ಬಿಎಸ್‌ವೈ ಬಳಿ ಶಾಸಕರ ಅಳಲು
Team Udayavani, Dec 21, 2018, 6:00 AM IST
ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆ, ಮಹದಾಯಿ ಸಮಸ್ಯೆ, ಕೃಷ್ಣಾ ಕೊಳ್ಳದ ಯೋಜನೆಗಳು ಸೇರಿದಂತೆ ವಿವಿಧ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲು ಅಧಿವೇಶನದಲ್ಲಿ ಸೂಕ್ತ ಕಾಲಾವಕಾಶವೇ ಸಿಕ್ಕಿಲ್ಲ ಎಂದು ಉತ್ತರ ಕರ್ನಾಟಕ ಭಾಗದ ಬಿಜೆಪಿ ಶಾಸಕರು ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ಮುಂದೆ ಅಹವಾಲು ತೋಡಿಕೊಂಡರು.
ಬೆಳಗಾವಿಯಲ್ಲಿ ಶುಕ್ರವಾರ ನಡೆದ ಬಿಜೆಪಿ ಶಾಸಕರ ವಿಶೇಷ ಸಭೆಯಲ್ಲಿ ಉತ್ತರ ಕರ್ನಾಟಕದ ಶಾಸಕರು ತಮ್ಮ ನೋವು ಹಾಗೂ ಇಲ್ಲಿನ ಜನರ ಸಮಸ್ಯೆಯನ್ನು ಬಿಡಿಬಿಡಿಯಾಗಿ ಹೇಳಿಕೊಂಡಿದ್ದಾರೆ. ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಸದನದಲ್ಲಿ ಸಮಗ್ರವಾಗಿ ಚರ್ಚೆ ಮಾಡಿಲ್ಲ. ಜತೆಗೆ ಆಡಳಿತ ಪಕ್ಷದಿಂದ ಯಾವ ಉತ್ತರವೂ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಕಳಸಾಬಂಡೂರಿ ಯೋಜನೆಯ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಅಧಿವೇಶನ ಬೆಳಗಾವಿಯಲ್ಲಿ ನಡೆದರೂ ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನ ಹರಿಸದೇ ಇರುವುದು ಎಷ್ಟು ಸರಿ, ಈ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಸಭೆಯಲ್ಲಿ ಕೆಲವು ಶಾಸಕರ ಆಗ್ರಸಿದರು. ಮರಳಿನ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಕೃಷ್ಣಾ ಕೊಳ್ಳದ ಯೋಜನೆಗಳು ನೆನಗುದಿಗೆ ಬಿದ್ದಿವೆ, ನೀರಾವರಿ ಯೋಜನೆಗಳು ಆರಂಭದಲೂ ಕುಂಟುತ್ತಾ ಸಾಗುತ್ತಿವೆ. ಈ ಬಗ್ಗೆ ಸರ್ಕಾರದ ಗಮನ ಹರಿಸುತ್ತಿಲ್ಲ. ಉತ್ತರ ಕರ್ನಾಟಕ ಜನತೆ ನಾನಾ ಸಮಸ್ಯೆಗಳಿಂದ ರೋಸಿ ಹೋಗಿದ್ದಾರೆ. ಅಧಿವೇಶನದಲ್ಲಿ ಅವರ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದು ಕೊಂಡಿದ್ದೆವು. ಆಡಳಿತ ಯಂತ್ರವೇ ಸಮರ್ಪಕವಾಗಿ ನಡೆಯದೇ ಇರುವುದರಿಂದ ಎಲ್ಲವೂ ಹುಸಿಯಾಗುತ್ತಿದೆ ಎಂದು ಶಾಸಕರು ನೋವು ನೋಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬುಧವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬರದ ಮೇಲಿನ ಚರ್ಚೆಗೆ ಉತ್ತರ ನೀಡುವ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕರನ್ನು ಅಪಮಾನಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿಗಳು ಕ್ಷಮೆ ಕೇಳುವಂತೆ ಮಾಡಬೇಕು. ಹಾಗೆಯೇ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ರೈತರು ಮಾಡಿರುವ ಸಾಲ ಮನ್ನಾ ಮಾಡುವ ನಿರ್ದಿಷ್ಟ ದಿನಾಂಕ ಘೋಷಣೆ ಮಾಡುವವರೆಗೂ ಸುಗಮ ಸದನದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಬಿಜೆಪಿ ಶಾಸಕರು ಸಭೆಯಲ್ಲೇ ನಿರ್ಧರಿಸಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.