14ರಿಂದ 24ರವರೆಗೆ ಮೂಡಲಗಿ ಬಂದ್
Team Udayavani, Jul 14, 2020, 1:02 PM IST
ಮೂಡಲಗಿ: ಜು.14 ರಿಂದ 24 ರವರೆಗೆ ಸ್ವಯಂ ಪ್ರೇರಿತವಾಗಿ ಮೂಡಲಗಿ ತಾಲೂಕಿನಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ತಾಲೂಕಾ ದಂಡಾಧಿಕಾರಿ ಹಾಗೂ ತಹಶೀಲ್ದಾರ ಡಿ.ಜೆ ಮಹಾತ್ ತಿಳಿಸಿದ್ದಾರೆ.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಚಿವರಾದ ರಮೇಶ ಜಾರಕಿಹೊಳಿ ರವಿವಾರ ಜರುಗಿದ ಸಭೆಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳನ್ನು ಸಂಪೂರ್ಣ ಲಾಕ್ ಡೌಕ್ ಮಾಡಲು ತಾಲೂಕಾಧಿಕಾರಿಗಳ ಸಭೆಯಲ್ಲಿ ನಿರ್ಧರಿಸಿದ್ದರಿಂದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆದೇಶದ ಮೇರೆಗೆ ತಾಲೂಕನ್ನು ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದರು.
ಲಾಕ್ ಡೌನ್ ಸಮಯದಲ್ಲಿ ಅಗತ್ಯ ವಸ್ತುಗಳು ಹಾಗೂ ಆಸ್ಪತ್ರೆಗಳಿಗೆ ವಿನಾಯಿತಿ ನೀಡಲಾಗಿದೆ. ತರಕಾರಿ ಮತ್ತು ದಿನಸಿ ವಸ್ತುಗಳನ್ನು ಹೋಮ್ ಡೆಲಿವರಿ ಮೂಲಕ ಪಡೆದುಕೊಳ್ಳಬಹುದು. ಮದ್ಯ ದಂಗಡಿಗಳು ಬಂದಾಗಲಿವೆ. ಮಂಗಳವಾರ ರಾತ್ರಿ 8 ಗಂಟೆಯವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಸಮಯಾವಕಾಶ ನೀಡಲಾಗಿದೆ. ಮಂಗಳವಾರ ರಾತ್ರಿ 8 ಘಂಟೆಯಿಂದ ಜು. 24 ರವರೆಗೆ ಸಂಪೂರ್ಣ ಲಾಕ್ ಡೌನ್‌ಗೆ ಸಹಕರಿಸಲು ಮನವಿ ಮಾಡಿಕೊಂಡರು.
ಶಾಸಕರ ಆಪ್ತ ಕಾರ್ಯದರ್ಶಿ ನಾಗಪ್ಪ ಶೇಖರಗೋಳ, ಬಿಇಒ ಎ.ಸಿ ಮನ್ನಿಕೇರಿ ಮಾತನಾಡಿದರು. ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.