Mudalagi: ದೇಶ ಆತ್ಮನಿರ್ಭರವಾಗಬೇಕಾದರೆ ರೈತರು ಆತ್ಮನಿರ್ಭರವಾಗಬೇಕು: ಈರಣ್ಣ ಕಡಾಡಿ

Team Udayavani, Oct 24, 2023, 2:34 PM IST

7-mudalagi

ಮೂಡಲಗಿ: ದೇಶ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಿ, ಶತಮಾನದತ್ತ ಸಾಗುತ್ತಿರುವ ಈ ಕಾಲಘಟವು ಅಮೃತ ಕಾಲವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬದ್ದತೆಯ ಪ್ರತಿಬಿಂಬವಾಗಿ ದೇಶ ಆತ್ಮನಿರ್ಭರತೆಯತ್ತ ಸಾಗುತ್ತಿದೆ. ದೇಶ ಆತ್ಮನಿರ್ಭರವಾಗಬೇಕಾದರೆ ದೇಶದ ರೈತರು ಆತ್ಮನಿರ್ಭರವಾಗಬೇಕು ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.

ಮಂಗಳವಾರ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಅಲ್ಲಮಪ್ರಭು ರೈತ ಉತ್ಪಾದಕ ಸಂಸ್ಥೆ(ಎಫ್.ಪಿ.ಒ) ಯನ್ನು ಉದ್ಘಾಟಿಸಿ ಮಾತನಾಡಿದ ಅವರು ರೈತರ ಆರ್ಥಿಕ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಕಿಸಾನ ಸಮ್ಮಾನ್ ನಿಧಿ, ಕಿಸಾನ್ ಮಾನ್ ಧನ್, ಯೂರಿಯಾ ಸಬ್ಸಿಡಿ, ಸಾಯಿಲ್ ಹೆಲ್ತ್ ಕಾರ್ಡ, ಕಿಸಾನ್ ಕ್ರೇಡಿಟ್ ಕಾರ್ಡ, ಕೃಷಿ ಸಿಂಚಾಯಿ, ಕನಿಷ್ಠ ಬೆಂಬಲ ಬೆಲೆ, ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷ, ಕೃಷಿಯಲ್ಲಿ ಡ್ರೋನ್ ತಂತ್ರಜ್ಞಾನದ ಬಳಕೆ, ಒಂದು ಜಿಲ್ಲೆ ಒಂದು ಉತ್ಪನ್ನ, ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಘಟಕಗಳು ಹೀಗೆ ಹಲವಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ರೈತರನ್ನು ಆರ್ಥಿಕ ಸಶಕ್ತರನ್ನಾಗಿ ಮಾಡಲು ಮತ್ತು ರೈತರ ಆದಾಯವನ್ನು ದ್ವಿಗುಣಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಂತಹ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.

ಈ ಎಲ್ಲ ಯೋಜನೆಗಳಿಗೆ ಪೂರಕವಾಗಿ ದೇಶದಲ್ಲಿ 10000 ರೈತ ಉತ್ಪಾದನಾ ಸಂಸ್ಥೆಗಳ ಸ್ಥಾಪನೆ ಮಾಡುವ ಮೂಲಕ ರೈತರ ಉತ್ಪಾದನೆಗಳಿಗೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಒದಗಿಸುವುದು ರೈತ ಉತ್ಪಾದಕ ಸಂಸ್ಥೆಗಳ ಪ್ರಮುಖ ಆದ್ಯತೆಯಾಗಿದೆ. ಹೀಗಾಗಿ ಬರುವ ದಿನಗಳಲ್ಲಿ ರೈತರ ಬದುಕಿನಲ್ಲಿ ರೈತ ಉತ್ಪಾದಕ ಸಂಸ್ಥೆಗಳನ್ನು ಉಳಿಸಿ ಬೆಳೆಸುವ ಸಂಕಲ್ಪ ನಮ್ಮೆಲ್ಲರದಾಗಿದೆ ಎಂದರು.

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಬಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಂಸ್ಥೆಯ ನಿರ್ದೇಶಕರಾದ ಶಂಕರ ಮುದೆಪ್ಪಗೋಳ, ಬಸವರಾಜ ಗಾಡವಿ, ಪುಂಡಲಿಕ ಅರಭಾಂವಿ, ಕೆಂಪಣ್ಣ ಗಡಹಿಂಗ್ಲೆಜ್, ಗುರುಸಿದ್ದಪ್ಪ ಮುರಾರಿ, ಮಲ್ಲಿಕಾರ್ಜುನ ಹುಲೆನ್ನವರ, ಯಮನಪ್ಪ ಬಾಗಾಯಿ, ಶ್ರೀಶೈಲ ತುಪ್ಪದ, ಅಡಿವೆಪ್ಪ ಕುರಬೇಟ, ಶಂಕರ ಗೋರೋಶಿ, ಬಸವರಾಜ ಕಡಾಡಿ, ಶಿವಪ್ಪ ಬಿ.ಪಾಟೀಲ, ಹಣಮಂತ ಸಂಗಟಿ, ಪ್ರಭು ಕಡಾಡಿ, ಸತೀಶ ಪಾಟೀಲ, ಮಲ್ಲಪ್ಪ ಹೆಬ್ಬಾಳ, ಭಗವಂತ ಪಾಟೀಲ, ಸುನೀಲ ಈರೇಶನವರ, ಬಸವರಾಜ ಕರೆಪ್ಪಗೋಳ, ಸೇವಾ ಸಂಸ್ಥೆಯ ಅಧ್ಯಕ್ಷ ಪರಪ್ಪ ಗಿರೆಣ್ಣವರ, ಇಕೋ ಸಂಪನ್ಮೂಲ ಸಂಸ್ಥೆಯ ಯೋಜನಾ ನಿರ್ದೇಶಕ ಆಯ್ ಎನ್. ದೊಡ್ಡಗೌಡರ ಸೇರಿದಂತೆ ಸದಸ್ಯರು ಹಾಗೂ ಪ್ರಗತಿಪರ ರೈತರು, ಕಾರ್ಯಕರ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.