ಉತ್ತರ ಕರ್ನಾಟಕ ಅಭಿವೃದ್ಧಿಗೆ ಹೆಚ್ಚು ಒತ್ತು: ಸಚಿವ ಲಕ್ಷ್ಮಣ ಸವದಿ
Team Udayavani, Aug 31, 2019, 10:58 AM IST
ಬೈಲಹೊಂಗಲ: ಚನ್ನಮ್ಮ ಸಮಾಧಿಗೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕಿತ್ತೂರ ಚನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಬೈಲಹೊಂಗಲ: ಸಿಕ್ಕ ಅವಕಾಶವನ್ನು ಬಳಸಿಕೊಂಡು ಮುಖ್ಯಮಂತ್ರಿ ಯಡಿಯೂರಪ್ಪವರ ಕೈ ಬಲಪಡಿಸುವ ಮೂಲಕ ಉತ್ತರ ಕರ್ನಾಟಕದಲ್ಲಿ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
ಶುಕ್ರವಾರ ಪಟ್ಟಣದಲ್ಲಿ ಶಾಸಕ ಮಹಾಂತೇಶ ದೊಡಗೌಡರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಕ್ಷದ ವರಿಷ್ಠರು ನನ್ನ ಮೇಲೆ ಭರವಸೆ ಇಟ್ಟು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರನ್ನಾಗಿ ಮಾಡಿದ್ದಾರೆ. ಅವರ ಭರವಸೆಯನ್ನು ಈಡೇರಿಸಿ, ಉಕ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ತಿಳಿಸಿದರು.
ಈ ಹಿಂದೆ ಇನ್ನೊಂದು ಹತ್ತೆಂಟು ಸೀಟ್ ಬರದ ಕಾರಣ ಬಿಜೆಪಿ ಪಕ್ಷ ಅಧಿಕಾರದಿಂದ ಅವಕಾಶ ವಂಚಿತವಾಗಿತ್ತು. ಇದೀಗ ಅದು ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಪಕ್ಷ ವಿಶೇಷವಾದ ಪಕ್ಷವಾಗಿದೆ ಎಂದರು.
ಈ ಬಾರಿ ಕರ್ನಾಟಕದಲ್ಲಿ ಅತ್ಯಂತ ಭೀಕರವಾದ ಮಹಾಪೂರ ಬಂದು ಒಂದು ಕಡೆ ಅತಿವೃಷ್ಟಿಯಾಗಿ ಲಕ್ಷಾಂತರ ಜನರು ತೊಂದರೆಗೊಳಗಾಗಿದ್ದಾರೆ. ಹೀಗಾಗಿ ಸೆ. 2ರಂದು ಶಾಸಕ ಮಹಾಂತೇಶ ದೊಡಗೌಡರ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸುವ ಬದಲಿಗೆ ಆ ಹಣವನ್ನು ಅವರ ಅಭಿಮಾನಿಗಳು ನೆರೆ ಸಂತಸ್ತರಿಗೆ ಉಪಯೋಗ ಆಗಲಿ ಎಂದು ಹೇಳಿ 5 ಲಕ್ಷ ರೂ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಕೊಟ್ಟಿರುವುದು ಒಳ್ಳೆಯ ನಿರ್ಣಯವಾಗಿದೆ ಎಂದರು.
ನೆರೆ ಸಂತ್ರಸ್ತರಿಗೆ ಇಂಥ ಸಂದರ್ಭದಲ್ಲಿ ಹಣಕಾಸಿನ ನೆರವು ಕೂಡ ಅವಶ್ಯವಾಗಿರುತ್ತದೆ. ಅದ್ಧೂರಿ ಕಾರ್ಯಕ್ರಮ, ಜನ್ಮದಿನ ಆಚರಿಸಿಕೊಳ್ಳುವ ಬದಲಿಗೆ ಅದೇ ಹಣವನ್ನು ನೆರೆ ಪರಿಹಾರ ನಿಧಿಗೆ ಬಳಸುವುದು ಸೂಕ್ತವಾಗಿದೆ ಎಂದರು.
ಇದಕ್ಕೂ ಮೊದಲು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಿತ್ತೂರ ರಾಣಿ ಚನ್ನಮ್ಮನ ಸಮಾಧಿಗೆ ನಮಿಸಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ವೇಳೆ ಶಾಸಕ ಮಹಾಂತೇಶ ದೊಡಗೌಡರ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವಿಶ್ವನಾಥ ಪಾಟೀಲ, ಮಾಜಿ ಶಾಸಕ ಜಗದೀಶ ಮೆಟಗುಡ್ಡ, ಜಿಪಂ ಮಾಜಿ ಅಧ್ಯಕ್ಷ ಎಸ್.ಎಫ್.ದೊಡಗೌಡರ, ಬಿ.ಎಫ್.ಕೊಳದೂರ, ಗುರು ಮೆಟಗುಡ್ಡ, ಶ್ರೀಕರ ಕುಲಕರ್ಣಿ, ಪ್ರಕಾಶ ಮೂಗಬಸವ, ಕುಮಾರಗೌಡ ಪಾಟೀಲ, ವಿಜಯ ಮೆಟಗುಡ್ಡ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.