ಉ.ಕ.ನಿರ್ಲಕ್ಷ್ಯ: 31ರಂದು ಧರಣಿ


Team Udayavani, Jul 24, 2018, 6:35 AM IST

jagadis.jpg

ಬೆಳಗಾವಿ: “ಅಭಿವೃದ್ಧಿ ಹಾಗೂ ಸೌಲಭ್ಯದ ವಿಷಯದಲ್ಲಿ ಉತ್ತರ ಕರ್ನಾಟಕವನ್ನು ನಿರ್ಲಕ್ಷé ಮಾಡುವ ಮೂಲಕ ಸರ್ಕಾರವೇ ಜನರಲ್ಲಿ ಪ್ರತ್ಯೇಕತೆಯ ಭಾವನೆ ಮೂಡಿಸುತ್ತಿದೆ’ ಎಂದು ಆರೋಪಿಸಿರುವ ಮಠಾಧೀಶರು, ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಹಾಗೂ ಸುವರ್ಣಸೌಧ ಸಕ್ರಿಯಗೊಳಿಸಬೇಕು ಎಂದು ಒತ್ತಾಯಿಸಿ ಉತ್ತರ ಕರ್ನಾಟಕದ ಮಠಾಧೀಶರು ಜು.31ರಂದು ಸುವರ್ಣ ಸೌಧದ ಎದುರು ಸಾಂಕೇತಿಕ ಧರಣಿ ನಡೆಸಲು ನಿರ್ಧರಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಗನೂರು ರುದ್ರಾಕ್ಷಿಮಠದ ಡಾ| ಸಿದ್ಧರಾಮ ಸ್ವಾಮೀಜಿ, “ಅಖಂಡ ಕರ್ನಾಟಕದ ಏಕೀಕರಣಕ್ಕಾಗಿ ಹೋರಾಡಿದ ಉತ್ತರ ಕರ್ನಾಟಕದ ಜನರಿಗೆ ಪ್ರತ್ಯೇಕ ರಾಜ್ಯವೇ ಬೇಕು ಎಂಬ ಉದ್ದೇಶ ಇಲ್ಲ. ಆದರೇ ಇದುವರೆಗೆ ಆಡಳಿತ ನಡೆಸಿರುವ ಸರ್ಕಾರಗಳು ಈ ಭಾಗವನ್ನು ನಿರಂತರವಾಗಿ ನಿರ್ಲಕ್ಷಿಸಿವೆ. ಈ ಭಾಗದ ಬಗ್ಗೆ ಸರ್ಕಾರಕ್ಕೆ ಗಮನವೇ ಇಲ್ಲ ಎಂದರು. 

“ಸುವರ್ಣ ವಿಧಾನಸೌಧಕ್ಕೆ ಸರ್ಕಾರದ ಮುಖ್ಯ ಕಚೇರಿಗಳು ಸ್ಥಳಾಂತರ ಆಗಬೇಕು ಎಂದು ಅದು ಉದ್ಘಾಟನೆಗೊಂಡಾಗಿನಿಂದ ಒತ್ತಾಯ ಮಾಡುತ್ತಲೇ ಬರಲಾಗಿದೆ. ಆದರೆ ಅಲ್ಲಿಗೆ ಕಚೇರಿಗಳ ಸ್ಥಳಾಂತರವಾದರೆ ಆದಾಯ ಕಡಿಮೆಯಾಗುತ್ತದೆ ಎಂಬ ಕಾರಣದಿಂದ ಇಲ್ಲಿಗೆ ಕಚೇರಿಗಳನ್ನು ತರುತ್ತಿಲ್ಲ. ಈ ರೀತಿಯ ಅನ್ಯಾಯವನ್ನು ಎಷ್ಟು ದಿನ ಸಹಿಸಬೇಕು’ ಎಂದರು.

ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯರು ಮಾತನಾಡಿ, “ಉತ್ತರ ಕರ್ನಾಟಕದ ಬಗ್ಗೆ ಎಲ್ಲರೂ ಮಾತನಾಡುತ್ತಾರೆ. ಆದರೆ, ಏನೂ ಆಗಿಲ್ಲ. ಅಖಂಡ ಕರ್ನಾಟಕ ಹಾಗೆಯೇ ಉಳಿಯಬೇಕು ಎಂಬ ಇಚ್ಛೆ ಇದ್ದರೂ ಅನ್ಯಾಯ ಎದ್ದು ಕಾಣುತ್ತದೆ. ಈ ಭಾಗದ ಶಾಸಕರು ಗಟ್ಟಿ ದನಿ ಎತ್ತಿ ಆಗಿರುವ ಅನ್ಯಾಯ ಸರಿಪಡಿಸಬೇಕು’ ಎಂದರು.

ನಿಡಸೋಸಿ ಮಠದ ಪಂಚಮಲಿಂಗೇಶ್ವರ ಸ್ವಾಮೀಜಿ ಮಾತನಾಡಿ, “ಉತ್ತರ ಕರ್ನಾಟಕವನ್ನು ಅಭಿವೃದ್ಧಿಪಡಿಸುವಂತೆ ಆಗ್ರಹಿಸಿ, 4 ದಶಕಗಳಿಂದ ನಿರಂತರ ಹೋರಾಟ ನಡೆಯುತ್ತಿದ್ದರೂ ಯಾವ ಸರ್ಕಾರಗಳೂ  ಗಮನ ಹರಿಸಿಲ್ಲ. ಈ ಭಾಗದ ನೀರಾವರಿ ಯೋಜನೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ’ ಎಂದರು.

ಕಾರಂಜಿಮಠದ ಗುರುಸಿದ್ದ ಸ್ವಾಮೀಜಿ, ನಿಜಗುಣ ದೇವರು, ವಿಜಯಪುರದ ಸಿದ್ದಾರೂಢ ಸ್ವಾಮೀಜಿ, ಜಮಖಂಡಿಯ ಸಾವಳಗೀಶ್ವರ ಸ್ವಾಮೀಜಿ, ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಮುಖಂಡ ಅಶೋಕ ಪೂಜಾರಿ, ಕಲ್ಯಾಣರಾವ ಮುಚಳಂಬಿ, ಆರ್‌.ಎಸ್‌. ದರ್ಗೆ, ನಾಗೇಶ ಗೋಲಶೆಟ್ಟಿ, ದೀಪಕ ರಾಯಣ್ಣವರ, ಮಹೇಶ ಪೂಜಾರಿ ಇದ್ದರು.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರಿಂದ ಉ.ಕ.ಕ್ಕೆ ಅನ್ಯಾಯವಾಗಿಲ್ಲ ಎಂಬುದರ ಕುರಿತು ಮಾಜಿ ಶಾಸಕ ವೈ.ಎಸ್‌.ವಿ.ದತ್ತಾ ಬಿಡುಗಡೆ ಮಾಡಿರುವ ದಾಖಲೆಗಳು ನನಗೆ ತಲುಪಿಲ್ಲ. ದಾಖಲೆ ದೊರೆತರೆ ಬಹಿರಂಗ ಚರ್ಚೆಗೆ ಸಿದ್ಧ.  ಜೆಡಿಎಸ್‌ ನಾಯಕರು ಮೊದಲು ಹೊಸದಾಗಿ ರಚನೆಯಾಗಿರುವ ತಾಲೂಕುಗಳಿಗೆ ಅನುದಾನ ಕೊಡಿಸುವ ಪ್ರಯತ್ನ ಮಾಡಲಿ.
– ಜಗದೀಶ್‌ ಶೆಟ್ಟರ್‌, ಮಾಜಿ ಮುಖ್ಯಮಂತ್ರಿ

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.