ಬೆಳಗಾವಿ ಗಡಿ ವಿಷಯದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ: ಆರ್.ಅಶೋಕ್
Team Udayavani, Mar 20, 2021, 12:55 PM IST
ಬೆಳಗಾವಿ: ಬೆಳಗಾವಿ ಗಡಿ ವಿಷಯದಲ್ಲಿ ಕರ್ನಾಟಕ ಸರ್ಕಾರ ರಾಜಿ ಮಾಡಿಕೊಳ್ಳುವುದಿಲ್ಲ. ಈ ನೆಲ, ಈ ಜಲವನ್ನು ಯಾವುದೇ ಬೆಲೆ ತೆತ್ತಾದರೂ ರಕ್ಷಣೆ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ರಕ್ಷಣೆ ಮಾಡುತ್ತದೆ. ಶಿವಸೇನೆ ಪುಂಡಾಟಿಕೆ ನಿಲ್ಲಿಸಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಶಿವಸೇನೆ ಪುಂಡಾಟಿಕೆ ನಿರಂತರವಾಗಿ ನಡೆಯುತ್ತಿದೆ. ಕಠಿಣ ಕ್ರಮ ಜರುಗಿಸಿ ನಾವು ನಿಲ್ಲಿಸಬೇಕಿದೆ ಎಂದರು.
ಇದನ್ನೂ ಓದಿ:ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ: ಮಧ್ಯಾಹ್ನವಾದರೂ ಸ್ಥಳಕ್ಕೆ ಆಗಮಿಸದ ದಕ್ಷಿಣ ಕನ್ನಡ ಡಿಸಿ
ಪೊಲೀಸ್ ಅಧಿಕಾರಿ, ಜಿಲ್ಲಾಧಿಕಾರಿಗೆ ಇಂಥವರನ್ನು ಮಟ್ಟ ಹಾಕಲು ನಾನು ಸೂಚನೆ ಕೊಡುತ್ತೇನೆ. ಬಹಳಷ್ಟು ಜನ ಮರಾಠಿಗರು ಇದ್ದಾರೆ ಅವರು ಶಾಂತಿ ಬಯಸುತ್ತಾರೆ. ಶಿವಸೇನೆ ಕಾರ್ಯಕರ್ತರಿಗೆ ಸರ್ಕಾರ ಸರಿಯಾದ ಪಾಠ ಕಲಿಸಲಿದೆ. ಶಿವಸೇನೆಯವರಿಗೆ ಎಬಿಸಿಡಿಯಿಂದ ಹಿಡಿದು ಕನ್ನಡದ ಅಕ್ಷರ ಮಾಲೆಗಳನ್ನು ಕಲಿಸುತ್ತೇವೆ ಎಂದರು.
ಶಿವಸೇನೆ ಕರ್ನಾಟಕದಲ್ಲಿ ಬ್ಯಾನ್ ಮಾಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಶಿವಸೇನೆ ಅದೊಂದು ರಾಜಕೀಯ ಪಕ್ಷ. ಅದನ್ನ ಬ್ಯಾನ್ ಮಾಡಲು ಅವಕಾಶ ಇದೆಯೋ ಇಲ್ಲವೋ ಗೊತ್ತಿಲ್ಲ. ಅದರ ಬಗ್ಗೆ ನಾನು ನೋಡುವೆ ಎಂದು ಹೇಳಿದರು.
ಬೆಳಗಾವಿ ಲೋಕಸಭೆ ಉಪ ಚುನಾವಣೆ ವಿಚಾರ, ನಿನ್ನೆ ಅರುಣಸಿಂಗ್ ಬಂದಿದ್ದರು. ಚುನಾವಣೆಯ ಕಮಿಟಿಯಲ್ಲಿ ನಾನು ಇರುವೆ. ನನಗೆ ತಿಳಿದಿರುವಂತೆ ಅಭ್ಯರ್ಥಿ ಯಾರಾಗಬೇಕೆಂದು ಅವರಿಗೆ ತಿಳಿಸಿರುವೆ. ಬೆಳಗಾವಿ ಲೋಕಸಭೆ ಅಭ್ಯರ್ಥಿ ಬಗ್ಗೆ ಅರುಣ ಸಿಂಗ್ ಜೊತೆಗೆ ನಾನು ಒನ್ ಟು ಒನ್ ಮಾತಾಡಿ ಹೇಳಿರುವೆ. ಬೆಳಗಾವಿ ಲೋಕಸಭೆಗೆ ನನ್ನ ದೃಷ್ಟಿಯಲ್ಲಿ ಯಾರಿಗೆ ಟಿಕೆಟ್ ಕೊಟ್ಟರೆ ಒಳ್ಳೆಯದು ಅಂತ ಹೇಳಿರುವೆ. ಉಳಿದಂತೆ ಬಿಜೆಪಿ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದರು.
ಇದನ್ನೂ ಓದಿ: ಕೇಂದ್ರ ಸಮಿತಿಗೆ ಉಪ ಚುನಾವಣೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿ: ಸಿ.ಟಿ.ರವಿ
ಟಿಕೆಟ್ ರೇಸ್ ನಲ್ಲಿ ಸುರೇಶ ಅಂಗಡಿ ಕುಟುಂಬದ ಸೇರಿ ಬಹಳ ಜನರು ಇದ್ದಾರೆ. ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಒತ್ತು ಕೊಡುತ್ತೇವೆ. ಅದೇ ರೀತಿ ಅಂಗಡಿಯವರ ಕುಟುಂಬ ಪಕ್ಷದೊಂದಿಗೆ ತುಂಬಾ ಒಡನಾಟವಿದೆ. ಈ ವಿಚಾರವನ್ನು ಪಕ್ಷದ ಗಮನಕ್ಕೆ ತಂದಿರುವೆ. ಕೋರ್ ಕಮಿಟಿ ಮೀಟಿಂಗ್ ನಲ್ಲಿ 3 ಜನ ಗೆಲ್ಲುವಂತಹ ಅಭ್ಯರ್ಥಿಗಳ ಹೆಸರನ್ನು ಪಕ್ಷದ ಹೈಕಮಾಂಡ್ ಗೆ ಕಳುಹಿಸಿರುವೆ. ನನ್ನ ಹೆಸರುಗಳನ್ನು ಅರುಣ್ ಸಿಂಗ್ ಅವರಿಗೆ ಕೊಟ್ಟಿರುವೆ. ಪಕ್ಷದ ಹೈಕಮಾಂಡ್ ಯಾರಿಗೆ ಕೊಟ್ಟರೂ ನಮ್ಮ ಒಪ್ಪಿಗೆ ಇದೆ ಅಂತ ಹೇಳಿರುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.