ದೇವಸ್ಥಾನ ಜೀರ್ಣೋದ್ಧಾರ ಅನುದಾನಕ್ಕೆ ಲಂಚ ಪಡೆಯುವಾಗ ಮುಜರಾಯಿ ತಹಶೀಲ್ದಾರ ಎಸಿಬಿ ಬಲೆಗೆ
Team Udayavani, Jan 22, 2022, 11:14 AM IST
ಬೆಳಗಾವಿ: ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಮಂಜೂರಾಗಿದ್ದ ಅನುದಾನ ಬಿಡುಗಡೆಗಾಗಿ ಶೇ. 5ರಷ್ಟು ಲಂಚ ಕೇಳಿದ್ದ ಬೆಳಗಾವಿಯ ಮುಜರಾಯಿ ಇಲಾಖೆ ತಹಶೀಲ್ದಾರ್ ಹಾಗೂ ಇವರ ಸಂಬಂಧಿಯನ್ನು ಭ್ರಷ್ಟಾಚಾರ ನಿರ್ಮೂಲನಾ ದಳ (ಎಸಿಬಿ)ದ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ಶುಕ್ರವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ.
ಮುಜರಾಯಿ ತಹಶೀಲ್ದಾರ ದಶರಥ ನಕುಲ ಜಾಧವ ಹಾಗೂ ಸಂಬಂಧಿ ಸಂತೋಷ ಕಡೋಲಕರ ಬಂಧಿತರು.
ರಾಮದುರ್ಗದ ಶ್ರೀ ಯಕಲಮ್ಮ ದೇವಸ್ಥಾನ ಜೀರ್ಣೋದ್ಧಾರಕ್ಕಾಗಿ ಮುಜರಾಯಿ ಇಲಾಖೆಯ ಆರಾಧನಾ ಸ್ಕೀಂ ಅಡಿಯಲ್ಲಿ ರೂ.4 ಲಕ್ಷ ಮಂಜೂರಾಗಿತ್ತು. ಅನುದಾನ ಬಿಡುಗಡೆಗಾಗಿ ನಕುಲ ಜಾಧವ ಅವರು ರೂ.20 ಸಾವಿರ ಬೇಡಿಕೆ ಇಟ್ಟಿದ್ದರು.
ಲಂಚದ ವಿಚಾರಕ್ಕೆ ಸಂಬಂಧಪಟ್ಟಂತೆ ದೇವಸ್ಥಾನದ ಸುಭಾಷ ಘೋಡಕೆ ಎಂಬವರು ಎಸಿಬಿಗೆ ದೂರು ನೀಡಿದ್ದರು. ದೂರು ಸ್ವೀಕರಿಸಿ ಕಾರ್ಯಾಚರಣೆ ನಡೆಸಿರುವ ಅಧಿಕಾರಿಗಳು ತಹಶೀಲ್ದಾರ ಪರವಾಗಿ ಲಂಚ ಸ್ವೀಕರಿಸುತ್ತಿದ್ದ ಆತನ ಸಂಬಂಧಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಬಂಧಿಸಿದ್ದಾರೆ. ಬಳಿಕ ಇದೇ ಪ್ರಕರಣದಲ್ಲಿ ತಹಶೀಲ್ದಾರ ಜಾಧವ ಅವರನ್ನೂ ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ:ಡಿಸಿಸಿ ಬ್ಯಾಂಕ್‌ನಿಂದ ಬಡ್ಡಿ ರಹಿತ ಸಾಲ ವಿತರಣೆ: ಹೇರೂರ
ಎಸಿಬಿ ಎಸ್ಪಿ ಬಿ.ಎಸ್. ನೇಮಗೌಡ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ಇನ್ಸಪೆಕ್ಟರ್ ಗಳಾದ ಅಡಿವೇಶ ಗುದಿಗೊಪ್ಪ ಹಾಗೂ ಸುನಿಲಕುಮಾರ ಮತ್ತು ಸಿಬ್ಬಂದಿ ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.