![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 6, 2022, 12:33 PM IST
ಬೆಳಗಾವಿ: ಬೆಳಗಾವಿ ಜಿಲ್ಲೆ ನೂತನ ಜಿಲ್ಲಾಧಿಕಾರಿಯಾಗಿ ನಿತೇಶ ಪಾಟೀಲ ಅವರು ಗುರುವಾರ ಅಧಿಕಾರ ವಹಿಸಿಕೊಂಡರು. ನಿಕಟಪೂರ್ವ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಅಧಿಕಾರ ಹಸ್ತಾಂತರಿಸಿ ಶುಭ ಕೋರಿದರು.
ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನವರಾದ ನಿತೇಶ ಪಾಟೀಲ ಅವರು ಇದಕ್ಕೂ ಮುಂಚೆ ಧಾರವಾಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ, ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಸಿ.ಬಿ. ಕೊಡ್ಲಿ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ಇದ್ದರು.
ಮೂಲತಃ ಬೆಳಗಾವಿ ಜಿಲ್ಲೆಯವರೇ ಆಗಿರುವ ನಿಕಟಪೂರ್ವ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರನ್ನು ಕೆ.ಆರ್.ಐ.ಡಿ.ಎಲ್. ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಸರ್ಕಾರ ವರ್ಗಾವಣೆಗೊಳಿಸಿದೆ.
ನೂತನ ಜಿಲ್ಲಾಧಿಕಾರಿ ಪರಿಚಯ: ನಿತೇಶ ಪಾಟೀಲ ಅವರು ಮೂಲತ: ವಿಜಯಪುರ ಜಿಲ್ಲೆ ಸಿಂದಗಿ ತಾಲೂಕು ಕೆರೂಟಗಿ ಗ್ರಾಮದವರು. ಎಸ್ಸೆಸ್ಸೆಲ್ಸಿವರೆಗೆ ವಿಜಯಪುರದಲ್ಲಿ ವ್ಯಾಸಂಗ ಮಾಡಿದ್ದಾರೆ. ಬೆಂಗಳೂರಿನಲ್ಲಿ ಪಿಯುಸಿ, ಬಳಿಕ ಎನ್‌ಐಟಿಟಿ ಅಲಹಾಬಾದ್‌ನಲ್ಲಿ ಬಿಇ (ಕಂಪ್ಯೂಟರ್ ಸೆ„ನ್ಸ್) ಪದವಿ ಪಡೆದರು. ಕೆಲ ಕಾಲ ಸಾಫ್ಟವೇರ್ ಇಂಜಿನೀಯರ್ ಆಗಿ ಸೇವೆ ಸಲ್ಲಿಸಿದ ಬಳಿಕ 2012ರಲ್ಲಿ ಯುಪಿಎಸ್‌ಸಿಯ ನಾಗರಿಕ ಸೇವಾ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಭಾರತೀಯ ಆಡಳಿತ ಸೇವೆಗೆ ಆಯ್ಕೆಯಾದರು. ಪ್ರೊಬೇಷನರಿ ಅವಧಿಯಲ್ಲಿ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಹಾಗೂ ಹಗರಿಬೊಮ್ಮನಹಳ್ಳಿ ತಹಶೀಲ್ದಾರರಾಗಿ, ನಂತರ ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಬಳಿಕ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸೇವೆ ಸಲ್ಲಿಸಿ ವಾಣಿಜ್ಯ ತೆರಿಗೆ ಇಲಾಖೆಯ ಅಪರ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದಾರೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.