ಸೋಂಕಿತರ ಸೇವೆಗೆ ಮಾದರಿ ಗಣೇಶ
ಸ್ವಂತ ವೆಚ್ಚದಲ್ಲಿ 22 ವೈದ್ಯಕೀಯ ಸಿಬ್ಬಂದಿ ನೇಮಕ! ಆಸ್ಪತ್ರೆಯಲ್ಲಿ ಪ್ರತಿ ದಿನ ಉಚಿತ ಊಟದ ವ್ಯವಸ್ಥೆ
Team Udayavani, May 29, 2021, 5:25 PM IST
ವರದಿ : ಮಹಾದೇವ ಪೂಜೇರಿ
ಚಿಕ್ಕೋಡಿ: ಕೋವಿಡ್ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕೊಡಿ-ಸದಲಗಾ ಶಾಸಕ ಗಣೇಶ ಹುಕ್ಕೇರಿ ತಮ್ಮ ಕ್ಷೇತ್ರದ ಜನರನ್ನು ಕೊರೊನಾ ಸಂಕಟದಿಂದ ಪಾರು ಮಾಡಲು ನಿರಂತರ ಪ್ರಯತ್ನದ ಜೊತೆಗೆ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಒಂದು ಹೆಜ್ಜೆ ಮುಂದಿದ್ದಾರೆ.
ಕ್ಷೇತ್ರದ ಜನರಿಗೆ ಯಾವುದೇ ತೊಂದರೆಯಾಗದಂತೆ ಕಳೆದ ಒಂದು ತಿಂಗಳ ಹಿಂದೆಯಷ್ಟೇ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಎರಡು ಕೋವಿಡ್ ಆಸ್ಪತ್ರೆ, ಯಕ್ಸಂಬಾ ಮತ್ತು ಸದಲಗಾ ಪಟ್ಟಣದಲ್ಲಿ ಕೋವಿಡ್ ಆಸ್ಪತ್ರೆ ಆರಂಭ ಮಾಡಿ ಸೋಂಕಿತರ ಆರೈಕೆಗೆ ಅನುಕೂಲ ಕಲ್ಪಿಸಿದ್ದಾರೆ.
ಸ್ವಂತ ಖರ್ಚಿನಲ್ಲಿ ವೈದ್ಯರ ನೇಮಕ: ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇರುವುದನ್ನು ಮನಗಂಡು ಶಾಸಕ ಹುಕ್ಕೇರಿ ಅವರು ತಮ್ಮ ಅನ್ನಪೂರ್ಣೇಶ್ವರಿ ಫೌಂಡೇಶನ್ ಮೂಲಕ ವೈದ್ಯರು ಸೇರಿದಂತೆ 22 ವೈದ್ಯಕೀಯ ಸಿಬ್ಬಂದಿ ನೇಮಕ ಮಾಡಿಕೊಂಡು ಅವರನ್ನು ಚಿಕ್ಕೋಡಿ ತಾಲೂಕಿನ ಅಂಕಲಿ, ಯಕ್ಸಂಬಾ ಮತ್ತು ಸದಲಗಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನಿಯೋಜಿಸುವ ಮೂಲಕ ಸೋಂಕಿತರಿಗೆ ಚಿಕಿತ್ಸೆ ಕೊಡಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ. 8 ಜನ ಎಂಬಿಬಿಎಸ್ ವೈದ್ಯರು, ಇಬ್ಬರು ಎಂಡಿ, ಇಬ್ಬರು ಬಿಎಎಂಎಸ್ ವೈದ್ಯರು ಹಾಗೂ ಸ್ಟಾಫ್ ನರ್ಸ ಮತ್ತು ಡಿ ಗ್ರೂಪ್‌ನ 10 ಜನ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡಿದ್ದಾರೆ. ಎಂ.ಡಿ ವೈದ್ಯರಿಗೆ 4 ಲಕ್ಷ ರೂ, ಎಂಬಿಬಿಎಸ್ ವೈದ್ಯರಿಗೆ 3 ಲಕ್ಷ ರೂ, ಬಿಎಎಂಎಸ್ ವೈದ್ಯರಿಗೆ 60 ಸಾವಿರ ರೂ, ಸ್ಟಾಫ್ ನರ್ಸ್‌ಗೆ 30 ಸಾವಿರ ರೂ. ಹಾಗೂ ಡಿ ಗ್ರೂಪ್ ಸಿಬ್ಬಂದಿಗಳಿಗೆ 20 ಸಾವಿರ ರೂ. ವೇತನ ನಿಗದಿ ಮಾಡಿದ್ದಾರೆ. ಬರುವ ದಿನಗಳಲ್ಲಿ ಖಡಕಲಾಟ ಹಾಗೂ ಪಟ್ಟಣಕುಡಿ ಪ್ರಾಥಮಿಕ ಆಸ್ಪತ್ರೆಗಳಲ್ಲಿಯೂ ಸಹ ವೈದ್ಯರನ್ನು ನೇಮಕ ಮಾಡಿಕೊಂಡು ಕೊರೊನಾ ನಿಯಂತ್ರಣಕ್ಕೆ ಮುಂದಾಗಲಿದ್ದಾರೆ.
