ಬೆಳಗಾವಿಯಲ್ಲಿ ಲಾಕ್ ಡೌನ್ ಮಾಡುವುದಿಲ್ಲ: ಸಚಿವ ರಮೇಶ್ ಜಾರಕಿಹೊಳಿ
Team Udayavani, Jul 20, 2020, 2:44 PM IST
ಬೆಳಗಾವಿ: ಕೋವಿಡ್-19 ಸೋಂಕು ತಡೆಯುವ ನಿಟ್ಟಿನಲ್ಲಿ ಈಗಾಗಲೇ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿ ಮಾಡುವ ಉದ್ದೇಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸ್ಪಷ್ಟಪಡಿಸಿದರು.
ನಗರದಲ್ಲಿ ಸೋಮವಾರ ಕೋವಿಡ್ ನಿಯಂತ್ರಣ ಕುರಿತು ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸೋಂಕು ನಿವಾರಣೆಗೆ ಲಾಕ್ ಡೌನ್ ಉತ್ತರ ಅಲ್ಲ. ಜನರು ಸರಕಾರದೊಂದಿಗೆ ಸಹಕರಿಸಬೇಕು. ಬೆಳಗಾವಿ ಲಾಕ್ ಡೌನ್ ಮಾಡುವ ಮುನ್ನ ಸಾಧಕ ಬಾದಕಗಳ ಬಗ್ಗೆ ಚರ್ಚೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಕೋವಿಡ್ ವೈರಸ್ ತಡೆಗಟ್ಟುವಲ್ಲಿ ಜಿಲ್ಲಾಡಳಿತ ಸತತವಾಗಿ ಶ್ರಮಿಸುತ್ತಿದೆ. ಬೆಳಗಾವಿ ಲಾಕ್ ಡೌನ್ ಮಾಡುವುದು ಒಂದೇ ಕ್ರಮವಲ್ಲ. ಸರಕಾರ, ಜಿಲ್ಲಾಡಳಿತದೊಂದಿಗೆ ಸಾರ್ವಜನಿಕರು ಸಹಕರಿಸಬೇಕು. ಲಾಕ್ ಡೌನ್ ಮಾಡಿ ಸೋಂಕು ನಿಯಂತ್ರಣ ಸಾಧ್ಯವೇ ಎಂದು ಈಗಾಗಲೇ ನೋಡಿದ್ದೇವೆ. ಜನರು ಸಹಕಾರ ಕೊಡುವುದು ಅಗತ್ಯವಾಗಿದೆ ಎಂದು ಹೇಳಿದರು.
ಕೊವೀಡ್-19 ದೊಡ್ಡ ರೋಗ ಅಲ್ಲ. ಜನರಲ್ಲಿ ಭಯ ಬಿಳಿಸುವ ಅಗತ್ಯ ಇಲ್ಲ. ಕೋವಿಡ್ ಸೋಂಕಿತರಲ್ಲಿ ಎ ಬಿ ಸಿ ಎಂದು ವಿಂಗಡನೆ ಮಾಡಲಾಗಿದೆ. ಎ ಕೆಟಗರಿ ಸೋಂಕಿತರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಸೂಚಿಸಲಾಗಿದೆ ಎಂದರು.
ಬಿಮ್ಸ್ ದಲ್ಲಿ ಕಳೆದ ಮೂರು ದಿನಗಳಿಂದ ನಡೆದ ಘಟನೆಗಳ ಬಗ್ಗೆ ಮಾಹಿತಿ ಪಡೆಯಲಾಗಿದ್ದು ಇಂತಹ ಘಟನೆಗಳು ಮರುಕಳಿಸದಂತೆ ಸೂಚನೆ ನೀಡಲಾಗಿದೆ ಎಂದರು.
ಅಂಬ್ಯುಲೆನ್ಸ್ ಕೊರತೆಯಿದ್ದರೆ ನಗರದಲ್ಲಿರುವ ಮ್ಯಾಕ್ಸಿಕ್ಯಾಬ್ ಗಳನ್ನು ಬಳಸಿಕೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಬಿಮ್ಸ್ ನಲ್ಲಿ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದ ನಿರ್ದೇಶನ ನೀಡಲಾಗಿದೆ ಎಂದರು.
ಶಾಸಕ ಮಹೇಶ ಕುಮಠಳ್ಳಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ನಗರ ಪೊಲೀಸ್ ಆಯುಕ್ತ ತ್ಯಾಗರಾಜನ್, ಎಸ್ಪಿ ಲಕ್ಷ್ಮಣ ನಿಂಬರಗಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.