ಮೂಡಲಗಿ: ಲೋಕ್ ಅದಾಲತ್‌ನಲ್ಲಿ ಒಂದಾದ ಜೋಡಿಗಳು
ಜಮೀನು ವಿವಾದ 30 ಪ್ರಕರಣಗಳಲ್ಲಿ 29 ಪ್ರಕರಣಗಳು ಇತ್ಯರ್ಥಗೊಂಡಿವೆ.
Team Udayavani, Jul 10, 2023, 6:36 PM IST
ಮೂಡಲಗಿ: ಗಂಡ-ಹೆಂಡತಿ ನಡುವೆ ಭಿನ್ನಾಭಿಪ್ರಾಯಗಳು ಉಂಟಾದ ಹಿನ್ನೆಲೆ ತವರು ಮನೆ ಸೇರಿ ಜೀವನಾಂಶ ನೀಡುವಂತೆ ಕೋರ್ಟ್ ಮೆಟ್ಟಿಲೇರಿದ ಎರಡು ಜೋಡಿಗಳು ಶನಿವಾರ ಮೂಡಲಗಿಯ ದಿವಾಣಿ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆದ ಮೆಗಾ ಲೋಕ್ ಅದಾಲತ್‌ನಲ್ಲಿ ಮತ್ತೆ ಒಂದಾಗಿರುವ ಘಟನೆ ನಡೆದಿದೆ.
ಪಟ್ಟಣದಲ್ಲಿ ಶನಿವಾರ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ್ದ ಲೋಕ್ ಅದಾಲತ್ ನಲ್ಲಿ ಪತ್ನಿ ಬಸವ್ವ ಹೆಗಡೆ ತನ್ನ ಪತಿ ವಿಠಲ ಹೆಗಡೆ ಮೇಲೆ ಜೀವನಾಂಶ ನೀಡಬೇಕೆಂದು ಪ್ರಕರಣ ದಾಖಲಿಸಿ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿತ್ತು. ಮತ್ತು ಪತ್ನಿ ಸ್ನೇಹಾ ಯಾದವ್ ತನ್ನ ಪತಿ ಮೇಲೆ ಮಹಿಳೆಯರ ಮೇಲೆ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.
ಆದರೆ ನ್ಯಾಯಾಧೀಶರ ಸಲಹೆ ಹಾಗೂ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಗಂಡ-ಹೆಂಡತಿ ಮತ್ತೆ ಒಂದಾಗಿ ಬಾಳುತ್ತೇವೆ ಎಂದು ನಿರ್ಧರಿಸಿ ನ್ಯಾಯಾಧೀಶೆ ಜ್ಯೋತಿ ಪಾಟೀಲ ಅವರ ಸಮ್ಮುಖದಲ್ಲಿ ಮತ್ತೆ ಒಟ್ಟಿಗೆ ಸಂಸಾರ ಮಾಡುವ ಸಂಕಲ್ಪದೊಂದಿಗೆ ಹಾರ ಬದಲಿಸಿಕೊಂಡರು.
ನ್ಯಾಯಾಧೀಶೆ ಜ್ಯೋತಿ ಪಾಟೀಲ ಮಾತನಾಡಿ, 32 ಚಿಕ್ಕ ಪ್ರಕರಣಗಳಲ್ಲಿ 31 ಪ್ರಕರಣಗಳು ಇತ್ಯರ್ಥಗೊಂಡು ಸುಮಾರು 49 ಲಕ್ಷ ರೂ. ಹಣವನ್ನು ರಿಕವರಿ ಮಾಡಿಕೊಡಲಾಗಿದೆ. ಜಮೀನು ವಿವಾದ 30 ಪ್ರಕರಣಗಳಲ್ಲಿ 29 ಪ್ರಕರಣಗಳು ಇತ್ಯರ್ಥಗೊಂಡಿವೆ. ಇನ್ನೂ ಕ್ರಿಮಿನಲ್ 1194 ಪ್ರಕರಣಗಳಲ್ಲಿ 1190 ಪ್ರಕರಣಗಳು ಇತ್ಯರ್ಥಗೊಂಡು ಸುಮಾರು 1 ಲಕ್ಷ ದಂಡ ವಿಧಿಸಲಾಗಿದೆ. ಕಂದಾಯ ಇಲಾಖೆ ಮತ್ತು ಇತರರ ತೆರಿಗೆಗಳಿಗೆ(ಪಿಎಲ್‌ಟಿ) ಸಂಬಂಧಪಟ್ಟಂತೆ ಸುಮಾರು 36 ಕೋಟಿ ಸಂಧಾನವಾಗಿದೆ.
ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ದಾಖಲಾತಿ 104 ಪ್ರಕರಣಗಳಲ್ಲಿ 103 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಶನಿವಾರ ನಡೆದ ಲೋಕ್ ಅದಾಲತ್‌ದಲ್ಲಿ 1377 ಪ್ರಕರಣಗಳಗೆ ಸಂಬಂಧಿಸಿದಂತೆ 1369 ಪ್ರಕರಣಗಳು ಇತ್ಯರ್ಥಗೊಂಡಿವೆ ಎಂದು ಹೇಳಿದರು.
ಲೋಕ ಅದಾಲತ್‌ನಲ್ಲಿ ಸಾರ್ವಜನಿಕರು ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವುದರಿಂದ ಸಮಯ ಹಾಗೂ ತಮ್ಮ ಖರ್ಚುವೆಚ್ಚ ಉಳಿಯುವುದರೊಂದಿಗೆ ಸಮಾಜದಲ್ಲಿ ಸಂಬಂಧಗಳು ಗಟ್ಟಿಗೊಳ್ಳುತ್ತವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.