಕು. ಜಿಲ್ಲಾಧಿಕಾರಿಗಳ ಜತೆ ಸಮನ್ವಯತೆ ಸಾಧಿಸುವ ಮೂಲಕ ಘನತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣಕ್ಕೆ ಆದಷ್ಟು ಬೇಗ ಭೂಮಿ ಪಡೆದುಕೊಳ್ಳಬೇಕು ಎಂದರು.
ನರೇಗಾ ಯೋಜನೆ ಅನುಷ್ಠಾನದ ಕುರಿತು ಸಚಿವರಿಗೆ ಮಾಹಿತಿ ನೀಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ. ಮಾತನಾಡಿ ಬೆಳಗಾವಿ ಜಿಲ್ಲೆಗೆ ಒಟ್ಟು 1.20 ಕೋಟಿ ಮಾನವ ದಿನಗಳ ಸೃಜನೆಯ ಗುರಿ ನೀಡಲಾಗಿತ್ತು. ಇದುವರೆಗೆ ಶೇ.42 ರಷ್ಟು ಗುರಿ ಸಾಧಿಸಲಾಗಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ಸ್ವಲ್ಪಮಟ್ಟಿಗೆ ನಿಧಾನವಾಗಿ ಕಾಮಗಾರಿ ಆರಂಭಗೊಂಡಿದ್ದು, ಇದೀಗ ಚುರುಕುಗೊಂಡಿದೆ ಎಂದು ವಿವರಿಸಿದರು. ಜಿಲ್ಲೆಯಲ್ಲಿ 3444 ಬದು ನಿರ್ಮಾಣ ಗುರಿ ಹೊಂದಲಾಗಿದ್ದು, ಜಿಲ್ಲೆಯ ಬಹುತೇಕ ರೈತರಿಗೆ ಅನುಕೂಲ ಕಲ್ಪಿಸಲಾಗುವುದು.
ಹಿರಣ್ಯಕೇಶಿ ನದಿ ವ್ಯಾಪ್ತಿಯಲ್ಲಿ, 2,33, 713 ಮಾನವ ದಿನಗಳ ಸೃಜನೆಗೆ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಟ್ಯಾಂಕರ್ ಮೂಲಕ ನೀರು ಪೂರೈಸುವ ಪರಿಸ್ಥಿತಿ ಬಂದಿಲ್ಲ ಎಂದರು.
ಶಾಸಕ ಮಹಾಂತೇಶ ದೊಡ್ಡಗೌಡ್ರ ಮಾತನಾಡಿ ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜಲಾಮೃತ ಯೋಜನೆಯನ್ನು ಇನ್ನಷ್ಟು ವಿಸ್ತರಿಸಬೇಕು ಎಂದು ಮನವಿ ಮಾಡಿದರು.
ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ ಮಾತನಾಡಿ, ಅಂತರ್ಜಲ ಚೈತನ್ಯ ಹೆಚ್ಚಿಸುವುದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.