ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ,ಸಾಮೂಹಿಕ ಚರ್ಚೆಯಾಗಲಿ: ಹಿಂದೂ ಹೇಳಿಕೆಗೆ ಜಾರಕಿಹೊಳಿ ಸಮರ್ಥನೆ
Team Udayavani, Nov 8, 2022, 1:53 PM IST
ಬೆಳಗಾವಿ: ‘ಹಿಂದೂ’ ಪದದ ಬಗ್ಗೆ ವಿವಾದಿತ ಹೇಳಿಕೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಮತ್ತೆ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅಲ್ಲದೆ ತಾನು ಹೇಳಿದ್ದು ತಪ್ಪೆಂದು ಸಾಬೀತು ಮಾಡಿದರೆ ಕ್ಷಮೆ ಮಾತ್ರವಲ್ಲ, ರಾಜೀನಾಮೆ ಕೊಡಲು ಸಿದ್ದ ಎಂದಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಎಷ್ಟು ಜನ ನಾವು ಹೇಳಿದ್ದನ್ನು ಅರ್ಥ ಮಾಡಿಕೊಂಡಿದ್ದಾರೆ. ಅಶ್ಲೀಲ ಎಂಬ ಪದದಿಂದ ತಮಗೆ ಬೇಕಾದ ಹಾಗೆ ಓದಿದ್ದಾರೆ. ಹಿಂದೂ ಶಬ್ದ ಪರ್ಶಿಯನ್ ಶಬ್ದ ಅದಕ್ಕೆ ದಾಖಲೆ ಇದೆ ವಿಕಿಪೀಡಿಯಾದಲ್ಲಿ ನೋಡಬಹುದೆಂದು ಹೇಳಿದ್ದೇನೆ. ಕೆಟ್ಟ ಶಬ್ದ ಬಳಸಿದ್ದು ಡಿಕ್ಷನರಿಯಲ್ಲಿದೆ, ಆ ಡಿಕ್ಷನರಿ 1963ರಲ್ಲಿ ಪ್ರಿಂಟ್ ಆಗಿದ್ದು. ನಾನು ಇದರ ಬಗ್ಗೆ ಚರ್ಚೆಯಾಗಬೇಕೆಂದು ಹೇಳಿದ್ದೇನೆ. ಅಶ್ಲೀಲವಾಗಿ ಅಂತಾ ಇದ್ದಿದ್ದು ಆ ಡಿಕ್ಷನರಿಯಲ್ಲಿ ಇದೆ ಎಂದು ಸಮರ್ಥನೆ ಮಾಡಿಕೊಂಡರು.
ವಿಕಿಪೀಡಿಯಾದಲ್ಲಿ ಇದ್ದಿದ್ದನ್ನು ನಾನು ಹೇಳಿದ್ದೇನೆ. ವಿಕಿಪೀಡಿಯದಲ್ಲಿ ಯಾರಾದರೂ ಬರೆಯಬೇಕಿದ್ದರೂ ಅದಕ್ಕೆಂದು ಸಮಿತಿಯಿದೆ. ಹಾಗೇ ಅದನ್ನು ಅಪ್‌ಲೋಡ್ ಮಾಡಬಹುದು. ನಾವು ಯಾರ ಬಗ್ಗೆಯೂ ಮಾತನಾಡಲ್ಲ. ನಿಮ್ಮ ಪ್ಯಾನಲ್ ನಲ್ಲಿ ಚರ್ಚೆ ಮಾಡಿ, ಯಾರು ಬೇಕಾದರೂ ಬರಲಿ ನನ್ನ ನಿಲುವನ್ನು ಹೇಳುತ್ತೇನೆ. ನಾನು ತಪ್ಪು ಹೇಳಿದ್ದೇನೆಂದು ಪ್ರೂವ್ ಮಾಡಿದರೆ ಕ್ಷಮೆ ಅಷ್ಟೇ ಅಲ್ಲ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದರು.
