ಡಿ. 9 ರ ನಂತರ ಯಾವುದೇ ಪಕ್ಷದ ಜತೆಗೂ ಮೈತ್ರಿ ಮಾಡಿಕೊಳ್ಳಲ್ಲ: ಎಚ್.ಡಿ. ದೇವೇಗೌಡ
Team Udayavani, Dec 2, 2019, 1:00 PM IST
ಬೆಳಗಾವಿ: ಡಿ. 9ರ ನಂತರ ಯಾವುದೇ ಪಕ್ಷದ ಜತೆಗೆ ಮೈತ್ರಿ ಇಲ್ಲ. ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್ ಜತೆಗೆ ಮೈತ್ರಿ ಮಾಡಿಕೊಂಡು ಸಂಕಷ್ಟ ಅನುಭವಿಸಿದ್ದೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಹೇಗೆ ಬಿತ್ತು ಎಂಬುದು ನನಗೆ ಗೊತ್ತು. ನಾವು ಯಾರ ಜತೆಗೆ ಸೇರುವುದಿಲ್ಲ, ಪಕ್ಷ ಕಟ್ಟಿಕೊಳ್ಳುತ್ತೇವೆ ಅಂದರೆ ಸರ್ಕಾರ ಹೋಗುತ್ತಾ. ಸಿದ್ದರಾಮಯ್ಯ, ಕಾಂಗ್ರೆಸ್ ನಾವು ಒಟ್ಟಾಗದಿದ್ದರೆ ಸರ್ಕಾರ ಹೇಗೆ ಬೀಳುತ್ತೆ. ಬಿಜೆಪಿಯವರ ಬಳಿ 105 ಸೀಟ್ ಇವೆ. ನಾವು ಯಾರ ಜತೆಗೂ ಸೇರಲ್ಲ ಅಂದ್ರೆ ಸರ್ಕಾರ ಹೋಗುತ್ತಾ ಎಂದರು.
ಬಿಜೆಪಿ ಮತ್ತು ಕಾಂಗ್ರೆಸ್ ಯಾವುದಕ್ಕೂ ನಾವು ಬೆಂಬಲ ನೀಡುವುದಿಲ್ಲ. ವಿರೋಧ ಪಕ್ಷದ ಸ್ಥಾನದಲ್ಲಿ ನಾವು ಕುಳಿತುಕೊಳ್ಳುತ್ತೇವೆ. ಈಗಾಗಲೇ ಬೆಂಬಲ ನೀಡಿದ್ದಕ್ಕೆ ನಮಗೆ ಸಾಕಾಗಿ ಹೋಗಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್ಸಿಪಿ ಮತ್ತು ಕಾಂಗ್ರೆಸ್ ಮೈತ್ರಿಯಾಗಿ ಸರ್ಕಾರ ಮಾಡಿದ್ದು ಹೊಸ ಪ್ರಯೋಗ. ಐದು ವರ್ಷ ಸರ್ಕಾರ ಸುಭದ್ರವಾಗಿ ನಡೆಯುತ್ತಿದೆಯಾ ಎಂಬುದನ್ನು ಕಾದು ನೋಡಬೇಕಿದೆ ಎಂದು ದೇವೇಗೌಡ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.