‘ಉಪವಾಸ ಸಾಯೋದು ಒಳ್ಳೆಯದು: ವಿವಾದ ಸೃಷ್ಠಿಸಿದ ಸಚಿವ ಉಮೇಶ್ ಕತ್ತಿ ಮಾತು
Team Udayavani, Apr 28, 2021, 2:46 PM IST
ಬೆಳಗಾವಿ : ಕೋವಿಡ್ ಮಹಾಮಾರಿ ಸೃಷ್ಠಿಸಿರುವ ಬಿಕ್ಕಟ್ಟಿನಿಂದ ಜನ ಸಂಕಷ್ಟದಲ್ಲಿದ್ದರೆ ಆಹಾರ ಸಚಿವ ಉಮೇಶ್ ಕತ್ತಿ ಮಾತ್ರ ಉಡಾಫೆ ಉತ್ತರ ನೀಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.
ಆಗಿದ್ದೇನು ?
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಂಘದ ಕಾರ್ಯಕರ್ತ ಈಶ್ವರ್ ಪಡಿತರ ಅಕ್ಕಿ ಕಡಿತಗೊಳಿಸಿರೋದನ್ನು ಪ್ರಶ್ನಿಸಿದರು. ಈ ವೇಳೆ ಉತ್ತರ ಕರ್ನಾಟಕದಲ್ಲಿ ಅಕ್ಕಿ ಜತೆಗೆ ಜೋಳ ಕೊಡ್ತಿವಿ. ಲಾಕ್ಡೌನ್ ಸಂದರ್ಭದಲ್ಲಿ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರ ಕೊಡುತ್ತೆ. ಮುಂದಿನ ತಿಂಗಳಿನಿಂದ ಅಕ್ಕಿ ಕೊಡಲಾಗುವುದು ಎಂದು ಉಮೇಶ್ ಕತ್ತಿ ಹೇಳಿದ್ರು.
ಲಾಕ್ಡೌನ್ ಇದೆ ಅಲ್ಲಿಯವರೆಗೆ ಉಪವಾಸ ಸಾಯೋದಾ ? ಎಂದು ಈಶ್ವರ್ ಪ್ರಶ್ನಿಸಿದಕ್ಕೆ ಸಾಯೋದು ಒಳ್ಳೆಯದು, ಅದಕ್ಕಿಂತ ಮೊದಲು ಅಕ್ಕಿ ಮಾರಾಟ ಮಾಡೋ ದಂಧೆ ನಿಲ್ಲಿಸಿ ಎಂದು ಅಹಂಕಾರದ ಮಾತುಗಳನ್ನಾಡಿದ್ದಾರೆ. ಆಹಾರ ಸಚಿವರ ಈ ಆಡಿಯೋ ವೈರಲ್ ಆಗಿದೆ.
ಹೇಳಿಕೆಗೆ ಸಮರ್ಥನೆ:
ಇನ್ನು ಈ ಬಗ್ಗೆ ಸ್ಪಷ್ಟನೆ ನೀಡಿದ ಉಮೇಶ್ ಕತ್ತಿ, ಯೋಜನೆ ಏನು ಇದೆಯೋ ಅದನ್ನೇ ಹೇಳಿದ್ದೇನೆ. ಕರೆ ಮಾಡಿ ವ್ಯಕ್ತಿ ಸತ್ತೋಗೋದಾ ಎಂದು ಕೇಳಿದ ಅದಕ್ಕೆ ನಾನು ಸತ್ತೋಗಿ ಎಂದು ಹೇಳಿದ್ದೇನೆ. ಅದಕ್ಕಿಂತ ಬೇರೆ ಇನ್ನೇನು ಹೇಳಲಿ. ಬೇಡ ಎಂದು ಹೇಳುವಷ್ಟು ದೊಡ್ಡ ಮನಸ್ಸು ನನಗಿಲ್ಲ. ರಾಜ್ಯದಲ್ಲಿ ಊಟ ಸಿಗದೆ ಯಾರೂ ಸಾಯಬಾರದು. ಮುಖ್ಯಮಂತ್ರಿಗಳು ನನಗೆ ಒಳ್ಳೆಯ ಖಾತೆ ಕೊಟ್ಟಿದ್ದಾರೆ ಎಂದು ಬೆಳಗಾವಿಯಲ್ಲಿ ಆಹಾರ ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ. ಇನ್ನು ಉಮೇಶ್ ಕತ್ತಿ ಅವರು ದರ್ಪದ ಮಾತಿಗೆ ಎಲ್ಲೆಡೆಯಿಂದ ಆಕ್ರೋಶ ವ್ಯಕ್ತವಾಗುತ್ತಿದೆ.
ಇನ್ನು ತಮ್ಮ ಹೇಳಿಕೆಗೆ ತೀವ್ರ ಟೀಕೆ ವ್ಯಕ್ತವಾಗುತ್ತಲೇ ಎಚ್ಚೆತ್ತುಕೊಂಡಿರುವ ಉಮೇಶ್ ಕತ್ತಿ, ಕ್ಷಮೆ ಯಾಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.