ಕ್ಷೇತ್ರದ ಜನರಿಗೆ ವ್ಯಾಕ್ಸಿನ್ ಕೊಡಿಸಲು ವಾಹನದ ವ್ಯವಸ್ಥೆ, ಕೋವಿಡ್ ಆಸ್ಪತ್ರೆಯಲ್ಲಿ ಉಚಿತ ಊಟದ ವ್ಯವಸ್ಥೆ, ಆಕ್ಸಿಜನ್ ಕೊರತೆ ನೀಗಿಸುವಲ್ಲಿ ನಿರಂತರವಾಗಿ ಅಧಿ ಕಾರಿಗಳ ಸಭೆ ನಡೆಸುತ್ತಿರುವ ಶಾಸಕ ಗಣೇಶ ಹುಕ್ಕೇರಿ ಅವರು ಹಗಲು ರಾತ್ರಿ ಎನ್ನದೇ ಕೊರೊನಾ ನಿಯಂತ್ರಣ ದಲ್ಲಿ ಸಮರೋಪಾದಿಯಲ್ಲಿ ತೊಡಗಿಕೊಂಡಿದ್ದಾರೆ.
ಪುತ್ರನಿಗೆ ತಂದೆ ಸಾಥ್: ಕೊರೊನಾ ವಿರುದ್ಧ ಹೋರಾಟದಲ್ಲಿ ಶಾಸಕ ಗಣೇಶ ಹುಕ್ಕೇರಿಗೆ ತಂದೆ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಸಂಪೂರ್ಣ ಸಾಥ್ ನೀಡಿದ್ದಾರೆ. 75ರ ಇಳಿವಯಸ್ಸಿನಲ್ಲಿಯೂ ಕೂಡ ಚಿಕ್ಕೋಡಿ-ಸದಲಗಾ ಕ್ಷೇತ್ರದ ಪ್ರತಿಯೊಂದು ಹಳ್ಳಿಗೆ ಭೇಟಿ ನೀಡಿ ಜನರ ಆರೋಗ್ಯ ವಿಚಾರಿಸುತ್ತಿದ್ದಾರೆ.
ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ಮತ್ತು ತಾಲೂಕಿನ ವಿವಿಧ ಪ್ರಾಥಮಿಕ ಆಸ್ಪತ್ರೆಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿಯ ಸಮಸ್ಯೆ ನಿವಾರಿಸಿ ಸೋಂಕಿನಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಆಸ್ಪತ್ರೆಗಳಿಗೆ ಜನರೇಟರ್ ಸೌಲಭ್ಯ: ಮಳೆ-ಗಾಳಿಗೆ ವಿದ್ಯುತ್ ಸಮಸ್ಯೆ ಆಗಬಾರೆಂದು ಮುನ್ನೆಚ್ಚರಿಕೆ ಕ್ರಮವಾಗಿ ತಾಲೂಕಿನ ನಾಲ್ಕು ಆಸ್ಪತ್ರೆಗಳಿಗೆ ಹುಕ್ಕೇರಿ ಕುಟುಂಬ ಅನ್ನಪೂರ್ಣೇಶ್ವರಿ ಫೌಂಡೇಶನ್ ಮೂಲಕ ಹೊಸ ಜನರೇಟರ್ ಒದಗಿಸಿ ವಿದ್ಯುತ್ ಸಮಸ್ಯೆ ನೀಗಿಸಿದ್ದಾರೆ.
ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ, ಸದಲಗಾ, ಯಕ್ಸಂಬಾ ಮತ್ತು ಖಡಕಲಾಟ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 16 ಲಕ್ಷ ರೂ. ವೆಚ್ಚದಲ್ಲಿ ಜನರೇಟರ್ ಸೌಲಭ್ಯ ಕಲ್ಪಿಸಿದ್ದಾರೆ.
ಆಸ್ಪತ್ರೆಗಳಿಗೆ ಆಕ್ಸಿಜನ್ ಪೈಪಲೈನ್ ಅಳವಡಿಕೆ: ಹೆಚ್ಚಿನ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಬಳಲುತ್ತಿರುವ ಪರಿಣಾಮ ಕೊರೊನಾ ಪೀಡಿತರಿಗೆ ಅನುಕೂಲವಾಗಲು ತಾಲೂಕಿನ ಎಲ್ಲ ಆಸ್ಪತ್ರೆಗಳಿಗೆ ಆಕ್ಸಿಜನ್ ಪೈಪ್‌ಲೈನ್ ಅಳವಡಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.
ಉಚಿತ ಊಟ-ಔಷಧ: ಶಾಸಕ ಗಣೇಶ ಹುಕ್ಕೇರಿ ಮತ್ತು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಕೊರೊನಾ ಸೋಂಕು ತಗುಲಿರುವ ಗ್ರಾಮೀಣ ಪ್ರದೇಶದ ಬಡ ಜನರಿಗೆ ಉಚಿತ ಊಟ, ಔಷಧ ನೀಡಿ, ಬಡ ಜನರ ಕಷ್ಟಕ್ಕೆ ಹೆಗಲು ಕೊಟ್ಟು ನಾವು ನಿಮ್ಮೊಂದಿಗೆ ಇದ್ದೇವೆ ಎಂದು ತಾಲೂಕಿನ ಜನರಿಗೆ ಧೆ„ರ್ಯ ತುಂಬುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು
Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್. ಸಂತೋಷ್ ಹೆಗ್ಡೆ
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.