ಆನ್‌ಲೈನ್‌ ತರಗತಿ ಆಧರಿಸಿ ಪರೀಕ್ಷೆ ಬೇಡ


Team Udayavani, Jun 6, 2020, 11:05 AM IST

ಆನ್‌ಲೈನ್‌ ತರಗತಿ ಆಧರಿಸಿ ಪರೀಕ್ಷೆ ಬೇಡ

ಬೆಳಗಾವಿ: ಆನ್‌ಲೈನ್‌ ತರಗತಿಗಳ ಆಧಾರದ ಮೇಲೆ ಪರೀಕ್ಷೆಗಳನ್ನು ನಡೆಸಬಾರದು. ಪರೀಕ್ಷೆಗಳ ಮೊದಲು ಅಗತ್ಯವಿರುವ ಕನಿಷ್ಟ ಥಿಯರಿ ಮತ್ತು ಪ್ರಾಯೋಗಿಕ ತರಗತಿಗಳನ್ನು ಖಚಿತಪಡಿಸಿಕೊಳ್ಳಬೇಕು ಹಾಗೂ ಪರೀಕ್ಷಾ ವೇಳಾಪಟ್ಟಿಯನ್ನು ಯೋಜಿಸುವಲ್ಲಿ ಶಿಕ್ಷಣ ತಜ್ಞರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಪ್ರಜಾಸತ್ತಾತ್ಮಕವಾಗಿ ಒಳಗೊಂಡಿರಬೇಕು ಎಂದು ಒತ್ತಾಯಿಸಿ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ರಾಜೀವ್‌ ಗಾಂಧಿ ಆರೋಗ್ಯ ಮತ್ತು ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಮನವಿ ಸಲ್ಲಿಸಿ ಎಲ್ಲಾ ದಂತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿರುವುದಲ್ಲದೆ ವೈದ್ಯಕೀಯ ಆರ್‌ಎಸ್‌ 4ನೇ ಬ್ಯಾಚ್‌ನ (ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ) ತಾತ್ಕಲಿಕ ಪರೀಕ್ಷಾ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸುವ ಬಗ್ಗೆಯೂ ಪ್ರಸ್ತಾಪಿಸಿದೆ.  ಇದರಿಂದ ದಂತ ಮತ್ತು ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿದೆ ಎಂದು ತಮ್ಮ ನೋವು ತೋಡಿಕೊಂಡಿದ್ದಾರೆ.

ಪ್ರಜಾತಾಂತ್ರಿಕ ಮತ್ತು ವೈಜ್ಞಾನಿಕ ಪರಿಹಾರ ಕ್ರಮಕ್ಕಾಗಿ ಪೂರ್ವಾಪೇಕ್ಷಿತವಾಗಿ ಪ್ರಾಯೋಗಿಕತೆಯ ಸಹಾಯದಿಂದ ಸೈದ್ಧಾಂತಿಕ ಪರಿಕಲ್ಪನೆಗಳನ್ನು ಕಲಿಯುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಆನ್‌ಲೈನ್‌ ತರಗತಿಗಳು ಸಮಗ್ರ ಜ್ಞಾನವನ್ನು ನೀಡಲು ಸಾಧ್ಯವಿಲ್ಲ. ಇದು ನಮ್ಮ ಭವಿಷ್ಯದ ವೈದ್ಯರನ್ನು ಸಿದ್ಧಪಡಿಸಲು ಖಂಡಿತವಾಗಿಯೂ ಸಾಧನವಾಗುವುದಿಲ್ಲ ಎಂದು ಮನವಿಯಲ್ಲಿ ಹೇಳಿದ್ದಾರೆ.

ಈ ಅವಧಿಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ವೈಜ್ಞಾನಿಕ ಕಲಿಕೆಯ ವಿಧಾನ, ಪ್ರಯೋಗಾಲಯಗಳು, ಗ್ರಂಥಾಲಯಗಳ ಪ್ರವೇಶದಿಂದ ವಂಚಿತರಾಗುತ್ತಿದ್ದಾರೆ. ಇದಲ್ಲದೇ ಅನೇಕ ಶಿಕ್ಷಣ ತಜ್ಞರ ಅಭಿಪ್ರಾಯದಂತೆ ಆನ್‌ ಲೈನ್‌ ತರಗತಿಗಳ ಆಧಾರದ ಮೇಲೆ ಪರೀಕ್ಷೆಗಳನ್ನು ನಡೆಸುವ ವಿಶ್ವವಿದ್ಯಾನಿಲಯದ ಈ ನಿರ್ಧಾರವು ತಾರತಮ್ಯದ ಕ್ರಮವಾಗಿದೆ. ಆನ್‌ಲೈನ್‌ ತರಗತಿಗಳ ಪರಿಚಯದೊಂದಿಗೆ ಹೆಚ್ಚಿನ ಬಡ ವಿದ್ಯಾರ್ಥಿಗಳನ್ನು ಈ ಕಲಿಕೆಯ ಪ್ರಕ್ರಿಯೆಯಿಂದ ಹೊರಹಾಕಲಾಗುತ್ತಿದೆ ಎಂದು ಎಐಡಿಎಸ್‌ಓ ಆರೋಪಿಸಿದೆ. ಈ ಕಾರಣಗಳಿಂದಾಗಿ ಅನೇಕ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳ ಭವಿಷ್ಯವು ಅಪಾಯದಲ್ಲಿದೆ. ಅದ್ದರಿಂದ ಇಂತಹ ತರಾತುರಿ ಕ್ರಮವನ್ನು ಕೈಗೊಳ್ಳದಂತೆ ಎಐಡಿಎಸ್‌ಓ ಸಂಘಟನೆ ಹಾಗೂ ದಂತ ವೈದ್ಯಕೀಯ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಈ ವರ್ಷದ ಪರೀಕ್ಷಾ ವೇಳಾಪಟ್ಟಿ ಮತ್ತು ಶೈಕಣಿಕ ವೇಳಾ ಪಟ್ಟಿಯನ್ನು ಯೋಜಿಸುವಲ್ಲಿ, ಶಿಕ್ಷಣ ತಜ್ಞರು, ಉಪನ್ಯಾಸಕರು, ವಿದ್ಯಾರ್ಥಿಗಳೂ ಪ್ರಜಾತಾಂತ್ರಿಕವಾಗಿ ಒಳಗೊಳ್ಳುವಂತೆ ವಿಶ್ವವಿದ್ಯಾನಿಲಯವು ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

ಬೆಳಗಾವಿ:ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಕರ್ನಾಟಕ ವಿರುದ್ಧ 218 ರನ್‌ ಹಿನ್ನಡೆಯಲ್ಲಿ ಚಂಡೀಗಢ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

Australia vs Pakistan T20: ಪಾಕ್‌ ವಿರುದ್ಧ ಆಸೀಸ್‌ಗೆ 2-0 ಸರಣಿ ಜಯ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.