ತುಂಬಿ ತುಳುಕುತ್ತಿದೆ ಪ್ರಗತಿಯ ಕೊಡ : ಖಾನಾಪುರ ತಾಲೂಕಿನ ಮಾದರಿ ಗ್ರಾಪಂ


Team Udayavani, Mar 24, 2021, 1:47 PM IST

Untitled-1

ಬೆಳಗಾವಿ: ಪಶ್ವಿ‌ಮ ಘಟ್ಟದ ಸೆರಗಿನಲ್ಲಿರುವ ಖಾನಾಪುರ ತಾಲೂಕಿನ ನಂದಗಡ ಗಾತ್ರದಲ್ಲಿ ಸಣ್ಣ ಗ್ರಾಮ.ಆದರೆ ಸಾಧನೆಯಲ್ಲಿ ಬಹಳ ದೊಡ್ಡದು. ಸರ್ಕಾರದಯೋಜನೆಗಳನ್ನು ಯಾವ ರೀತಿ ಪರಿಣಾಮಕಾರಿಯಾಗಿಜಾರಿ ಮಾಡಬಹುದು. ಗ್ರಾಮದ ಜನರನ್ನು ಅಭಿವೃದ್ಧಿಕಾರ್ಯಗಳಲ್ಲಿ ತೊಡಗಿಸಿಕೊಂಡು ಹೇಗೆ ಯಶಸ್ಸು ಸಾಧಿಸಬಹುದು ಎಂಬುದನ್ನು ನಂದಗಡ ಗ್ರಾಪಂ ಮಾಡಿ ತೋರಿಸಿದೆ.

ನಂದಗಡ ಗ್ರಾಪಂ ಕಚೇರಿ ಮತ್ತು ಆಡಳಿತ ವ್ಯವಸ್ಥೆ ನೋಡಿದರೆ ಗ್ರಾಪಂಗಳ ಬಗ್ಗೆ ಇರುವ ಕಲ್ಪನೆಯೇ ಬದಲಾಗುತ್ತದೆ. ಈ ಪಂಚಾಯಿತಿ ಪ್ರಗತಿಯಜತೆಗೆ ತನ್ನ ಆಡಳಿತ ವೈಖರಿಗೂ ಆಧುನಿಕತೆ ಸ್ಪರ್ಶ ನೀಡಿದೆ. ಪಂಚಾಯತಿ ಆವರಣದಲ್ಲಿ ಮುಖ್ಯ ಕಟ್ಟಡ, ನೀರು ಶುದ್ಧೀಕರಣ ಘಟಕ, ರಾಜೀವ್‌ ಗಾಂಧಿ ಸೇವಾ ಕೇಂದ್ರ, ಬಾಪೂಜಿ ಸೇವಾ ಕೇಂದ್ರ, ವಾಹನಗಳ ನಿಲುಗಡೆಗೆಜಾಗವಿದೆ. ಇದಲ್ಲದೆ ಪಂಚಾಯಿತಿಯಿಂದ ದೇವಸ್ಥಾನ, ಸಮುದಾಯ ಭವನ, ಜಿಮ್‌, ಮಿನಿ ಬಸ್‌ ನಿಲ್ದಾಣ, ಅಧ್ಯಕ್ಷ, ಉಪಾಧ್ಯಕ್ಷರಿಗೆ ಪ್ರತ್ಯೇಕ ಕೊಠಡಿ, ಅತ್ಯಾಧುನಿಕ ಪೀಠೊಪಕರಣ ಅಳವಡಿಕೆ, ಹವಾನಿಯಂತ್ರಿತ ಸಭಾಂಗಣ ಸೌಲಭ್ಯ ಕಲ್ಪಿಸಲಾಗಿದೆ.

