ಸರ್ಕಾರಿ ಸೌಲಭ್ಯ ಪಡೆಯಲು ಪ್ರೇರೇಪಿಸಿ
Team Udayavani, Sep 16, 2019, 11:20 AM IST
ಬೈಲಹೊಂಗಲ: ನೇಸರಗಿಯಲ್ಲಿ ರವಿವಾರ ಹಮ್ಮಿಕೊಂಡ ರೈತ ಸಂಪರ್ಕ ಕೇಂದ್ರದ ಕಟ್ಟಡ ಉದ್ಘಾಟನೆ ಹಾಗೂ ಕೃಷಿ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ರೈತರನ್ನು ಆಹ್ವಾನಿಸಿಲ್ಲವೆಂದು ಆರೋಪಿಸಿ ಗ್ರಾಮಸ್ಥರು ಶಾಸಕರ ಸಮ್ಮುಖದಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಬೈಲಹೊಂಗಲ: ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೃಷಿ ವಸ್ತು ಪ್ರದರ್ಶನ ನಡೆಸಿರುವುದು ಸೂಕ್ತವಾಗಿದೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬರುವಂತೆ ಪ್ರೇರೇಪಿಸಿ ಉತ್ತಮ ಕಾರ್ಯಕ್ರಮ ರೂಪಿಸಬೇಕೆಂದು ಶಾಸಕ ಮಹಾಂತೇಶ ದೊಡಗೌಡರ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ನೇಸರಗಿ ಚನ್ನವೃಷಬೇಂದ್ರ ದೇವರಕೊಂಡ ಅಜ್ಜನ ದೇವಸ್ಥಾನದಲ್ಲಿ ರವಿವಾರ ನಡೆದ ರೈತ ಸಂಪರ್ಕ ಕೇಂದ್ರ ನೂತನ ಕಟ್ಟಡ ಉದ್ಘಾಟನೆ, ಸಮಗ್ರ ಕೃಷಿ ಅಭಿಯಾನ ಸಮಾರೋಪ ಹಾಗೂ ಕೃಷಿ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನೇಸರಗಿ ಎಪಿಎಂಸಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಇಲ್ಲಿನ ಸರಕಾರಿ ಐಟಿಐ ಕೇಂದ್ರ ನಿರ್ಮಾಣಕ್ಕೆ ಕೆಲ ಅಡೆತಡೆಗಳು ಬಂದಿವೆ. ನೇಸರಗಿ ಗ್ರಾಮಸ್ಥರು ಇಲ್ಲಿಯೇ ಐಟಿಐ ಕಾಲೇಜು ಇರಲಿ ಎಂದು ಹೇಳಿದ್ದು, ಮುಂದಿನ ದಿನದಲ್ಲಿ ಸೂಕ್ತ ಜಾಗೆ ಪರಿಶೀಲಿಸಿ ಕಟ್ಟಡ ನಿರ್ಮಿಸಲಾಗುವುದು ಎಂದು ತಿಳಿಸಿದರು.
ಜಿಪಂ ಸದಸ್ಯರಾದ ನಿಂಗಪ್ಪ ಅರಕೇರಿ, ಜಿಪಂ ಮಾಜಿ ಅಧ್ಯಕ್ಷ ಎಸ್.ಎಫ್. ದೊಡಗೌಡರ ಮಾತನಾಡಿ, ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಅನುಕೂಲ ಮಾಡುವ ನಿಟ್ಟಿನಲ್ಲಿ ಕೃಷಿ ಅಧಿಕಾರಿಗಳು ಬದ್ಧರಾಗಬೇಕು. ರೈತರು ಶ್ರಮಜೀವಿಗಳಾಗಿದ್ದು, ಅವರ ಕಷ್ಟ ನೀಗಿಸುವ ನಿಟ್ಟಿನಲ್ಲಿ ಸರಕಾರದಿಂದ ಬಂದ ಯೋಜನೆಗಳನ್ನು ತಿಳಿಸಿ ಆರ್ಥಿಕವಾಗಿ ಮುಂದೆ ಬರಲು ರೈತರ ಕೊಂಡಿಯಾಗಿ ಕೆಲಸ ಮಾಡಬೇಕೆಂದರು.
ಮಲ್ಲಾಪುರ ಚಿದಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಎಪಿಎಂಸಿ ತಾಪಂ ಅಧ್ಯಕ್ಷೆ ನೀಲವ್ವ ಫಕ್ಕೀರನ್ನವರ, ಉಪಾಧ್ಯಕ್ಷ ಮಲ್ಲನಾಯ್ಕ ಬಾಂವಿ, ಜಿಪಂ ಸದಸ್ಯೆಯರಾದ ರೋಹಿಣಿ ಪಾಟೀಲ, ಲಾವಣ್ಯ ಶಿಲ್ಲೇದಾರ, ದೇಶನೂರ ಗ್ರಾಪಂ ಅಧ್ಯಕ್ಷ ದೀಪಕಗೌಡ ಪಾಟೀಲ, ತಾಪಂ ಸದಸ್ಯೆ ಲಕ್ಷ್ತ್ರೀ ತಳವಾರ, ಅಶ್ವಿನಿ ಕುಂಕೂರ, ಪ್ರವೀಣ ಯಡಳ್ಳಿ, ಹೊಳೆವ್ವ ನಡುವಿನಮನಿ, ಕೆಂಚಪ್ಪ ಕಳ್ಳಿಬಡ್ಡಿ, ಬಾಳಪ್ಪ ಮಾಳಗಿ, ರಮೇಶ ರಾಯಪ್ಪಗೋಳ, ದೇಮಣ್ಣ ಗುಜನಟ್ಟಿ, ಮಲ್ಲೇಶ ಮಾಳನ್ನವರ, ಫಕ್ಕೀರಪ್ಪ ಸೊಮನ್ನವರ, ಸೋಮನಗೌಡ ಪಾಟೀಲ, ವಿನಾಯಕ ಮಾಸ್ತಮರಡಿ, ಪುಂಡಲೀಕ ಚಿಕ್ಕನಗೌಡರ, ಅಡಿವೆಪ್ಪ ಚಿಗರಿ, ಪ್ರಕಾಶ ತೊಟಗಿ, ಮಹಾಂತೇಶ ಕೂಲಿನವರ, ಸೋಮಶೇಖರ ಮಾಳನ್ನವರ, ದೇವೇಂದ್ರ ಮಾಳಗಿ, ಗಂಗಾಧರ ಗುಜನಟ್ಟಿ, ಮನೋಜ ಕೆಳಗೇರಿ, ವಿನೋದ ಯರಡಾಲ, ಮಂಜುನಾಥ ಹುಲಮನಿ, ಮಹಾಂತೇಶ ಸತ್ತಿಗೇರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.