Navage Fire Incident; ಮೃತ ಯುವಕನ ಅವಶೇಷವನ್ನು ಮಡಿಕೆಯಲ್ಲೇ ನೀಡಿದ್ದಾರೆ; ಸ್ಪಷ್ಟನೆ
Team Udayavani, Aug 8, 2024, 3:34 PM IST
ಬೆಳಗಾವಿ: ನಾವಗೆ ಗ್ರಾಮದ ಅಗ್ನಿ ದುರಂತ ಪ್ರಕರಣ ಮೃತ ಕಾರ್ಮಿಕನ ದೇಹದ ಅವಶೇಷ ಮಣ್ಣಿನ ಮಡಕೆಯಲ್ಲಿ ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಲಾಗಿದೆ.
ಬೆಳಗಾವಿ ತಾಲ್ಲೂಕಿನ ನಾವಗೆ ಗ್ರಾಮದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟ ಕಾರ್ಮಿಕ ಯಲ್ಲಪ್ಪ ಸಣ್ಣಗೌಡ ಗುಂಡ್ಯಾಗೋಳ ದೇಹವು ಸಂಪೂರ್ಣ ಸುಟ್ಟು ಬೂದಿಯಾಗಿತ್ತು.
ಈ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ತಂಡವು ಹಿರಿಯ ಪೊಲೀಸ್ ಅಧಿಕಾರಿಯ ಸಮ್ಮುಖದಲ್ಲಿ ಮೃತ ಕಾರ್ಮಿಕ ಯಲ್ಲಪ್ಪನ ದೇಹದ ಅವಶೇಷಗಳನ್ನು ಮುಂದಿನ ಕ್ರಿಯಾಕರ್ಮಗಳಿಗೆ ಅನುಕೂಲವಾಗುವಂತೆ ಸಂಪ್ರದಾಯದಂತೆ ಮಣ್ಣಿನ ಮಡಿಕೆಯಲ್ಲಿ ಹಾಕಿ ತಂದೆಯವರಿಗೆ ಹಸ್ತಾಂತರಿಸಲಾಗಿತ್ತು.
ಮಣ್ಣಿನ ಮಡಕೆಯಲ್ಲಿ ನೀಡಲಾಗಿದ್ದರೂ ಮಳೆ ಬರಬಹುದು ಎಂಬ ಕಾರಣಕ್ಕೆ ಮಡಕೆಯನ್ನು ಪ್ಲ್ಯಾಸ್ಟಿಕ್ ಚೀಲದಲ್ಲಿಟ್ಟುಕೊಂಡು ತರಲಾಯಿತು ಎಂದು ಮೃತ ಕಾರ್ಮಿಕ ಯಲ್ಲಪ್ಪನವರ ತಂದೆ ಸ್ವತಃ ತಿಳಿಸಿದ್ದಾರೆ. ಬೆಳಿಗ್ಗೆ 6 ಗಂಟೆಗೆ ಕುಟುಂಬದ ಸದಸ್ಯರು ಘಟನಾ ಸ್ಥಳಕ್ಕೆ ಆಗಮಿಸಿದ್ದರು.
ರಕ್ಷಣಾ ಕಾರ್ಯಾಚರಣೆ ನಡೆಸಿದ ತಂಡವು ಬೆಳಿಗ್ಗೆ 10 ಗಂಟೆಯ ವೇಳೆಗೆ ಸುಟ್ಟು ಹೋಗಿದ್ದ ಕಾರ್ಮಿಕನ ದೇಹದ ಅವಶೇಷಗಳನ್ನು ಪತ್ತೆ ಮಾಡಿತು.
ಇದಾದ ಬಳಿಕ ಆರೋಗ್ಯ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಪರಿಶೀಲನೆ ಕೈಗೊಂಡು ಮಳೆ ಬರುತ್ತಿದ್ದ ಹಿನ್ನೆಲೆಯಲ್ಲಿ ಮಧ್ಯಾಹ್ನ 12.30 ಗಂಟೆಗೆ ಡಿಸಿಪಿ ಅವರು ಸೇರಿದಂತೆ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿಯೇ ದೇಹದ ಅವಶೇಷಗಳನ್ನು ಮಣ್ಣಿನ ಮಡಕೆಯಲ್ಲಿ ನೀಡಲಾಗಿದೆ ಎಂದು ಮೃತ ಕಾರ್ಮಿಕನ ತಂದೆ ಸ್ವತಃ ಸ್ಪಷ್ಟನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.