Loksabha; ನಮ್ಮ ಕುಟುಂಬದಿಂದ ಈ ಬಾರಿ ಯಾರಿಗೂ ಟಿಕೆಟ್ ಇಲ್ಲ: ಸತೀಶ್ ಜಾರಕಿಹೊಳಿ
Team Udayavani, Feb 22, 2024, 4:02 PM IST
ಬೆಳಗಾವಿ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪುತ್ರಿ ಪ್ರಿಯಂಕಾ ಸ್ಪರ್ಧೆ ಮಾಡುವದಿಲ್ಲ. ಸಾಮಾನ್ಯ ಕಾರ್ಯಕರ್ತರಿಗೆ ಚಿಕ್ಕೋಡಿ ಭಾಗದಿಂದ ಟಿಕೆಟ್ ಕೊಡಬೇಕು ಎಂಬ ನಿರ್ಧಾರ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಚಿಕ್ಕೋಡಿಯಲ್ಲಿ ಚಿಂಗಳೆ, ಬುಟಾಳೆ, ಗಜಾನನ ಸೇರಿದಂತೆ ಸಾಕಷ್ಟು ಆಕಾಂಕ್ಷಿಗಳಿದ್ದಾರೆ. ಅಲ್ಲದೇ ಕ್ರೀಯಾಶೀಲ ಕಾರ್ಯಕರ್ತರು ಇರುವಾಗ ಈ ಭಾಗದಲ್ಲಿ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧೆ ಮಾಡುವುದಿಲ್ಲ ಎಂದರು.
ಬೆಳಗಾವಿ ಹಾಗೂ ಚಿಕ್ಕೋಡಿ ಭಾಗದಲ್ಲಿ ಯಾರಿಗೆ ಟಿಕೆಟ್ ಕೊಡಬೇಕು ಎಂದು ಈಗಾಗಲೇ ಎರಡು ಕ್ಷೇತ್ರಕ್ಕೆ ತಲಾ ಇಬ್ಬರ ಹೆಸರು ಪೈನಲ್ ಮಾಡಲಾಗಿದೆ. ಅಂತಿಮ ತಿರ್ಮಾಣವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದರು.
ಈ ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಕಣಕ್ಕೆ ಇಳಿಸಬೇಕು ಎಂಬ ಚರ್ಚೆ ನಡೆದಿರುವುದು ಸತ್ಯ. ಆದರೆ ನಿಷ್ಠಾವಂತ ಕಾರ್ಯಕರ್ತರಿಗೂ ಅವಕಾಶ ನೀಡಬೇಕೆಂಬ ಉದ್ದೇಶದಿಂದ ನಾನು ಕಣಕ್ಕೆ ಇಳಿಯುತ್ತಿಲ್ಲ ಎಂದು ಸ್ಪಷ್ಟ ಪಡಿಸಿದರು.
ಮುಖ್ಯವಾಗಿ ನಮ್ಮ ಕ್ಷೇತ್ರದಲ್ಲಿ ಈ ಬಾರಿ ಮಹಿಳೆಯರಿಗೆ ಅವಕಾಶವಿಲ್ಲ ಎಂದು ಸ್ಪಷ್ಟನೆ ನೀಡಿದರು.
ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿರುವ ನಗರದ ತಿನಿಸು ಕಟ್ಟೆ ಅಕ್ರಮ ಮಳಿಗೆ ನಿರ್ಮಾಣದ ತನಿಖೆ ಒಂದು ಹಂತಕ್ಕೆ ಬಂದಿದೆ. ಅಧಿಕಾರಿ ಮಟ್ಟದಲ್ಲಿ ಸಹ ಚರ್ಚಿಸಿ ನೋಟಿಸ್ ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.