ಟ್ರ್ಯಾಕ್ಟರ್ ನಲ್ಲಿ ಬಂದು ಪಾಲಿಕೆ ಆಯುಕ್ತರ ಮನೆ ಮುಂದೆ ಕಸ ಚೆಲ್ಲಿದ ಶಾಸಕ ಅಭಯ ಪಾಟೀಲ್
Team Udayavani, Jul 25, 2021, 10:09 AM IST
ಬೆಳಗಾವಿ: ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಕಸ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ ಎಂದು ಸ್ವತಃ ಶಾಸಕರು ಟ್ರ್ಯಾಕ್ಟರ್ ಚಲಾಯಿಸಿಕೊಂಡು ಹೋಗಿ ಮಹಾನಗರ ಪಾಲಿಕೆ ಆಯುಕ್ತರ ಮನೆ ಮುಂದೆ ಕಸವನ್ನು ಸುರಿದಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ
ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್ ತಮ್ಮ ಕ್ಷೇತ್ರದಲ್ಲಿ ಸರಿಯಾಗಿ ಕಸವಿಲೇವಾರಿ ಆಗದೇ ಇರುವುದರಿಂದ ಆಕ್ರೋಶಗೊಂಡು ವಿಶ್ವೇಶ್ವರಯ್ಯ ನಗರದಲ್ಲಿ ಇರುವ ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್ ಅವರ ನಿವಾಸದ ಮುಂದೆ ಭಾನುವಾರ ಬೆಳಗಿನ ಜಾವ ಕಸವನ್ನು ಬೀಸಾಕಿದ್ದಾರೆ. ತಮ್ಮ ತಂಡದೊಂದಿಗೆ ತಾವೇ ಸ್ವತಃ ಕಸ ತುಂಬಿದ್ದ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಬಂದ ಅಭಯ ಪಾಟೀಲ್ ಕಸವನ್ನು ಪಾಲಿಕೆ ಆಯುಕ್ತರ ಮನೆಯ ಗೇಟ್ ಹಾಕಿದ್ದಾರೆ.
ಇದನ್ನೂ ಓದಿ:ಜಮ್ಮುಕಾಶ್ಮೀರ: ಎನ್ ಕೌಂಟರ್ ಮೂಲಕ ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು
ನಂತರ ಕಸವನ್ನು ಅವರ ತಂಡದ ಸದಸ್ಯರೊಂದಿಗೆ ಮನೆ ಗೇಟ್ ತುಂಬಾ ಹರಡಿದ್ದಾರೆ. ಆದರೆ ಓರ್ವ ಜವಾಬ್ದಾರಿಯುತ ಶಾಸಕರಾಗಿ ಈ ರೀತಿ ಅಧಿಕಾರಿಗಳ ಮನೆ ಮುಂದೆ ಕಸವನ್ನು ಚೆಲ್ಲಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಸಾರ್ವಜನಿಕ ರಲ್ಲಿ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.