ಸ್ವಯಂಪ್ರೇರಿತ ಲಾಕ್‌ಡೌನ್‌ಗೆ ಶಾಸಕ ಬಾಲಚಂದ್ರ ಮನವಿ
Team Udayavani, Apr 24, 2021, 6:12 PM IST
ಗೋಕಾಕ : ಕೊರೊನಾ ಎರಡನೆ ಅಲೆ ದಿನೇ ದಿನೇ ಉಲ್ಬಣವಾಗುತ್ತಿದ್ದು, ಇದರ ಹತೋಟಿಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಇದಕ್ಕಾಗಿ ಸೋಮವಾರದಿಂದ ಮೇ 4 ರವರೆಗೆ ಸ್ವಯಂ ಪ್ರೇರಿತರಾಗಿ ಮಧ್ಯಾಹ್ನ ಅಂಗಡಿಗಳನ್ನು ಬಂದ್ ಮಾಡಿ ಸಹಕರಿಸುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವ್ಯಾಪಾರಸ್ಥರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕೊರೊನಾ ಮಹಾಮಾರಿ ಗೋಕಾಕ ಹಾಗೂ ಅರಭಾವಿ ಮತಕ್ಷೇತ್ರಗಳಲ್ಲಿ ಶರವೇಗದಲ್ಲಿ ಹರಡುತ್ತಿದ್ದು ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಇದರ ನಿರ್ಮೂಲನೆಗಾಗಿ ಸಾರ್ವಜನಿಕರ ಸಹಾಯ ಅವಶ್ಯವಾಗಿದ್ದು, ಇದಕ್ಕಾಗಿಯೇ ತಹಶೀಲ್ದಾರ್ ಮತ್ತು ಡಿವೈಎಸ್‌ಪಿ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ಸಮಿತಿ ರಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ದಿನೇ ದಿನೇ ಜನಜಂಗುಳಿ ಹೆಚ್ಚುತ್ತಿದೆ. ಮಾರುಕಟ್ಟೆಗಳಲ್ಲಿ ಜನರನ್ನು ನಿಯಂತ್ರಣಕ್ಕೆ ತರಬೇಕಿದೆ. ಸಾರ್ವಜನಿಕರಲ್ಲಿ ಈ ಬಗ್ಗೆ ಅರಿವು ಮೂಡಿಸಲು ಸಾಕಷ್ಟು ಪ್ರಯತ್ನ ಮಾಡಲಾಗುತ್ತಿದೆ. ಆದರೂ ಕೆಲವರು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರುತ್ತಿರುವುದು ಕೂಡ ಕಂಡುಬರುತ್ತಿದೆ. ಆದ್ದರಿಂದ ಸೋಮವಾರ ದಿ. 26 ರಿಂದ ಮೇ 4 ರವರೆಗೆ ಉಭಯ ತಾಲೂಕುಗಳಲ್ಲಿ ಬೆಳಿಗ್ಗೆ 7 ರಿಂದ ಮ. 1 ರವರೆಗೆ ಸಾರ್ವಜನಿಕರಿಗೆ ಅಗತ್ಯವಿರುವ ಅಂಗಡಿ ಮುಂಗಟ್ಟುಗಳನ್ನು ತೆರೆದು ತಮ್ಮ ವ್ಯವಹಾರ ನಡೆಸಿಕೊಳ್ಳಬೇಕು. ಮಧ್ಯಾಹ್ನ 1 ಗಂಟೆಯ ನಂತರ ಕಡ್ಡಾಯವಾಗಿ ತಮ್ಮ ಅಂಗಡಿಗಳನ್ನು ಬಂದ್ ಮಾಡಿ ತಾಲೂಕಾ ಆಡಳಿತದೊಂದಿಗೆ ಸಹಕರಿಸಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರವನ್ನು ಪಾಲಿಸಬೇಕು. ವ್ಯಾಪಾರಸ್ಥರು ಸಹ ಕರೊನಾ ನಿಯಂತ್ರಣಕ್ಕೆ ತಮ್ಮೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಇದರಿಂದ ತಮ್ಮನ್ನು ತಾವೇ ಸ್ವಯಂ ಪ್ರೇರಿತವಾಗಿ ಲಾಕ್‌ಡೌನ್ ಮಾಡಿಕೊಂಡಂತಾಗುತ್ತದೆ. ಕೊರೊನಾ ಚೈನ್ ಬ್ರೆಕ್ ಮಾಡುವುದೇ ನಮ್ಮ ಸರ್ಕಾರದ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ. ನಿಯಂತ್ರಣಕ್ಕೆ ಸರ್ಕಾರ ಜಾರಿ ಮಾಡಿರುವ ಹೊಸ ಬಿಗಿ ಮಾರ್ಗಸೂಚಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ನಾಗರಿಕರು ಸಹಕರಿಸಬೇಕು. ಅಲ್ಲದೇ ಅನಗತ್ಯವಾಗಿ ಓಡಾಡಬೇಡಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಬಿ.ಎಸ್. ಯಡಿಯೂರಪ್ಪನವರ ಸಲಹೆಯಂತೆ ಮುನ್ನೆಚ್ಚರಿಕೆ ನಿಯಮಗಳನ್ನು ಪಾಲಿಸಿ ಸೋಂಕು ನಿಯಂತ್ರಣಕ್ಕೆ ನೆರವಾಗುವಂತೆ ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
MUST WATCH
ಹೊಸ ಸೇರ್ಪಡೆ
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.