ವಾಕಿಟಾಕಿ ಸೌಲಭ್ಯ: ಅರಣ್ಯ ಪ್ರದೇಶವಾಗಿರುವದರಿಂದ ಇಲ್ಲಿ ಮೊಬೈಲ್‌ ನೆಟ್‌ವರ್ಕ್‌ ಸಮಸ್ಯೆ ಇದೆ. ಇದಕ್ಕೂ ಪರಿಹಾರ ಕಂಡುಕೊಂಡಿರುವ ನಂದಗಡ ಗ್ರಾಪಂಸಾರ್ವಜನಿಕರ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಲು ತನ್ನ ಸಿಬ್ಬಂದಿಗೆ ವಾಕಿಟಾಕಿಗಳನ್ನು ಕೊಡಿದೆ. 9,500 ಜನಸಂಖ್ಯೆ ಇದ್ದು, 23 ವಾರ್ಡ್‌ಗಳಿವೆ. ಜನರಿಗೆ ಮೂಲ ಸೌಕರ್ಯಒದಗಿಸುವ ಕಾರ್ಯಕ್ಕೆ ಸಮಸ್ಯೆ ಬರಬಾರದು ಎಂದುಪಂಚಾಯಿತಿಯಲ್ಲಿ ಸಹಾಯವಾಣಿ ಆರಂಭಿಸಲಾಗಿದೆ. ಜನರು ಸಹಾಯವಾಣಿಗೆ ಕರೆ ಮಾಡಿ ಸಮಸ್ಯೆಗಳನ್ನುತಿಳಿಸಿದ ನಂತರ ಸ್ಪಂದಿಸಲು ಅಗತ್ಯ ಸಿಬ್ಬಂದಿ ವಾಕಿಟಾಕಿಬಳಸುತ್ತಿದ್ದಾರೆ. ಗ್ರಾಮದ 25 ಕಿಮೀ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಸಾಮರ್ಥ್ಯದ ತಲಾ 10 ಸಾವಿರ ರೂ.ಗಳ ಐದು ವಾಕಿಟಾಕಿಗಳನ್ನು ಪಂಚಾಯಿತಿಯ ಸ್ವಂತಸಂಪನ್ಮೂಲದಲ್ಲಿ ಖರೀದಿಸಿರುವುದು ವಿಶೇಷ.

ಕಟ್ಟಿಗೆ ಬ್ಯಾಂಕ್‌: ಸುತ್ತಲೂ ಕಾಡಿದ್ದರೂ ಖಾನಾಪುರ ತಾಲೂಕಿನಲ್ಲಿ ಕಟ್ಟಿಗೆ ಕೊರತೆ ಇದೆ. ಮರ ಕಡಿಯಲು ಅರಣ್ಯ ಇಲಾಖೆ ಅನುಮತಿ ಪಡೆಯಬೇಕು.ಇದರಿಂದ ಅಂತ್ಯಕ್ರಿಯೆ ವೇಳೆ ಜನರು ಪರದಾಡುವುದು ಸಾಮಾನ್ಯವಾಗಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ನಂದಗಡ ಪಂಚಾಯಿತಿಯಲ್ಲಿ ಕಟ್ಟಿಗೆ ಬ್ಯಾಂಕ್‌ ಮಾಡಲಾಗಿದ್ದು, ಜನರಿಗೆ ಕಟ್ಟಿಗೆ ಒದಗಿಸಲಾಗುತ್ತಿದೆ.

ಈ ಯೋಜನೆ ರಾಜ್ಯದಲ್ಲೇ ಮೊದಲು ಎಂಬುದು ವಿಶೇಷ. ಗ್ರಾಮದಲ್ಲಿ ಯಾರಾದರೂ ನಿಧನರಾದರೆ ಅಂತ್ಯಕ್ರಿಯೆಗಾಗಿ ಕಟ್ಟಿಗೆ ಹೊಂದಿಸುವುದು ಬಹಳ ಕಷ್ಟದ ಕೆಲಸ. ಇಂತಹ ಸಂದರ್ಭದಲ್ಲಿ ನೆರವಾಗಲು ಸ್ಮಶಾನದಬಳಿಗೇ ಕಟ್ಟಿಗೆ ಪೂರೈಸುವ ಮುಕ್ತಿ ಹೆಸರಿನ ಯೋಜನೆಜಾರಿಗೊಳಿಸಲಾಗಿದೆ. ಶುದ್ಧ ನೀರು ಪೂರೈಕೆ, ತ್ಯಾಜ್ಯನಿರ್ವಹಣೆ, ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆಗಳಲ್ಲಿಮಾದರಿಯಾಗಿದೆ. 60 ಲಕ್ಷ ವೆಚ್ಚದಲ್ಲಿ ಘನತ್ಯಾಜ್ಯವಿಲೇವಾರಿ ಘಟಕ ನಿರ್ಮಿಸಲಾಗಿದೆ. ಸುಮಾರು1850 ಮನೆಗಳಿರುವ ಗ್ರಾಮ ಬಯಲು ಬಹಿರ್ದೆಸೆ ಮುಕ್ತವಾಗಿದೆ. ಅಂತೆಯೇ 2018-19ರಲ್ಲಿ ನಂದಗಡಕ್ಕೆ ಗಾಂಧಿ ಗ್ರಾಮ ಪುರಸ್ಕಾರ ಸಹ ದೊರೆತಿರುವುದು ಹೆಮ್ಮೆಯ ಸಂಗತಿ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನಿರ್ದೇಶನದಂತೆ ಸ್ವತ್ಛ ಭಾರತ ಅಭಿಯಾನದಲ್ಲಿಆಯ್ಕೆಯಾಗಿರುವ ನಂದಗಡದ ತ್ಯಾಜ್ಯನಿರ್ವಹಣೆ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ.ತ್ಯಾಜ್ಯವು ಇಲ್ಲಿ ಕೆಲಸಕ್ಕೆ ಬಾರದ ಕಸದ ಬದಲಾಗಿ ಸಂಪನ್ಮೂಲವಾಗಿದೆ. ಗ್ರಾಮದ ಪ್ರತಿ ಮನೆಗೆತಲಾ ಎರಡೆರಡು ಬಕೆಟ್‌ಗಳನ್ನು ನೀಡಿ ಅದರಲ್ಲಿ ಹಸಿ ಹಾಗೂ ಒಣ ಕಸ ವಿಂಗಡಿಸಿ ಸಂಗ್ರಹಿಸಲಾಗುತ್ತಿದೆ. ನಂತರ ಹಸ ಕಸದಿಂದಗೊಬ್ಬರ ತಯಾರು ಮಾಡಲಾಗುತ್ತಿದೆ ಎನ್ನುತ್ತಾರೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ಕೆ.ಎಸ್‌. ಗಣೇಶ್‌.

