ಟ್ರ್ಯಾಕ್ಟರ್ ಚಲಾಯಿಸಿದ ಶಾಸಕಿ ನಿಂಬಾಳ್ಕರ್
Team Udayavani, Jun 15, 2021, 6:56 PM IST
ಖಾನಾಪುರ: ಈ ಮೊದಲು ಸ್ಕೂಟಿ, ಆಂಬ್ಯುಲೆನ್ಸ್ ಚಲಾಯಿಸಿ ಸುದ್ದಿಯಾಗಿದ್ದ ಶಾಸಕಿ ಡಾ| ಅಂಜಲಿ ನಿಂಬಾಳಕರ್ ಸೋಮವಾರ ಟ್ರ್ಯಾಕ್ಟರ್ ಚಲಾಯಿಸಿ ಸಾಹಸ ಮೆರೆದರು.
ರೈತರಿಗೆ ಬಾಡಿಗೆ ನೀಡುವ ಕೃಷಿ ಯಂತ್ರ ಕೇಂದ್ರ ಉದ್ಘಾಟನೆ ಸಂದರ್ಭದಲ್ಲಿ ಶಾಸಕಿ ಖುದ್ದು ಟ್ರ್ಯಾಕ್ಟರ್ ಚಲಾಯಿಸಿ ನೋಡಿದರು. ತಾಲೂಕಿನ ಬೀಡಿ ಗ್ರಾಮದಲ್ಲಿ ಕೃಷಿ ಇಲಾಖೆ ಸಹಯೋಗದಿಂದ ಬೀಡಿ ಹೊಬಳಿ ವ್ಯಾಪ್ತಿಯಲ್ಲಿ ಸೋಮವಾರ ಕೃಷಿಯಂತ್ರ ಧಾರೆ ಬಾಡಿಗೆ ಸೇವಾ ಕೇಂದ್ರ ಉದ್ಭಾಟನೆ ಸಂದರ್ಭದಲ್ಲಿ ಶಾಸಕಿ ಡಾ| ಅಂಜಲಿ ನಿಂಬಾಳಕರ ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ರೈತರಲ್ಲಿ ಹುರುಪು ತುಂಬಿದರು.
ಈ ಸಂದರ್ಭದಲ್ಲಿ ಅವರು ಮಾತನಾಡಿ, ರೈತರಿಗೆ ಕಡಿಮೆ ದರದಲ್ಲಿ ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆಗೆ ನೀಡಲಾಗುತ್ತಿದ್ದು ಇದರ ಪ್ರಯೋಜನ ಮಾಡಿಕೊಳ್ಳಬೇಕು ಎಂದರು.
ನಂತರ ಅವರು ರೈತರಿಗೆ ಸಹಕಾರಿಯಾಗುವ ಯಂತ್ರೋಪಕರಣಗಳನ್ನು ವೀಕ್ಷಿಸಿದರು. ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ, ಉಪ ಕೃಷಿ ನಿರ್ದೇಶಕ ಎಚ್.ಡಿ.ಕೊಳೇಕರ, ಸಹಾಯಕ ಕೃಷಿ ನಿರ್ದೇಶಕ ಡಿ.ಬಿ. ಚವ್ಹಾಣ, ಡಿ.ಎಚ್.ರಾಠೊಡ, ಆರ್.ಜಿ. ಕೋಲಕಾರ, ಮಂಜುನಾಥ ಕುಸಗಲ್, ಲಕ್ಷ್ಮೀ ಕಾಡಮನ್ನವರ, ಬೀಡಿ ಗ್ರಾಪಂ ಅಧ್ಯಕ್ಷ ಶಾಂತಾ ಕುಂದೇಕರ, ಉಪಾಧ್ಯಕ್ಷ ಅಬುತಲಿ ಬೈಲಹೊಂಗಲ ಮತ್ತು ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!
Australia; ಮಂಗಳೂರಿಗನ ಸಲೂನ್‌ನಲ್ಲಿ ಕೊಹ್ಲಿ ರಿಲ್ಯಾಕ್ಸ್: ವಿರಾಟ್ ನಡೆಗೆ ಕಿರಣ್ ಫಿದಾ
OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್
Surathkal: ರ‍್ಯಾಗಿಂಗ್; 9 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.