ಕಾಂಗ್ರೆಸ್ ಅಭ್ಯರ್ಥಿ ಸತೀಶ ಗೆಲುವು ಖಚಿತ : ಶಾಸಕಿ ಲಕ್ಷ್ಮಿ ಹೆಬ್ಬಾಳಕರ
Team Udayavani, Apr 15, 2021, 7:21 PM IST
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರ ಪರವಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದರು.
ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಪ್ರಚಾರ ನಡೆಸಿದ ಅವರು ಬೆಳಗಾವಿ ಲೋಕಸಭಾ ಕ್ಷೇತ್ರ ಮರಳಿ ಕಾಂಗ್ರೆಸ್ ತೆಕ್ಕೆಗೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರೊಂದಿಗೆ ಪ್ರಚಾರ ಸಭೆಗಳನ್ನು ನಡೆಸಿ ಅವರು ಮಾತನಾಡಿದರು.
ಮಾರಿಹಾಳ ಗ್ರಾಮದಲ್ಲಿ ಪ್ರಚಾರ ಕಾರ್ಯಕ್ರಮ ನಡೆಸಿದ ಅವರು ಕಳೆದ ವಿಧಾನಸಭೆ ಚುನಾವಣೆಯಂತೆ ಈ ಬಾರಿಯೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಅಭ್ಯರ್ಥಿ ಸತೀಶ ಜಾರಕಿಹೊಳಿ ಹಾಗೂ ಲಕ್ಷಿ¾ ಹೆಬ್ಟಾಳಕರ ಗ್ರಾಮದ ಶ್ರೀ ಬಸವೇಶ್ವರ ಹಾಗೂ ವಾಲ್ಮೀಕಿ ಸಮಾಜದ ನಾಮಫಲಕಕ್ಕೆ ಗೌರವ ಸಲ್ಲಿಸಿದರು. ನಂತರ ಮೊದಗಾ ಗ್ರಾಮದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಹೆಬ್ಟಾಳಕರ, ನಾನು ಮಾಡಿರುವ ಎಲ್ಲ ಅಭಿವೃದ್ಧಿ ಕಾಮಗಾರಿಗಳಿಗೆ ನೀವು ಸಹಕಾರ ಹಾಗೂ ಬೆಂಬಲ ನೀಡಿದ್ದೀರಿ. ಹಾಗೆಯೇ ಅವುಗಳನ್ನು ಮುಂದುವರಿಸಿಕೊಂಡು ಹೋಗಲು ಹಾಗೂ ನನ್ನ ಕೈಗೆ ಇನ್ನಷ್ಟು ಬಲ ತುಂಬಲು ಸತೀಶ ಜಾರಕಿಹೊಳಿ ಅವರಿಗೆ ಮತ ನೀಡಬೇಕು ಎಂದು ಕೋರಿದರು. ಬಳಿಕ ಪಂತ ಬಾಳೇಕುಂದ್ರಿ ಮತ್ತು ಕೆಕೆ ಕೊಪ್ಪ ಗ್ರಾಮದಲ್ಲಿ ಸತೀಶ ಜಾರಕಿಹೊಳಿ ಅವರ ಜೊತೆ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮತ ಯಾಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.