ಗ್ರಾಮದಲ್ಲಿನ 532 ವಿದ್ಯುತ್‌ ಕಂಬಗಳಲ್ಲಿಸಾಂಪ್ರದಾಯಿಕ ಬಲ್ಬ್ ಗಳ ಬದಲಿಗೆ ಇಂಧನ ಮಿತವ್ಯಯದ ಎಲ್‌ಇಡಿ ಬಲ್ಬ್ ಅಳವಡಿಸಲಾಗಿದೆ. 13 ವಿದ್ಯುತ್‌ ಮೀಟರ್‌ಗಳಿಗೆ ಸ್ವಯಂ ಚಾಲಿತ ಟೈಮರ್‌ ಅಳವಡಿಸಲಾಗಿದೆ. ನರೇಗಾ ಯೋಜನೆಯಡಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಡಿಜಿಟಲ್‌ ಲೈಬ್ರರಿ ನಿರ್ಮಾಣವಾಗಿದೆ. ಅಂತರ್ಜಾಲ ಸಂಪರ್ಕವಿರುವ ಐದು ಕಂಪ್ಯೂಟರ್‌ಗಳಿವೆ. ಅಂತರ್ಜಾಲ ಸೇವೆಉಚಿತ. ಇದರಿಂದ ವಿದ್ಯಾರ್ಥಿಗಳು, ಶಿಕ್ಷಕರುಹಾಗೂ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳುವವರಿಗೆ ಅನುಕೂಲವಾಗಿದೆ. ಪಂಚಾಯತ್‌ನ ಎಲ್ಲ ವ್ಯವಹಾರವೂ ಗಣಕೀಕೃತವಾಗಿದೆ.

ಪಂಚಾಯಿತಿಯಲ್ಲಿ ನಗದು ರಹಿತ ವಹಿವಾಟು  ಆರಂಭಿಸಲಾಗಿದೆ. ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತವಾಗಿ ಐಡಿ ಕಾರ್ಡ್‌ ವಿತರಿಸಲಾಗಿದೆ.ಅಂಗನವಾಡಿಗಳಿಗೆ ಹೊಸ ರೂಪ ನೀಡಲಾಗಿದೆ.63 ಗಲ್ಲಿಗಳಲ್ಲಿ ನಾಮಫಲಕ ಅಳವಡಿಸಲಾಗಿದೆ.ಸರ್ಕಾರದ ಯೋಜನೆಗಳನ್ನು ಯಾವ ರೀತಿ ಸದುಪಯೋಗ ಪಡಿಸಿಕೊಳ್ಳಬಹುದು ಎಂಬುದರ ಬಗ್ಗೆ ಜನರಿಗೆ ತಿಳಿವಳಿಕೆ ನೀಡಲಾಗುತ್ತದೆ. ಕೆ.ಎಸ್‌ ಗಣೇಶ, ಗ್ರಾಪಂ ಅಭಿವೃದ್ಧಿ ಅಧಿಕಾರಿ, ನಂದಗಡ

 

ಕೇಶವ ಆದಿ

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.