ಹಸಿರುಕ್ರಾಂತಿ ಸಂಪಾದಕ ಕಲ್ಯಾಣರಾವ್ ನಿಧನಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಸಂತಾಪ
Team Udayavani, Oct 6, 2021, 8:08 PM IST
ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಮುಚಳಂಬಿಯವರು ನಿಧನರಾಗಿರುವುದು ಅತ್ಯಂತ ನೋವಿನ ಸಂಗತಿ ಎಂದು ಮುಜರಾಯಿ,ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆಯವರು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.
ರಾಜ್ಯದ ರೈತ ಹೋರಾಟದಲ್ಲೇ ತಮ್ಮ ಜೀವನದ ಬಹುತೇಕ ಸಮಯ ಕಳೆದ ಮುಚಳಂಬಿ ಅವರು, ಪ್ರೋ ನಂಜುಡಸ್ವಾಮಿ, ಬಾಬಾಗೌಡ ಪಾಟೀಲ್, ಪುಟ್ಟಣ್ಣಯ್ಯ ಸೇರಿದಂತೆ ರೈತ ಹೋರಾಟಗಾರರಿಗೆ ಸಾಥ್ ನೀಡಿದ್ದರು.. ರೈತರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆರೋಗ್ಯ ಲೆಕ್ಕಿಸದೇ ಗಡಿ ಜಿಲ್ಲೆಗಳಲ್ಲಿ ರೈತರ ಪರವಾಗಿ ನಿರಂತರ ಹೋರಾಟ ಮಾಡುತ್ತಲೇ ಇದ್ದರು.
ಹೋರಾಟದ ಮನೋಭಾವದ ಕಲ್ಯಾಣರಾವ್ ಮುಚಳಂಬಿಯವರು ಬುಧವಾರ ಮುಂಜಾನೆಯೂ ಸಾವಳಗಿ ಬಳಿ ಹೋರಾಟದ ಅಂಗವಾಗಿ ಪಾದಯಾತ್ರೆಯೊಂದರಲ್ಲಿ ಪಾಲ್ಗೊಂಡು, ಹೋರಾಟದ ಸಮಯದಲ್ಲಿಯೇ ಅಸುನೀಗಿರುವುದು ಅವರ ವ್ಯಕ್ತಿತ್ವದ ಸಾಧನೆಗೆ ಸಿಕ್ಕ ಗೌರವ.
ಗಡಿ ಜಿಲ್ಲೆಯಲ್ಲಿ ಕನ್ನಡದ ವಾತಾವರಣ ಜೀವಂತವಾಗಿಡಲು ಹಸಿರು ಕ್ರಾಂತಿ ಎಂಬ ಪತ್ರಿಕೆಯ ಮೂಲಕ ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಸೇರಿದಂತೆ ಹಲವು ನಾಯಕರಿಗೆ ಕೃಷಿ ಸಂಕಷ್ಟಗಳ ಬಗ್ಗೆ ಲೇಖನಗಳ ಮೂಲಕ ಗಮನಸೆಳೆಯುವ ಪ್ರಯತ್ನ ಮಾಡಿದ್ದರು.
ರೈತ ಹೋರಾಟಗಳ ಜೊತೆಗೆ ಮಠ ಮಾನ್ಯಗಳೊಂದಿಗೆ, ಮಠಾಧೀಶರೊಂದಿಗೆ, ಜನಪರ ಸಂಘಟನೆಗಳ ಜೊತೆಗೆ ನಿಕಟ ಸಂಪರ್ಕ ಹೊಂದಿದ್ದ ಕಲ್ಯಾಣರಾವ್ ಮುಚಳಂಬಿ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವರಾದ ಶಶಿಕಲಾ ಜೊಲ್ಲೆಯವರು ಸಂತಾಪದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
MUST WATCH
ಹೊಸ ಸೇರ್ಪಡೆ
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.