ಇದನ್ನೂ ಓದಿ:ಬೆಳ್ತಂಗಡಿ: ಪೆರಾಲ್ದರಕಟ್ಟೆಯಲ್ಲಿ ಜನ ಜಾನುವಾರುಗಳ ಮೇಲೆ ಹುಚ್ಚು ನಾಯಿ ದಾಳಿ; ಹಲವರಿಗೆ ಗಾಯ
ವಾಜಪೇಯಿಯವರು ಸಹ ಹಿಂದೂ ಪದ ಪರ್ಷಿಯನ್ ನಿಂದ ಬಂದಿದ್ದೆಂದು ಹೇಳಿದ್ದಾರೆ. ನಾವು ಯಾವುದೇ ಜಾತಿ ನೋಡಿ ಕೆಲಸ ಮಾಡಲ್ಲ ಎಂದ ಅವರು, ನೀವು ‘ಹಿಂದೂನಾ ಎಂಬ ಮಾಧ್ಯಮಗಳ ಪ್ರಶ್ನೆಗೆ ‘ನಾನು ಭಾರತೀಯ’ ಎಂದರು.
ಸತೀಶ್ ಜಾರಕಿಹೊಳಿ ಅರೆ ಬರೆ ಓದಿಕೊಂಡಿದ್ದಾರೆ ಎಂಬ ಸಿಎಂ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನಾನು ಅರೆಬರೆ ಓದಿಕೊಂಡಿಲ್ಲ. ನಾವು ಹಿಂದೂಗೆ ಎಲ್ಲಿ ಅವಮಾನ ಮಾಡಿದ್ದೀವಿ ಸಾಬೀತು ಮಾಡಬೇಕು. ಹಿಂದೂ ಪದ ಪರ್ಷಿಯನ್‌ನಿಂದ ಬಂದಿದ್ದು ಎಂದು ಹಲವು ಬಿಜೆಪಿ ನಾಯಕರೇ ಮಾತನಾಡಿದ್ದಾರೆ. ವ್ಯವಸ್ಥಿತವಾಗಿ ಇದನ್ನ ಷಡ್ಯಂತ್ರ ಮಾಡುತ್ತಿದ್ದಾರೆ. ನನ್ನ ಹೇಳಿಕೆ ಸುರ್ಜೇವಾಲಾ ಖಂಡನೆ ಮಾಡಿದ್ದಾರೆ ಅವರು ನಮಗಿಂತ ಹಿರಿಯರು ಆಕ್ಷೇಪ ಮಾಡಲ್ಲ ಎಂದರು.
ನಾವು ಕ್ಷಮೆ ಕೇಳುವ ಪ್ರಶ್ನೆ ಇಲ್ಲ, ಸಿಎಂ ಬೊಮ್ಮಾಯಿ ಬೇಕಾದರೆ ಒಂದು ಕಮಿಟಿ ಮಾಡಲಿ. ನಿಮ್ಮ ಕಡೆ ಏನಾದರೂ ಸರಿಯಾದ ದಾಖಲೆ ಇದ್ದರೆ ಮುಂದುವರಿಸಿ. ಅವರದ್ದೇ ಸರ್ಕಾರ ಇದೆ, ಸಿಎಂ ತನಿಖೆ ಮಾಡಲಿ ಒಂದು ಕಮಿಟಿ ಮಾಡಿ ಸತ್ಯಾಸತ್ಯತೆ ಹೊರ ಬರಲಿ. ಬೇರೆ ಪುಸ್ತಕಗಳಲ್ಲಿ ಉಲ್ಲೇಖ ಇದೆ, ವಿಕಿಪೀಡಿಯಾದಲ್ಲಿ ಇದೆ ಅಂತಾ ಸುರ್ಜೆವಾಲಾರಿಗೂ ತಿಳಿಸಿದ್ದೇನೆ. ನಾನು ಚುನಾವಣೆ ದೃಷ್ಟಿಯಿಂದ ಹೇಳಿದ್ದಲ್ಲ. ಈ ಬಗ್ಗೆ ಸಾಮೂಹಿಕ ಚರ್ಚೆ ಮಾಡಲಿ. ನಾಲ್ಕು ಜನ ಚರ್ಚೆ ಮಾಡಿದ್ದನ್ನು ನಾವು ಒಪ್ಪಿಕೊಳ್ಳಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.